ನಿವೃತ್ತ ಡಿಜಿಪಿಗೆ ತಾತ್ಕಾಲಿಕ ರಿಲೀಫ್
Team Udayavani, Apr 11, 2018, 12:14 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಪ್ರಕರಣದಲ್ಲಿ ಕಾರಾಗೃಹ ಇಲಾಖೆಯ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಪ್ರಕರದ ತನಿಖೆಯನ್ನು ಎಸಿಬಿಗೆ ವಹಿಸಿ ಆದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸತ್ಯನಾರಾಯಣ್ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚೌಹಾಣ್ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ರಾಜ್ಯ ಸರ್ಕಾರದ ಪರ ವಕೀಲರು ಹೇಳಿಕೆ ನೀಡಿದೆ.
ಅದರಂತೆ ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯನಾರಾಯಣ ರಾವ್ ವಿಚಾರಣೆ ಸೇರಿ ಯಾವುದೇ ಕ್ರಮಗಳನ್ನು ಎಸಿಬಿ ಜರುಗಿಸುವುದಿಲ್ಲ ಎಂದು ಹೇಳಿದರು. ಅಲ್ಲದೆ, ಸತ್ಯನಾರಾಯಣ ರಾವ್ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ವಾದ ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಏ.16ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಅದುವರೆಗೆ ಸತ್ಯನಾರಾಯಣರಾವ್ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ ವಿಚಾರಣೆಯನ್ನು ಏ.19ಕ್ಕೆ ಮುಂದೂಡಿತು.
ಶಶಿಕಲಾಗೆ ವಿಶೇಷ ಸೌಲಭ್ಯ ನೀಡಲು ಅಂದಿನ ಡಿಜಿಪಿ ಸತ್ಯನಾರಾಯಣ ರಾವ್ 2 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆಗಿನ ಡಿಐಜಿ ಡಿ.ರೂಪಾ ಆರೋಪಿಸಿದ್ದರು. ಈ ಕುರಿತಂತೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ವಿಚಾರಣೆ ನಡೆಸಿದ ನಿವೃತ್ತ ಐಎಎಸ್ ಅಧಿಕಾರಿ ವಿನಯಕುಮಾರ್ ನೇತೃತ್ವದ ತಂಡ ವರದಿ ನೀಡಿದ್ದು, ಈ ವರದಿ ಆಧರಿಸಿ ಸರ್ಕಾರ ಫೆ. 26ರಂದು ಪ್ರಕರಣದ ತನಿಖೆಯನ್ನು ಎಸಿಬಿಗೆ ವಹಿಸಿತ್ತು. ಅದರಂತೆ ಎಸಿಬಿ ಸತ್ಯನಾರಾಯಣರಾವ್ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.