ದಂಡು ಜಂಕ್ಷನ್‌: ಪಾದಚಾರಿಗಳಿಗೆ ಟೆನ್ಶನ್‌

Team Udayavani, Apr 5, 2019, 11:54 AM IST

blore-1
ಬೆಂಗಳೂರು: ಕಂಟೋನ್ಮೆಂಟ್‌ ರೈಲು ನಿಲ್ದಾಣದ ಜಂಕ್ಷನ್‌ ಸುತ್ತ ಕನಿಷ್ಠ ಮೂಲ ಸೌಲಭ್ಯಗಳು ಇಲ್ಲದೆ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. 4 ದಿಕ್ಕುಗಳಿಂದ ವಾಹನಗಳು ಬಂದು ಸೇರುವ ಪ್ರಮುಖ ಜಂಕ್ಷನ್‌ನಲ್ಲಿ ದಟ್ಟಣೆ ಉಂಟಾಗುವುದು ಒಂದೆಡೆಯಾದರೆ, ಪಾದಚಾರಿಗಳು ಒಂದು ಕಡೆಯಿಂದ ಮತ್ತೂಂದು ಕಡೆ ನಡೆದು ಹೋಗಲಾಗದ ಪರಿಸ್ಥಿತಿಯಿದೆ. ಇರುವ ಪಾದಚಾರಿ ಮಾರ್ಗ ಕೆಲವಡೆ ಮೂತ್ರ ವಿಸರ್ಜನೆಗೆ ಬಳಕೆಯಾದರೆ, ಮತ್ತೆ ಕೆಲವೆಡೆ ಮಳಿಗೆಗಳನ್ನು
ನಿರ್ಮಿಸಿಕೊಳ್ಳಲಾಗಿದೆ.
ದಂಡು ರೈಲು ನಿಲ್ದಾಣಕ್ಕೆ ಮಿಲ್ಲರ್ ರಸ್ತೆ, ಮೌಂಟ್‌ ಕಾರ್ಮೆಲ್‌ ಕಾಲೇಜು ಹಾಗೂ ಹೈಗ್ರೌಂಡ್‌ ಪೊಲೀಸ್‌ ಠಾಣೆ ಕಡೆಯಿಂದ ಬರುವ ರಸ್ತೆಗಳ ಪಾದಚಾರಿ ಮಾರ್ಗಗಳು ಉತ್ತಮ ಸ್ಥಿತಿಯಲ್ಲಿವೆ. ಆದರೆ, ಒಂದು ಬದಿಯ ಮಾರ್ಗವನ್ನು ಬಹುತೇಕ ಕಡೆ ವ್ಯಾಪಾರಿಗಳು ವಾಹನ ನಿಲುಗಡೆಗೆ ಬಳಸುತ್ತಿದ್ದು, ಜಯಮಹಲ್‌ ಕಡೆಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಅಂಡರ್‌ಪಾಸ್‌ನಿಂದ ರೈಲು ನಿಲ್ದಾಣದವರೆಗೆ ಪಾದಚಾರಿ ಮಾರ್ಗವೇ ಇಲ್ಲ! ಮಿಲ್ಲರ್ ರಸ್ತೆ, ಮೌಂಟ್‌ ಕಾರ್ಮೆಲ್‌ ಕಾಲೇಜು ಹಾಗೂ ಅಂಬೇಡ್ಕರ್‌ ಭವನ ಕಡೆಯಿಂದ ರೈಲು ನಿಲ್ದಾಣ ತಲುಪಬೇಕಾದರೆ, ಕನಿಷ್ಠ 10 ನಿಮಿಷ ಬೇಕು. ನಾಲ್ಕೂ ರಸ್ತೆಗಳಲ್ಲಿ ಸಿಗ್ನಲ್‌ ಅಳವಡಿಸ ಲಾಗಿದೆ. ಆದರೆ, ಒಂದಲ್ಲ ಒಂದು ಸಿಗ್ನಲ್‌ ಬಿಟ್ಟು ವಾಹನಗಳು ಮೂರು ದಿಕ್ಕುಗಳಿಗೆ ಚಲಿಸುವುದ ರಿಂದ ಜನ ರಸ್ತೆ ದಾಟಲು ಪರದಾಡುತ್ತಾರೆ.
ಬಯಲಲ್ಲೇ ಮೂತ್ರ ವಿಸರ್ಜನೆ: ದಂಡು ರೈಲು ನಿಲ್ದಾಣಕ್ಕೆ ನಿತ್ಯ ಹತ್ತಾರು ಸಾವಿರ ಜನರು ಬಂದು ಹೋಗುತ್ತಾರೆ. ಆದರೆ, ನಿಲ್ದಾಣದ ಹೊರಗೆ ನಾಲ್ಕು ಕಮೋಡ್‌ ಇರುವ ಶೌಚಗೃಹವಿದ್ದು, ನಿರ್ವಹಣೆ ಸಮರ್ಪಕವಾಗಿಲ್ಲ. ಸುತ್ತ 500 ಮೀಟರ್‌ ವ್ಯಾಪ್ತಿಯಲ್ಲಿ ಒಂದೂ ಶೌಚಾಲಯ ಇಲ್ಲದ ಕಾರಣ, ಜನ ಬಯಲಲ್ಲೇ ಮೂತ್ರ ಮಾಡುತ್ತಾರೆ ಮೇಲ್ಸೇತುವೆ ನಿರ್ಮಾಣ ನಿಧಾನ ದಂಡು ರೈಲು ನಿಲ್ದಾಣದ ಬಳಿ ಪಾದಚಾರಿ ಮೇಲ್ಸೇತುವೆ ನಿರ್ಮಿಸುವ ಕೆಲಸ ಆರಂಭಿಸಿ ಹಲವು ತಿಂಗಳು ಕಳೆದರೂ ಕಾಮಗಾರಿ ವೇಗ ಪಡೆದುಕೊಂಡಿಲ್ಲ. ಜತೆಗೆ ಇದು ಕೇವಲ ಒಂದು ರಸ್ತೆ ಮಾತ್ರ ದಾಟಲು ನಿರ್ಮಿಸುತ್ತಿರುವುದರಿಂದ ಹೆಚ್ಚಿನ ಅನುಕೂಲವಾಗುವುದಿಲ್ಲ.
ಸಮಸ್ಯೆಗೆ ಶಾಶ್ವತ ಪರಿಹಾರವೇನು?
ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಕಾರಣ ರೈಲು ನಿಲ್ದಾಣಕ್ಕೆ ಸಂಪರ್ಕಿಸುವ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಪಾಲಿಕೆ ಮುಂದಾಗಬೇಕು. ಅದರಂತೆ ನಾಲ್ಕು ರಸ್ತೆಗಳಿಂದ ಬರುವ ಜನರಿಗೆ ಅನುಕೂಲವಾಗುವಂತೆ ಒಂದು
ನಿರ್ದಿಷ್ಟ ಸ್ಥಳದಿಂದ ನಿಲ್ದಾಣದವರೆಗೆ ಸುರಕ್ಷಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಬೇಕು.
ಜಂಕ್ಷನ್‌ ಸಮೀಪವಿರುವ ಪ್ರಮುಖ ಸಂಸ್ಥೆ, ಭವನಗಳು ಅಂಬೇಡ್ಕರ್‌ ಭವನ, ದೇವರಾಜ ಅರಸು ಭವನ, ಭಗವಾನ್‌
ಮಹಾವೀರ ಆಸ್ಪತ್ರೆ, ಜಯಮಹಲ್‌, ನೈರುತ್ಯ ರೈಲ್ವೆ ಆರೋಗ್ಯ ಕೇಂದ್ರ, ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆ, ಮೌಂಟ್‌ ಕಾರ್ಮೆಲ್‌ ಕಾಲೇಜು, ಮಜೀದ್‌ ಎ ಖಾದ್ರಿ, ದೂರದರ್ಶನ ಚಂದನ, ಜುಮ್ಮಾ ಮಸೀದಿ, ವಿವಿಧ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳ ಜತೆ, ಯು.ಟಿ.ಖಾದರ್‌, ವೆಂಕಟರಮಣ ನಾಡಗೌಡ, ಜಮೀರ್‌ ಅಹಮದ್‌ ಖಾನ್‌ ಸೇರಿ ಪ್ರಮುಖರ ನಿವಾಸಗಳಿವೆ.
ಅಡ್ಡಾದಿಡ್ಡಿ ನುಗ್ಗುವ ವಾಹನಗಳು ಜಂಕ್ಷನ್‌ನಲ್ಲಿ ವಾಹನಗಳು ಅಡ್ಡಾದಿಡ್ಡಿ ನುಗ್ಗುವುದರಿಂಧ ಪಾದಚಾರಿಗಳು ತೊಂದರೆ ಅನುಭವಿಸುತ್ತಾರೆ. ದ್ವಿಚಕ್ರ ವಾಹನ ಸವಾರರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಇಲ್ಲಿ ಸಾಮಾನ್ಯ. ಜಯಮಹಲ್‌ ರಸ್ತೆಯಿಂದ ಬರುವ ವಾಹನಗಳು ರೈಲ್ವೆ ಅಂಡರ್‌ಪಾಸ್‌ನಿಂದ ಬಂದು ಎಡ ತಿರುವು ಪಡೆಯುವ ಸ್ಥಳದಲ್ಲಿ ಮೌಂಟ್‌ ಕಾರ್ಮೆಲ್‌ ಹಾಗೂ ಅಂಬೇಡ್ಕರ್‌ ಭವನದ ಕಡೆಯಿಂದ ಬಂದು ಫ್ರೆಜರ್‌ಟೌನ್‌ ಕಡೆಗೆ ಹೋಗುವ ವಾಹನಗಳೂ ಸೇರುತ್ತವೆ. ಜತೆಗೆ ಜಯಮಹಲ್‌ ನಿಂದ ಬರುವ ವಾಹನಗಳು ಸಹ ಅದೇ ಮಾರ್ಗದಲ್ಲಿ ಯುಟನ್‌ ಪಡೆಯುತ್ತಿದ್ದು, ತೀವ್ರ ದಟ್ಟಣೆ ಉಂಟಾಗುತ್ತದೆ.
ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.