ಶಿಕ್ಷಕರಿಗೂ ಪರೀಕ್ಷೆ; ಫೇಲಾದ್ರೆ ಗೇಟ್‌ಪಾಸ್‌?

Team Udayavani, Oct 16, 2018, 2:19 PM IST

blore-3.jpg

ಬೆಂಗಳೂರು: “ಬಿಬಿಎಂಪಿ ರೋಷಿಣಿ’ ವಿದ್ಯಾರ್ಥಿಗಳ ಕಲಿಕಾ ಸಾಮಥ್ಯಊ ಹೆಚ್ಚಿಸುವುದರ ಜತೆಗೆ ಶಿಕ್ಷಕರ ಮುಂದೊಂದು ಅಗ್ನಿ ಪರೀಕ್ಷೆ ಇಟ್ಟಿದೆ. ಇದರಲ್ಲಿ ಅನುತ್ತೀರ್ಣರಾದವರಿಗೆ ಗೇಟ್‌ಪಾಸ್‌ ಗ್ಯಾರಂಟಿ! ಬಿಬಿಎಂಪಿ ಒಡೆತನದ ಶಾಲಾ-ಕಾಲೇಜುಗಳನ್ನು ದತ್ತು ಪಡೆದು ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೊಳಿಸಲು ಪಾಲಿಕೆಯ ಸಹಯೋಗದಲ್ಲಿ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅನಂತ್‌ ಗಾರ್ಡ್‌ ಸಂಸ್ಥೆಗಳು ಯೋಜನೆ ರೂಪಿಸಿವೆ. ಅದರಂತೆ ಯೋಜನೆ ಜಾರಿಗೆ ಈಗಾಗಲೇ ಪಾಲಿಕೆ ಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸಂಸ್ಥೆಗಳು, ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿವೆ.

ಬಿಬಿಎಂಪಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದರ ಜತೆಗೆ, ಅಲ್ಲಿನ ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅವರಿಗೂ ಅರ್ಹತಾ ಪರೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ. 

ಅದರಂತೆ ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅನಂತ್‌ ಗಾರ್ಡ್‌ ಸಂಸ್ಥೆಗಳು 21ನೇ ಶತಮಾನದ ಕಲಿಕಾ  ಲಭ್ಯಗಳು, ಸ್ಯಾಟಲೈಟ್‌ ಹಾಗೂ ಡಿಜಿಟಲ್‌ ಶಿಕ್ಷಣ ಮತ್ತು ಬೋಧನಾ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಸುತ್ತವೆ. ಅದಾದ ಬಳಿಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ.

ಅರ್ಹತಾ ಪರೀಕ್ಷೆ ಅನಿವಾರ್ಯ: ಶಿಕ್ಷಕರನ್ನು ಕೆಲಸದಿಂದ ತೆಗೆಯುವ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ವಿಭಾಗದ ಅಧಿಕಾರಿಯೊಬ್ಬರು, ಪಾಲಿಕೆಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿಲ್ಲ ಎಂಬ ಕಾರಣದಿಂದಲೇ ಪೋಷಕರು ಮಕ್ಕಳನ್ನು ಬಿಬಿಎಂಪಿ ಶಾಲೆಗಳಿಗೆ ಸೇರಿಸುವುದಿಲ್ಲ. ಇನ್ನು ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದಾಗ ಆಂಗ್ಲ ಭಾಷೆಯ ಶಿಕ್ಷಕರಿಗೆ ಆಂಗ್ಲ ವ್ಯಾಕರಣವೇ ಸರಿಯಾಗಿ ಗೊತ್ತಿಲ್ಲದಿರುವುದು, ಗಣಿತ ಶಿಕ್ಷರಿಗೆ ಲೆಕ್ಕವೇ ಬಾರದಿರುವುದು ಕಂಡುಬಂದಿದೆ. ಇನ್ನು ಪಾಲಿಕೆಯ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಉತ್ತಮ ಶಿಕ್ಷಕರು ಇರಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಮಾಹಿತಿ ನೀಡಿದರು.

ಡಿಸೆಂಬರ್‌ ವೇಳೆಗೆ 6 ಮಾದರಿ ಶಾಲೆಗಳು ಪಾಲಿಕೆಯ ಶಾಲೆಗಳನ್ನು ದತ್ತು ಪಡೆದಿರುವ ಸಂಸ್ಥೆಗಳು ಡಿಸೆಂಬರ್‌ ವೇಳೆಗೆ ಪಾಲಿಕೆಯ ಆರು ಶಾಲಾ-ಕಾಲೇಜುಗಳಲ್ಲಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಿವೆ. ಅದರಂತೆ ವರ್ಷಾಂತ್ಯದೊ ವೇಳೆಗೆ ಆರು ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪು ಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಪಾಲಿಕೆಯ ಶಾಲೆಗಳ ಕಡೆಗೆ ಆಕರ್ಷಿಸುವುದು ಬಿಬಿಎಂಪಿ ರೋಷಿಣಿ ಯೋಜನೆಯ ಉದ್ದೇಶವಾಗಿದೆ. 

ಏನಿದು ಬಿಬಿಎಂಪಿ ರೋಷಿಣಿ ಯೋಜನೆ?
ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ರೀತಿಯಲ್ಲೇ ಪಾಲಿಕೆ ಶಾಲೆ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಪ್ರಮುಖ ಉದ್ದೇಶದಿಂದ “ಬಿಬಿಎಂಪಿ ರೋಷಿಣಿ’ ಯೋಜನೆ ಜಾರಿಗೆ ತರಲಾಗಿದೆ. ಮಕ್ಕಳು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಕಂಪ್ಯೂಟರ್‌ ಹೀಗೆ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಕೂಡ ಯೋಜನೆಯ ಭಾಗವಾಗಿದೆ. ಆ ನಿಟ್ಟಿನಲ್ಲಿ ದತ್ತು ಪಡೆದ ಸಂಸ್ಥೆಗಳು ಪಾಲಿಕೆಯ ಶಾಲಾ-ಕಾಲೇಜುಗಳ ಚಿತ್ರಣವನ್ನು ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಬದಲಿಸಲಿವೆ.

“ಮಾದರಿ’ ಆಗಲಿರುವ „ ಶಾಲಾ-ಕಾಲೇಜುಗಳು
„ ಅಸ್ಟಿನ್‌ಟೌನ್‌ ಬಾಲಕಿಯರ ಪ್ರೌಢಶಾಲೆ 
„ ಗಾಂಧಿನಗರ ಪ್ರೌಢಶಾಲೆ
„ ಜಯನಗರ 1ನೇ ಬ್ಲಾಕ್‌ ಪ್ರೌಢಶಾಲೆ
„ ಮೂಡಲಪಾಳ್ಯ ಪ್ರೌಢಶಾಲೆ
„ ಕ್ಲೀವ್‌ಲ್ಯಾಂಡ್‌ಟೌನ್‌, ಪ್ರೌಢಶಾಲೆ ಹಾಗೂ ಕಾಲೇಜು
„ ಭೈರಸಂದ್ರ ಪ್ರೌಢಶಾಲೆ ಹಾಗೂ ಕಾಲೇಜು

ಯೋಜನೆ ಅನುಕೂಲವೇನು?
„ ಶಿಕ್ಷಕರಲ್ಲಿ 21ನೇ ಶತಮಾನ ಶಿಕ್ಷಣ ಶೈಲಿಯನ್ನು ರೂಪಿಸಬಹುದು
„ ವಿದ್ಯಾರ್ಥಿಗಳಿಗೆ ಡಿಜಿಟಲ್‌ ವಿಷಯಗಳ ಕುರಿತು ತಿಳಿಯುತ್ತದೆ
„ ಸ್ಯಾಟಲೈಟ್‌ ಹಾಗೂ ಆನ್‌ಲೈ ಶಿಕ್ಷಣ
„ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೌಲ್ಯಮಾಪನ
„ ಶಿಕ್ಷಣ ಗುಣಮಟ್ಟ ಹೆಚ್ಚಾಗಲು ರ್‍ಯಾಂಕಿಂಗ್‌ ವ್ಯವಸ್ಥೆ ಅನುಕೂಲ

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.