Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Team Udayavani, Jan 1, 2025, 10:48 AM IST
ಬೆಂಗಳೂರು: ಹೊಸ ವರ್ಷ ಸಂದರ್ಭದಲ್ಲಿ ನಡೆಯುವ ಪಾರ್ಟಿಗಳಿಗೆ ಪೂರೈಕೆ ಮಾಡಲೆಂದೇ ಥೈಯ್ಲೆಂಡ್‌ನಿಂದ ಹೈಡ್ರೋ ಗಾಂಜಾ ಹಾಗೂ ನೆರೆ ರಾಜ್ಯಗಳಿಂದ ಸಿಂಥೆಟಿಕ್ ಡ್ರಗ್ಸ್‌ಗಳನ್ನು ತರಿಸಿ ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಯಲಹಂಕ ನಿವಾಸಿ ರಕ್ಷಿತ್(31) ಬಂಧಿತ.
ಈತನ ಸಹಚರ ತವನೀಶ್ ಅಲಿಯಾಸ್ ಈಶಾ ಎಂಬಾತ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಆರೋಪಿಯಿಂದ 2.50 ಕೋಟಿ ರೂ. ಮೌಲ್ಯದ 3 ಕೆ.ಜಿ 55 ಗ್ರಾಂ ಹೈಡ್ರೋ ಗಾಂಜಾ, 16 ಕೆ.ಜಿ ಗಾಂಜಾ, 40 ಎಲ್‌ಎಸ್‌ಡಿ ಸ್ಟ್ರಿಪ್ಸ್, 130 ಗ್ರಾಂ ಚರಸ್, 2.23 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಿಕೊಳ್ಳಲಾಗಿದೆ.
**********************************************************************************************************
Bengaluru: ಪಬ್‌ಗಳಿಗೆ ಸಿಂಥೆಟಿಕ್ ಡ್ರಗ್ ಮಾರುತ್ತಿದ್ದ 6 ಮಂದಿ ಬಂಧನ:
ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಪಬ್‌ಗಳು ಹಾಗೂ ಪಾರ್ಟಿಗಳಲ್ಲಿ ಭಾಗಿಯಾಗುವವರಿಗೆ ಸಿಂಥೆಟಿಕ್ ಡ್ರಗ್ಸ್‌ಗಳ ಮಾರಾಟಕ್ಕೆ ಮುಂದಾಗಿದ್ದ 6 ಮಂದಿಯನ್ನು ನಗರದ 4 ಠಾಣೆಗಳ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ಬಂಧಿಸಿದ್ದಾರೆ.
12.70 ಲಕ್ಷ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಅಮೃತಹಳ್ಳಿಯ ವರ್ಮಾ ಲೇಔಟ್‌ನಲ್ಲಿ ಕೇರಳ ಮೂಲದ ಶಾನ್‌ವಿನ್ ಶಾಜಿ ಮುಥುನ್ನಿ(24) ಎಂಬಾತನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆಗಳಿಂದ ಮಾದಕ ವಸ್ತು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆದಿಲ್ (28), ಅಫ್ತಾಬ್ ಖಾನ್(25)ನನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿದ್ದಾರೆ.
ಮೂವರು ಐಟಿಐ ವಿದ್ಯಾರ್ಥಿಗಳನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದು ಇವರಿಂದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್ ಹಕ್ಕು ಸಾಧಿಸುವಂತಿಲ್ಲ
Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.