ತಂತ್ರಜ್ಞಾನ, ವೈಜ್ಞಾನಿಕವಾಗಿ ಪ್ರಕರಣಗಳ ತನಿಖೆ ಅಗತ್ಯ
Team Udayavani, Mar 1, 2020, 3:06 AM IST
ಯಲಹಂಕ: ಪೊಲೀಸ್ ಅಧಿಕಾರಿಗಳು ವೈಜ್ಞಾನಿಕ ವಿಧಾನಗಳ ಮೂಲಕ ಸಾಕ್ಷ್ಯ ಸಂಗ್ರಹಿಸಿ ಪ್ರಕರಣಗಳ ತನಿಖೆ ನಡೆಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ನಾಲ್ಕನೇ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಿಗೆ ವೈಜ್ಞಾನಿಕ ತನಿಖೆಯ ಮಾಹಿತಿಗಳನ್ನು ಒದಗಿಸಬೇಕಿರುವುದರಿಂದ ಪೊಲೀಸರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಕಳ್ಳರು ಮತ್ತು ಅಪರಾಧಿಗಳು ಪೊಲೀಸರಿಗಿಂತಲೂ ಬುದ್ದಿವಂತರಾಗಿದ್ದು, ಮುಂದಿನ ಹತ್ತು ವರ್ಷಗಳಲ್ಲಿ ಮನೆಗಳ್ಳತನ, ದರೋಡೆ ಕೃತ್ಯಗಳು ಕಡಿಮಯಾಗಿ, ಸೈಬರ್ ಕ್ರೈಂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಆರೋಪಿಗಳಿಗಿಂತ ಹತ್ತು ಪಟ್ಟು ತಂತ್ರಜ್ಞಾನ ತಿಳಿದುಕೊಳ್ಳಬೇಕು. ನೈಪುಣ್ಯತೆ ಹೊಂದಬೇಕು.
ಈ ದಿಸೆಯಲ್ಲಿ ಇಂತಹ ಕರ್ತವ್ಯಕೂಟ ತುಂಬಾ ಮುಖ್ಯವಾಗಿದ್ದು, ಇದು ಕೇವಲ ತಂಡದ ಆಯ್ಕೆಗೆ ಮಾತ್ರ ಸೀಮಿತವಾಗಿರದೆ, ಇಲ್ಲಿ ಕಲಿತಿರುವ ಕೌಶಲ್ಯವನ್ನು ತಮ್ಮ ಜಿಲ್ಲೆ ಮತ್ತು ವಲಯಗಳಲ್ಲಿ ಉಪಯೋಗಿಸಿ ಎಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ.ಎಸ್.ಪರಶಿವಮೂರ್ತಿ, ಎಫ್‌ಎಸ್‌ಎಲ್ ನಿರ್ದೇಶಕ ವಿನಾಯಕ ಪಾಟೀಲ್ ಇತರರು ಇದ್ದರು.
350 ಮಂದಿ ಭಾಗಿ: ಪಾರಿತೋಷಕ ವಿತರಣೆ: ಕೂಟದಲ್ಲಿ ಪೊಲೀಸ್ ಕಾನ್ಸ್‌ಟೆಬಲ್‌ಗಳು, ಇನ್‌ಸ್ಪೆಕ್ಟರ್ ಸೇರಿ ರಾಜ್ಯದಾದ್ಯಂತ 350 ಜನ ಮಂದಿ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು. ವೈಜ್ಞಾನಿಕ ವಿಧಾನದ ತನಿಖೆ, ಪೊಲೀಸ್ ಫೋಟೋಗ್ರಫಿ, ವಿಡಿಯೋಗ್ರಫಿ, ಕಂಪ್ಯೂಟರ್ ಜಾಗೃತಿ, ಶ್ವಾನದಳ, ಬೆರಳಚ್ಚು ವಿಭಾಗಗಲ್ಲಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಂಸನಾ ಪತ್ರ, ಮೆಡಲ್ ಹಾಗೂ ಪಾರಿತೋಷಕ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.