ಮೃತದೇಹದ ಪೂಜೆಗೆ ತಾತ್ಕಾಲಿಕ ಬ್ರೇಕ್‌


Team Udayavani, Aug 24, 2020, 11:59 AM IST

ಮೃತದೇಹದ ಪೂಜೆಗೆ ತಾತ್ಕಾಲಿಕ ಬ್ರೇಕ್‌

ಬೆಂಗಳೂರು: ಚಿತಾಗಾರಗಳ ಬಳಿ ಮೃತದೇಹಗಳ ಪೂಜೆಗೆ ತಾತ್ಕಾಲಿಕ ಬ್ರೇಕ್‌ ಹಾಕಲಾಗಿದೆ!-ಇದನ್ನು ಸ್ವತಃ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

ಮೃತದೇಹಗಳ ಪೂಜೆಗೆ ಹೆಚ್ಚು ಸಮಯ ವ್ಯಯವಾಗುತ್ತಿದೆ. ಇದು ಚಿತಾಗಾರಗಳ ಬಳಿ ದಟ್ಟಣೆಗೆ ಕಾರಣವಾಗುತ್ತಿದೆ. ಹೀಗಾಗಿ, ಪೂಜೆ ಮಾಡುವ ಸಮಯಕ್ಕೆ ಬ್ರೇಕ್‌ ಹಾಕಿ ಆ ಸಮಯದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಪಾದರಾಯನಪುರ, ಹೆಬ್ಟಾಳ ಹಾಗೂ ಮೇಡಿ ಅಗ್ರಹಾರ ವಿದ್ಯುತ್‌ ಚಿತಾಗಾರಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದರು. ಎಲ್ಲ ಚಿತಾಗಾರಗಳ ಬಳಿ ಆ್ಯಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿರುತ್ತವೆ. ಅಂತ್ಯಕ್ರಿಯೆ ವಿಳಂಬವಾಗುತ್ತಿದೆ. ಚಿತಾಗಾರದ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲಿಸಿದ್ದೇನೆ. ಶವಸಂಸ್ಕಾರ ನೆರವೇರಿಸಲು ಬರುವವರು ರಾಹುಕಾಲ ನೋಡಿಕೊಂಡು ಅಂತ್ಯಕ್ರಿಯೆಗೆ ಮೃತದೇಹಗಳನ್ನು ತರುತ್ತಿದ್ದಾರೆ. ದಟ್ಟಣೆಗೆ ಇದು ಕೂಡ ಕಾರಣ ಎಂದು ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ನಿತ್ಯ ಸರಾಸರಿ 30 ಸೋಂಕಿತರ ಮೃತದೇಹಗಳು ಹಾಗೂ 60 ಕೊರೊನೇತರ ಮೃತದೇಹಗಳು ವಿದ್ಯುತ್‌ ಚಿತಾಗಾರಗಳಿಗೆ ಬರುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 12 ವಿದ್ಯುತ್‌ ಚಿತಾಗಾರಗಳಿವೆ. ಈ ಪೈಕಿ ಪಾದರಾಯನಪುರ ಚಿತಾಗಾರ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗಿಸುತ್ತಿರುವ ಬಗ್ಗೆ ದೂರು ಕೇಳಿಬರುತ್ತಿದೆ. ಆ ಹಿನ್ನೆಲೆಯಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ, ಸೆ. 7ಕ್ಕೆ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಸೋಂಕಿಗೆ ಬಲಿಯಾದ ವ್ಯಕ್ತಿಗಳ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವ ಸಿಬ್ಬಂದಿಗೆ ಪ್ರಸ್ತುತ 500 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಅವರ ವೇತನವನ್ನೂ 6 ಸಾವಿರದಿಂದ 18 ಸಾವಿರ ರೂ. ಗೆ ಹೆಚ್ಚಿಸಲಾಗಿದೆ. ಅಗತ್ಯಬಿದ್ದರೆ ಚಿತಾಗಾರಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ಚಿತಾಗಾರಗಳು ಮತ್ತು ಅಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸಂಬಂಧ ಯಾವುದೇ ದೂರುಗಳು ಬಂದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.

ಎಲ್ಲ ಚಿತಾಗಾರಗಳಲ್ಲಿ ಶುಚಿತ್ವ ಕಾಪಾಡಲಾಗಿದ್ದು, ಶೌಚಾಲಯ, ಸ್ನಾನದ ಕೊಠಡಿ, ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಹೊಸದಾಗಿ 9 ವಿದ್ಯುತ್‌ ಚಿತಾಗಾರಗಳ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಗುರುತಿಸಿ, ಬಿಬಿಎಂಪಿಗೆ ಹಸ್ತಾಂತರಿಸಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ವಿದ್ಯುತ್‌ ಚಿತಾಗಾರಗಳ ಸಂಖ್ಯೆ 21ಕ್ಕೆ ಏರಿಕೆಯಾಗಲಿದ್ದು, ಅಂತ್ಯಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಶ್ಚಿಮ ವಲಯ ಮುಖ್ಯ ಎಂಜಿನಿಯರ್‌ ನಾಗರಾಜ್‌, ಮುಖ್ಯ ಆರೋಗ್ಯಾಧಿಕಾರಿ ಡಾ.ಮನೋರಂಜನ್‌ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.