ಮಾಹಿತಿ ಸೋರಿಕೆ ಬಳಿಕ ತೆರಿಗೆ ಸಂಗ್ರಹ ಇಳಿಕೆ
Team Udayavani, Dec 13, 2022, 12:04 PM IST
ಬೆಂಗಳೂರು: ಮತದಾರರ ಮಾಹಿತಿ ಸೋರಿಕೆ ಪ್ರಕರಣ ಪತ್ತೆ ಯಾದ ನಂತರದಿಂದ ಬಿಬಿಎಂಪಿ ತೆರಿಗೆ ಸಂಗ್ರಹದಲ್ಲಿ ಭಾರಿ ಕುಂಠಿತವಾಗಿದ್ದು, ಈವರೆಗೆ ಕೇವಲ 2,680 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಅದರಲ್ಲೂ ಕಳೆದ 10 ದಿನಗಳಿಂದೀಚೆಗೆ ಕೇವಲ 15ರಿಂದ 20 ಕೋಟಿ ರೂ. ಮಾತ್ರ ತೆರಿಗೆ ಸಂಗ್ರಹಿಸಲಾಗಿದೆ.
ಬಿಬಿಎಂಪಿಯ ಆರ್ಥಿಕ ಪರಿಸ್ಥಿತಿ ಸದೃಢಗೊಳಿಸುವ ಸಲು ವಾಗಿ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಕೋಟಿ ರೂ. ಆಸ್ತಿ ತೆರಿಗೆ ಸಂಗ್ರ ಹಿಸುವ ಗುರಿ ಹೊಂದಲಾಗಿದೆ. ಈ ಗುರಿಯನ್ನು ಶೇ. 100ರಷ್ಟು ಮುಟ್ಟುವ ಸಲುವಾಗಿ ಅಕ್ಟೋಬರ್ ತಿಂಗಳಲ್ಲಿ ವಿಶೇಷ ಅಭಿ ಯಾನವನ್ನೂ ನಡೆಸಲಾಗಿದೆ. ಅಕ್ಟೋಬರ್ 15ರ ವೇಳೆಗೆ 2,497 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿತ್ತು. ಆದರೆ, ಡಿಸೆಂಬರ್ 12ರ ವೇಳೆಗೆ ಆ ಮೊತ್ತ 2,600 ಕೋಟಿ ರೂ.ಗೆ ಏರಿಕೆಯಾಗಿದೆ. ಇದನ್ನು ಗಮನಿಸಿದರೆ ಅಕ್ಟೋಬರ್ ತಿಂಗಳಿನಿಂದ ಈವರೆಗೆ ಕೇವಲ 100 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಅದರಲ್ಲೂ ಕಳೆದ 10 ದಿನಗಳಿಂದೀಚೆಗೆ ತೆರಿಗೆ ಸಂಗ್ರಹ ಬಹುತೇಕ ಸ್ಥಗಿತಗೊಂಡಿದೆ.
ಚುನಾವಣಾ ಕೆಲಸದಲ್ಲಿ ಬ್ಯುಸಿ: ತೆರಿಗೆ ಸಂಗ್ರಹಿಸಬೇಕಿದ್ದ ಬಿಬಿ ಎಂಪಿಯ ಆರ್‌ಒ, ಎಆರ್‌ಒ, ತೆರಿಗೆ ನಿರೀಕ್ಷಕರು ಮತದಾರರ ಪಟ್ಟಿ ಪರಿಷ್ಕರಣೆ ಸೇರಿ ಇನ್ನಿತರ ಚುನಾವಣಾ ಕೆಲಸದಲ್ಲಿ ನಿರತ ರಾಗಿದ್ದಾರೆ. ಅದರಲ್ಲೂ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಾಗಿದೆ ಎಂಬ ಆರೋಪಗಳು ಕೇಳಿಬಂದ ನಂತರ ಎಲ್ಲ ಆರ್‌ಒ, ಎಆರ್‌ಒಗಳನ್ನು ಮತದಾರರ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇದರಿಂದಾಗಿ ಆಸ್ತಿ ತೆರಿಗೆ ಸಂಗ್ರಹ ಸೇರಿ ಬಿಬಿಎಂಪಿ ತೆರಿಗೆ ವಿಭಾಗಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನೂ ಮಾಡದ ಪರಿಸ್ಥಿತಿಯಲ್ಲಿ ಕಂದಾಯ ಅಧಿಕಾರಿಗಳಿಗೆ ಚುನಾ ವಣಾ ಕೆಲಸದ ಒತ್ತಡ ಹೆಚ್ಚುವಂತಾಗಿದೆ.
ಸುಳ್ಳು ಮಾಹಿತಿ ನೀಡಿದವರ ಪರಿಶೀಲನೆಯೂ ಇಲ್ಲ: ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ಸುಳ್ಳು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದವರ ಪತ್ತೆಗಾಗಿ ಬಿಬಿಎಂಪಿ ಕಂದಾಯ ವಿಭಾಗ, ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಪಡೆದ ಮಾಹಿತಿ ಯನ್ನು ಪಡೆದು ತುಲನೆ ಮಾಡುವ ಕೆಲಸಕ್ಕೆ ಮುಂದಾಗಿತ್ತು. ಅದರಲ್ಲಿ 25 ಸಾವಿರ ಆಸ್ತಿಗಳು ವಾಣಿಜ್ಯ ಕಟ್ಟಡಗಳಾಗಿದ್ದರೂ ವಸತಿ ಕಟ್ಟಡವೆಂದು ಬಿಬಿಎಂಪಿಗೆ ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿರುವುದು ಪತ್ತೆಯಾಗಿತ್ತು. ಈ ವಂಚನೆಯಿಂದಾಗಿ 130 ಕೋಟಿ ರೂ. ತೆರಿಗೆ ಸೋರಿಕೆಯಾಗಿರುವುದು ತಿಳಿದು ಬಂದಿತ್ತು. ಹೀಗೆ ಪತ್ತೆಯಾದ ಆಸ್ತಿಗಳ ವಿಳಾಸ, ಆಸ್ತಿ ಮಾಲೀ ಕರು ಹೆಸರು ಬೆಸ್ಕಾಂ ನೀಡಿರುವ ಮಾಹಿತಿಯೊಂದಿಗೆ ಸರಿ ಹೊಂದುತ್ತದೆಯೇ ಎಂಬ ಕುರಿತಂತೆ ಪರಿಶೀಲನೆ ನಡೆಸುವ ಕಾರ್ಯವೂ ಮಾಡದಂತಾಗಿದೆ.
ಫ್ಲೆಕ್ಸ್ ಅಳವಡಿಸಿದವರ ಕ್ರಮಕ್ಕೂ ತಡೆ: ಬಿಬಿಎಂಪಿ ಮಾಹಿತಿ ಪ್ರಕಾರ ಪ್ರಸಕ್ತ ವರ್ಷದಲ್ಲಿ 14 ಸಾವಿರಕ್ಕೂ ಹೆಚ್ಚಿನ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಆದರೆ, ಈವರೆಗೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಿದವರ ವಿರುದ್ಧ ಪೊಲೀಸ್ ಠಾಣೆ ಗಳಲ್ಲಿ ಕೇವಲ 20 ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ, ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದವರಿಂದ 1.45 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಹೀಗಾಗಿ ಕೆಲದಿನಗಳ ಹಿಂದೆ ಹೈಕೋರ್ಟ್ ಕೂಡ ಬಿಬಿಎಂಪಿ ವಿರುದ್ಧ ಗರಂ ಆಗಿದ್ದಲ್ಲದೇ, ಫ್ಲೆಕ್ಸ್-ಬ್ಯಾನರ್ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದರೆ, ಕಂದಾಯ ವಿಭಾಗದ ಸಿಬ್ಬಂದಿ, ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆ ಪಾಲನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಿದವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡುವುದು ಮತ್ತು ದಂಡ ವಸೂಲಿ ಮಾಡಲೂ ಸಾಧ್ಯವಾಗದಂತಾಗಿದೆ.
ಬಿಬಿಎಂಪಿ ಕಂದಾಯ ವಿಭಾಗದ ಅಧಿಕಾರಿ, ಸಿಬ್ಬಂದಿ ಮತದಾರರ ಪಟ್ಟಿ ಪರಿಷ್ಕರಣೆ ಸೇರಿ ಚುನಾವಣೆಗೆ ಸಂಬಂಧಿಸಿದ ಇನ್ನಿತರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರಣದಿಂದಾಗಿ ತೆರಿಗೆ ಸಂಗ್ರಹದಲ್ಲಿ ಇಳಿಕೆಯಾಗಿದೆ. ಹಾಗೆಯೇ, ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಚುನಾವಣಾ ಆಯೋಗ ಸೂಚಿಸಿದ ಕೆಲಸ ಮುಗಿದ ನಂತರ ತೆರಿಗೆ ಸಂಗ್ರಹಕ್ಕೆ ವೇಗ ನೀಡಲಾಗುವುದು. -ಡಾ|ಆರ್.ಎಲ್.ದೀಪಕ್, ಬಿಬಿಎಂಪಿ ವಿಶೇಷ ಆಯುಕ್ತ
-ಗಿರೀಶ್ ಗರಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.