ತನ್ವೀರ್ ಸೇಠ್ ಕಚೇರಿಗೆ ನುಗ್ಗಿ ಪ್ರಾಣ ಬೆದರಿಕೆ
Team Udayavani, Apr 12, 2017, 12:22 PM IST
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಕಚೇರಿಗೆ ನುಗ್ಗಿದ ಗುಂಪೊಂದು, ಸಚಿವರಿಗೆ ಪ್ರಾಣ ಬೆದರಿಕೆ ಹಾಕಿದ ಘಟನೆ ಮಂಗಳವಾರ ನಡೆದಿದೆ. ಘಟನೆ ಸಂಬಂಧ ಮೈಸೂರು ಮೂಲದ ದಲಿತ ಮುಖಂಡರು ಎಂದು ಹೇಳಲಾದ ಶಾಂತರಾಜು, ನಾಗರಾಜು, ಶೈಲೆಂದ್ರ ಮೋಹನ್, ಪ್ರದೀಪ್ ಸೇರಿ 8 ಮಂದಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಶೇ.50 ಅಂಕ ಪಡೆದಿರುವ ಪರಿಶಿಷ್ಟ ಜಾತಿ, ವರ್ಗಗಳ ಅಭ್ಯರ್ಥಿ ಗಳಿಗೆ ಪಿಯುಸಿ ಉಪನ್ಯಾಸಕರ ನೇಮಕದಲ್ಲಿ ಅವಕಾಶ ನೀಡದಿರು ವುದಕ್ಕೆ ಆಕ್ರೋಶ ವ್ಯಕ್ತಡಿಸಿದ ಆರೋಪಿಗಳು, ಸಚಿವ ತನ್ವೀರ್ ಸೇಠ್ ಜತೆ ಅಸಭ್ಯವಾಗಿ ವರ್ತಿಸಿದ ಲ್ಲದೆ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಚಿವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ.
ವಿಧಾನಸೌಧದ ಸಚಿವರ ಕೊಠಡಿಗೆ ನುಗ್ಗಿದ 8 ಮಂದಿ, ನೇಮಕಾತಿ ವಿಚಾರವಾಗಿ ಚರ್ಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಈ ನಿರ್ಣಯ ಕೈಗೊಳ್ಳುವುದು ಕಷ್ಟ ಸಾಧ್ಯ ಎಂದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಗುಂಪು, ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ “ಮೈಸೂರಿಗೆ ಬಾ ನೋಡಿಕೊಳ್ಳುತ್ತೇವೆ’ ಎಂದು ಪ್ರಾಣ ಬೆದರಿಕೆಯನ್ನೂ ಹಾಕಿ ಹೋಗಿದೆ.
ಈ ಹಿನ್ನೆಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ರಮಿಕುಮಾರ್ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳು ವಂತೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 352, 353 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
Delhi; ಈಗ ಟೈಂ ಬಾಂಬ್! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ
Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.