ತೇಜಸ್ವಿನಿ ಸಮಾಧಾನಕ್ಕೆ ನಿಂತ ಸಂಘ

Team Udayavani, Mar 30, 2019, 2:26 PM IST

tejaswini

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಲು ಕಾರಣ ನೀಡದಿರುವ ಬಗ್ಗೆ ಅಸಮಾಧಾನಗೊಂಡಿರುವ ತೇಜಸ್ವಿನಿ ಅನಂತ ಕುಮಾರ್‌ ಅವರನ್ನು ಆರ್‌ಎಸ್‌ಎಸ್‌ ಹಿರಿಯ ಮುಖಂಡರು ಭೇಟಿಯಾಗಿ ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದು, ಕುತೂಹಲ ಮೂಡಿದೆ.

ಈ ನಡುವೆ ತೇಜಸ್ವಿನಿ ಅನಂತ ಕುಮಾರ್‌ ಅವರಿಗೆ ಅವಕಾಶ ತಪ್ಪಿರುವುದಕ್ಕೆ ಬೇಸರಗೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತುಕತೆ ನಡೆಸಿ ಮನವೊಲಿಸಿದರು. ನಂತರ ಪ್ರಚಾರಕ್ಕೆ ತೆರಳುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎನ್ನಲಾಗಿದೆ.

ಗುರುವಾರ ತಮ್ಮನ್ನು ಭೇಟಿಯಾದ ರಾಜ್ಯ ಬಿಜೆಪಿ ಚುನಾವಣಾ ಪ್ರಭಾರಿ ಮುರಳೀಧರರಾವ್‌ ಅವರ ಬಳಿ ತಮ್ಮ ಅಸಮಾಧಾನ ತೋಡಿಕೊಂಡಿದ್ದ ತೇಜಸ್ವಿನಿ ಅವರು, ಸ್ಪರ್ಧೆಗೆ ಅವಕಾಶ ನೀಡದಿರಲು ಕಾರಣ ತಿಳಿಸುವಂತೆ ಪಟ್ಟು ಹಿಡಿದಿದ್ದರು.

ಇದರಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದ ಮುರಳೀಧರರಾವ್‌, ಬಳಿಕ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರನ್ನೂ ಭೇಟಿಯಾಗಿದ್ದರು. ಅವರು ಸಹ ತೇಜಸ್ವಿನಿ ಅವರಿಗೆ ಅವಕಾಶ ಕೈತಪ್ಪಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಗೊತ್ತಾಗಿದೆ. ಇದರಿಂದಾಗಿ ವರಿಷ್ಠರ ಮಟ್ಟದಿಂದಲೇ ಅವರ ಮನವೊಲಿಸುವ ಪ್ರಯತ್ನ ನಡೆದಿದೆ.

ಆರ್‌ಎಸ್‌ಎಸ್‌ ಮುಖಂಡರ ಭೇಟಿ: ಆರ್‌ಎಸ್‌ಎಸ್‌ ಮುಖಂಡರಾದ ಮುಕುಂದ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಸೇರಿದಂತೆ ಇತರೆ ಪ್ರಮುಖರು ಶುಕ್ರವಾರ ಸಂಜೆ ಜಯನಗರದಲ್ಲಿ ತೇಜಸ್ವಿನಿ ಅನಂತ ಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ತೇಜಸ್ವಿನಿ ಅವರು ತಮಗೆ ಸ್ಪರ್ಧೆ ಅವಕಾಶ ನೀಡದಿರುವುದಕ್ಕೆ ಕಾರಣವೇನೆಂದು ತಿಳಿಸಬೇಕು ಎಂದು ಹೇಳಿದರು. ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಅಂತಿಮವಾಗಿ ಪ್ರಚಾರದಲ್ಲಿ ಪಾಲ್ಗೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಮುಖಂಡರು ಮನವಿ ಮಾಡಿದರು. ಈ ಬಗ್ಗೆ ತೇಜಸ್ವಿನಿ ಅವರು ಸ್ಪಷ್ಟ ನಿರ್ಧಾರ ತಿಳಿಸಿದಂತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ನಡುವೆ ಪ್ರತಿಕ್ರಿಯೆ ನೀಡಿದ ಆರ್‌.ಅಶೋಕ್‌, “ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರ ಹೆಸರನ್ನಷ್ಟೇ ಶಿಫಾರಸು ಮಾಡಲಾಗಿತ್ತು. ಆದರೆ, ಅಭ್ಯರ್ಥಿ ಬದಲಾಗಿದ್ದಾರೆ. ನಮಗೆ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ರಾಜ್ಯದ ಎಲ್ಲ 28 ಕ್ಷೇತ್ರಗಳಿಗೂ ಪ್ರಧಾನಿ ನರೇಂದ್ರ ಮೋದಿಯವರೇ ಅಭ್ಯರ್ಥಿ. ಅವರಿಗಾಗಿ ನಾವೆಲ್ಲಾ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ಸೋಮಣ್ಣ ಜತೆಯೂ ಮಾತುಕತೆ: “ತೇಜಸ್ವಿನಿ ಅನಂತ ಕುಮಾರ್‌ ಅವರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡಿದ್ದೇನೆ. ರಾಜ್ಯ ಬಿಜೆಪಿ ಚುನಾವಣಾ ಪ್ರಭಾರಿ ಮುರಳೀಧರರಾವ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಅಭ್ಯರ್ಥಿ ತೇಜಸ್ವಿ ಸೂರ್ಯ ಕೂಡ ಭೇಟಿಯಾಗಿದ್ದಾರೆ. ಯಾವುದೇ ಗೊಂದಲಗಳಿಲ್ಲ.

ಚುನಾವಣಾ ಪ್ರಚಾರಕ್ಕಾಗಿ ಈಗಾಗಲೇ ಸಭೆ ನಡೆಸಿದ್ದೇನೆ. ಪದ್ಮನಾಭನಗರ, ಜಯನಗರ ಕ್ಷೇತ್ರದಲ್ಲಿ ವಾರ್ಡ್‌ ಮಟ್ಟದ ಸಭೆಯನ್ನೂ ಕರೆದಿದ್ದೇನೆ. ಮಾಜಿ ಸಚಿವ ವಿ.ಸೋಮಣ್ಣ ಅವರ ಮನಸ್ಸಿಗೂ ನೋವಾಗಿದ್ದು, ಅವರೊಂದಿಗೂ ಮಾತುಕತೆ ನಡೆಸುತ್ತೇನೆ. ಪಕ್ಷದ ದೊಡ್ಡದು. ಎಲ್ಲರೂ ಪಕ್ಷ ನಿಷ್ಠರಾಗಿರಬೇಕು. ಸಮಸ್ಯೆಗಳನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು,’ ಎಂದು ತಿಳಿಸಿದರು.

ಸಂಘ ಪರಿವಾರದಲ್ಲೂ ಅಸಮಾಧಾನ: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿರುವ ಬಗ್ಗೆ ಯುವಜನತೆಯಲ್ಲಿ ಸಂತಸವಿದ್ದರೂ ಸಂಘ ಪರಿವಾರದ ಕೆಲವರಲ್ಲಿ ಅಸಮಾಧಾನವಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಅಭಿಪ್ರಾಯ ಹಂಚಿಕೊಂಡಿದ್ದು, ಸಂಘಟನೆಗಾಗಿ ಸಾಕಷ್ಟು ಶ್ರಮಿಸಿದವರನ್ನು ಗುರುತಿಸದೆ ಕೇವಲ ವಾಕ್‌ ಚಾತುರ್ಯ ಹಾಗೂ ಇತರ ಅಂಶಗಳನ್ನು ಪರಿಗಣಿಸಿ ಅವಕಾಶ ನೀಡಿರುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ನಾನಾ ಕಡೆ ಪ್ರಚಾರ: ಈ ನಡುವೆ ಅಭ್ಯರ್ಥಿ ತೇಜಸ್ವಿ ಸೂರ್ಯ ಶುಕ್ರವಾರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ದೇವಾಂಗ ಸಂಘದ ಪದಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಬೆಂಬಲ ಕೋರಿದರು. ಜಯನಗರದಲ್ಲೂ ಪಾಲಿಕೆ ಸದಸ್ಯ ಕೆಂಪೇಗೌಡ ಅವರೊಂದಿಗೆ ಯುವಕರ ತಂಡದೊಂದಿಗೆ ಚರ್ಚಿಸಿದರು.

ಆರ್‌ಎಸ್‌ಎಸ್‌ ಪ್ರಾರ್ಥನೆ ಸಾಲುಗಳನ್ನೇ ಟ್ವೀಟ್‌ ಮಾಡಿದ ತೇಜಸ್ವಿನಿ: ಆರ್‌ಎಸ್‌ಎಸ್‌ ಪಾರ್ಥನೆಯ ಕೊನೆಯ ಸಾಲನ್ನು ಟ್ವೀಟ್‌ ಮಾಡುವ ಮೂಲಕ ತೇಜಸ್ವಿನಿ ಅನಂತಕುಮಾರ್‌ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿರುವುದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ತೇಜಸ್ವಿನಿ ಅನಂತಕುಮಾರ್‌ ಅವರಿಗೆ ಟಿಕೆಟ್‌ ಕೈತಪ್ಪಲು ಆರ್‌ಎಸ್‌ಎಸ್‌ ಮುಖಂಡರೇ ನೇರ ಕಾರಣ ಎಂದು ಹೇಳಲಾಗುತ್ತಿದೆ. ಅದನ್ನು ಎಲ್ಲಿಯೂ ಹೇಳಿಕೊಳ್ಳದ ತೇಜಸ್ವಿನಿ ಅವರು, ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಪಾರ್ಥನೆಯ ಕೊನೆಯ ಸಾಲವನ್ನು ಯಥಾವತ್ತಾಗಿ ಬರೆದು, ದೇಶವೇ ಮೊದಲು ಎಂದು ಹೇಳಿದ್ದಾರೆ.

“ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಡಾಕ್ಟರ್‌ ಜೀ ಹಾಗೂ ನಂತರದಲ್ಲಿ ಸಂಘವನ್ನು ಕಟ್ಟಿ ಬೆಳೆಸಿದ ಗುರೂಜಿಯವರ ದಿನದಲ್ಲಿ ರಚಿಸಿರುವ ಸಂಘದ ಪಾರ್ಥನೆಯ ಶಕ್ತಿಯುತ ಪದಗಳು- “ಪರಂ ವೈಭವಂ ನೇತುಮೇ ತತ್‌ ಸ್ವರಾಷ್ಟ್ರಂ ಸಮರ್ಥಾ ಭವತ್ವಾಶಿಷಾ ತೇ ಭೃಶಮ್‌’ (ಸ್ವಹಿತಾಸಕ್ತಿ ಇಲ್ಲದೆ ಪ್ರತಿಯೊಬ್ಬರ ಕಾರ್ಯಬದ್ಧತೆ ಹಾಗೂ ಸೇವೆಯನ್ನು ಸೇರಿಸಿಕೊಂಡು ದೇಶವನ್ನು ಪರಮ ವೈಭವದ ಸ್ಥಿತಿಗೆ ಕೊಂಡೊಯ್ಯುವುದು.) ಭಾರತ್‌ ಮಾತಾಕೀ ಜೈ, ಆರ್‌ಎಸ್‌ಎಸ್‌ ಪ್ರಾರ್ಥನೆ, ರಾಷ್ಟ್ರವೇ ಮೊದಲು ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.