ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲ : ಎಂಬಿ ಪಾಟೀಲ್‌

Team Udayavani, Jul 7, 2017, 3:45 AM IST

MB-07.jpg

ಬೆಂಗಳೂರು: ಕಾವೇರಿ ನದಿಗೆ ತಮಿಳು ನಾಡು ಗಡಿ ಭಾಗದಲ್ಲಿ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಸಾಕಷ್ಟು ಅನುಕೂಲ ಇದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿ ಸಿದ್ದಪಡಿಸಿ ಕೇಂದ್ರ ಜಲ ಆಯೋಗಕ್ಕೆ ಅನುಮತಿಗಾಗಿ ಕಳುಹಿಸಿಕೊಟ್ಟಿದ್ದೇವೆ. ಜೊತೆಗೆ ಅರಣ್ಯ ಇಲಾಖೆಯ ಅನುಮತಿಗೂ ಪ್ರಯತ್ನ ನಡೆಸಿದ್ದೇವೆ ಎಂದರು.

ಆದರೆ, ಯೋಜನೆ ಜಾರಿ ಕುರಿತು ಸುಪ್ರೀಂ ಕೋರ್ಟ್‌ಗೆ ಇನ್ನೂ ಮಾಹಿತಿ ನೀಡಿಲ್ಲ. ರಾಜ್ಯ ಕಾನೂನು ತಂಡದ ಅಭಿಪ್ರಾಯ ಪಡೆದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಈ ಯೋಜನೆಯಿಂದ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆ ಹಿಡಿಯುವುದರಿಂದ ಬೆಂಗಳೂರು ಸೇರಿದಂತೆ ಸುತ್ತಲಿನ ನಗರಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಆಗುವುದಷ್ಟೆ ಅಲ್ಲದೇ ಕಾವೇರಿ ನ್ಯಾಯ ಮಂಡಳಿ ಆದೇಶದಂತೆ ತಮಿಳು ನಾಡಿಗೆ ಪ್ರತಿ ತಿಂಗಳು ನೀರು ಬಿಡುವುದಕ್ಕೂ ಅನುಕೂಲವಾಗಲಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿಧಿವಶವಾಗದಿದ್ದರೆ, ಅವರಿಗೆ ಈ ಯೋಜನೆ ಸಾಧಕ ಬಾಧಕಗಳ ಕುರಿತು ನೇರವಾಗಿಯೇ ಭೇಟಿಯಾಗಿ ವಿವರಣೆ ನೀಡುತ್ತಿದ್ದೆ. ಈಗಲೂ ತಮಿಳು ನಾಡು ಜನತೆಗೆ ಯೋಜನೆಯ ಅನುಕೂಲತೆಯ ಬಗ್ಗೆ ಮನವರಿಕೆ ಮಾಡಿ ಕೊಡುವ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.

ಕೋರ್ಟ್‌ ಆದೇಶ ಪಾಲನೆಗೆ ತಮಿಳು ನಾಡಿಗೆ ನೀರು: ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳು ನಾಡಿಗೆ ನೀರು ಬಿಡುತ್ತಿರುವುದನ್ನು ಸಮರ್ಥಿಸಿಕೊಂಡ ಸಚಿವ ಎಂ.ಬಿ. ಪಾಟೀಲ್‌, ರಾಜ್ಯದ ರೈತರ ಹಿತ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಆದರೆ, ಸುಪ್ರೀಂ ಕೋರ್ಟ್‌ ಆದೇಶ ಪಾಲನೆ ಮಾಡದಿದ್ದರೆ, ಮುಂದೆ ವಿಚಾರಣೆ ವೇಳೆ ದೀರ್ಘಾವಧಿಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲಿದೆ. ಜುಲೈ 10 ರಂದು ಸುಪ್ರೀಂ ಕೋರ್ಟ್‌ ಎದುರು ಕಾವೇರಿ ವಿವಾದ ಕುರಿತು ವಿಚಾರಣೆ ಬರಲಿದೆ. ಆ ಸಂದರ್ಭದಲ್ಲಿ ರಾಜ್ಯಸರ್ಕಾರ ಸಮರ್ಥವಾಗಿ ವಾದ ಮಾಡಲು ಈಗ ನೀರು ಬಿಡುವುದು ಅನಿವಾರ್ಯ ಎಂದರು.

ಮಳೆಗಾಲ ಆರಂಭದಲ್ಲಿ ಜೂನ್‌ ತಿಂಗಳಿಂದ ಸೆಪ್ಟಂಬರ್‌ ವರೆಗೆ ತಮಿಳುನಾಡಿಗೆ 134 ಟಿಎಂಸಿ ನೀರು ಬಿಡಬೇಕು. ನಮಗೆ ಅದೇ ದೊಡ್ಡ ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮುಂದೆ ಇದನ್ನೇ ವಿರೋದ ಮಾಡುತ್ತಿದೆ. ಜೂನ್‌ ತಿಂಗಳಲ್ಲಿ 34 ಟಿಎಂಸಿ ನೀರು ಕೆಆರ್‌ಎಸ್‌ಗೆ ಬಂದರೆ 10 ಟಿಎಂಸಿ ನೀರು ಬಿಡಬೇಕು. ಆದರೆ, ಇದುವರೆಗೂ ಕೆಆರ್‌ಎಸ್‌ಗೆ ಕೇವಲ 11 ಟಿಎಂಸಿ ನೀರು ಬಂದಿದೆ. ಅವರಿಗೆ 10 ಟಿಎಂಸಿ ನೀರು ಹೇಗೆ ಬಿಡಲು ಸಾಧ್ಯ. ಜುಲೈ ನಲ್ಲಿ 34 ಟಿಎಂಸಿ, ಆಗಸ್ಟ್‌ನಲ್ಲಿ 51 ಟಿಎಂಸಿ, ಸೆಪ್ಟಂಬರ್‌ನಲ್ಲಿ 20 ಟಿಎಂಸಿ ನೀರು ಬಿಡುವಂತೆ ಆದೇಶ ಮಾಡಲಾಗಿದೆ. ನಮ್ಮ ಜಲಾಶಯಕ್ಕೇ ನೀರು ಬರದಿದ್ದಾಗ ತಮಿಳುನಾಡಿಗೆ ಹೇಗೆ ನೀರು ಬಿಡುವುದು ಎಂದು ಪ್ರಶ್ನಿಸಿದರು.

ಇದೇ ವೇಳೆ, ಕಾವೇರಿ ಕೊಳ್ಳದ ರೈತರು ವಸ್ತು ಸ್ಥಿತಿಯನ್ನು ಅರ್ಥ ಮಾಡಿಕೊಳ್ಲಬೇಕು ಎಂದು ಮನವಿ ಮಾಡಿದ ಅವರು, ಮಾಧ್ಯಮಗಳೂ ಸಹ ರೈತರಿಗೆ ವಾಸ್ತವ ಅರಿವು ಮೂಡಿಸಬೇಕೆಂದು ಮನವಿ ಮಾಡಿದರು.  ಉತ್ತರ ಕರ್ನಾಟಕ ಭಾಗದ ಜಲಾಶಯಗಳು ಭರ್ತಿಯಾಗುತ್ತಿವೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆ ಹೆಚ್ಚಾಗಿದೆ. ಇನ್ನೂ ಮಳೆ ಆಗುವ ವಿಶ್ವಾಸ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.