2016ರಲ್ಲಾದ ಪರೀಕ್ಷೆ ಫ‌ಲಿತಾಂಶ ಇನ್ನೂ ಬಂದಿಲ್ಲ!


Team Udayavani, Oct 17, 2017, 12:00 PM IST

vishweshwarayya.jpg

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ನಡೆದ ಪರೀಕ್ಷೆಯ ಫ‌ಲಿತಾಂಶ ಇನ್ನೂ ಬಂದಿಲ್ಲ. ಕೆಲವೊಂದು ಸೆಮಿಸ್ಟರ್‌ನ ಮರು ಮೌಲ್ಯಮಾಪನದ ಫ‌ಲಿತಾಂಶವೂ ಪ್ರಕಟಗೊಂಡಿಲ್ಲ. ಜತೆಗೆ ಅಂಕಪಟ್ಟಿಯ ಗೊಂದಲ. ಇದು ಬೆಂಗಳೂರಿನ ಪ್ರತಿಷ್ಠಿತ ಯುನಿರ್ವಸಿಟಿ ವಿಶ್ವೇಶ್ವರಯ್ಯ ಕಾಲೇಜ್‌ ಆಫ್ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಗೋಳು.

ಭಾರತ ರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಅವರು ಆರಂಭಿಸಿರುವ  ಈ ಎಂಜಿನಿಯರಿಂಗ್‌ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ಫ‌ಲಿತಾಂಶವೂ ಸಿಗುವುದಿಲ್ಲ, ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ ವಿದ್ಯಾರ್ಥಿಗಳು ಉತ್ತರಕ್ಕಾಗಿ ತಿಂಗಳಾನುತಿಂಗಳು ಕಾಯಬೇಕು. ಅಂಕಪಟ್ಟಿಯ ಗೊಂದಲ ಕೇಳುವವರೇ ಇಲ್ಲ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ವರ್ಷಗಳಿಂದಲೂ ಹೀಗೆ ಇದೆ.

ವಿದ್ಯಾರ್ಥಿಗಳ ಸಮಸ್ಯೆ: 2016ರ ನವೆಂಬರ್‌ ತಿಂಗಳಲ್ಲಿ ನಡೆದ ಎಂಜಿನಿಯರಿಂಗ್‌ ಪರೀಕ್ಷೆಯ ಫ‌ಲಿತಾಂಶ ಇನ್ನೂ ಬಂದಿಲ್ಲ. ಕೆಲವೊಂದು ವಿಭಾಗದ ಒಂದು ಮತ್ತು ಮೂರನೇ ಸೆಮಿಸ್ಟರ್‌ ಫ‌ಲಿತಾಂಶ ಕೂಡ ಪ್ರಕಟಗೊಂಡಿಲ್ಲ. ಅಂಕಪಟ್ಟಿಯಲ್ಲಿ ಅಂಕದ ಬದಲಾವಣೆ, ವಿದ್ಯಾರ್ಥಿಗಳ ಫೋಟೋ ಅದಲು ಬದಲಾಗಿರುವುದು ಸಾಮಾನ್ಯವಾಗಿದೆ. ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯ ವಿರುದ್ಧ ಹೋರಾಟಕ್ಕೆ ಕಾಲೇಜಿನಿಂದಲೇ ವಿದ್ಯಾರ್ಥಿ ಸಂಘಟನೆ ಕಟ್ಟಿಕೊಳ್ಳಲು ವಿದ್ಯಾರ್ಥಿಗಳು ತೀರ್ಮಾನಿಸಿದ್ದಾರೆ. ಹಾಗೆಯೇ ಸಕಾಲಕ್ಕೆ ಫ‌ಲಿತಾಂಶ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೋರಾಟ ನಡೆಸಲು ಮುಂದಾಗಿದ್ದಾರೆ.

8 ಸಾವಿರ ದೂರು: ಬೆಂವಿವಿ ಅಧೀನದ ಕಾಲೇಜಿನ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ದೂರುಗಳು ಬರುತ್ತಲೇ ಇರುತ್ತದೆ. ಎಂಜಿನಿಯರಿಂಗ್‌, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಬೆಂವಿವಿ ಪರೀಕ್ಷಾಂಗ ವಿಭಾಗಕ್ಕೆ 8 ಸಾವಿರಕ್ಕೂ ಅಧಿಕ ದೂರು ಬಂದಿದೆ. ಫ‌ಲಿತಾಂಶ ವಿಳಂಬ, ಮರುಮೌಲ್ಯಮಾಪನ, ಅಂಕಪಟ್ಟಿ ಗೊಂದಲ, ಪರೀಕ್ಷೆಯ ವೇಳಾಪಟ್ಟಿಗೆ ಸೇರಿದ ದೂರು ಇದಾಗಿದೆ ಎಂದು ವಿವಿಯ ಮೂಲಗಳು “ಉದಯವಾಣಿ’ಗೆ ಮಾಹಿತಿ ನೀಡಿದೆ.

ಪರೀಕ್ಷಾ ಅದಾಲತ್‌: ವಿದ್ಯಾರ್ಥಿಗಳಿಂದ ಬಂದಿರುವ ದೂರುಗಳನ್ನು ಏಕಕಾಲದಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಪರೀಕ್ಷಾ ಅದಾಲತ್‌ ನಡೆಸಲು ಬೆಂವಿವಿ ತೀರ್ಮಾನಿಸಿದೆ. ಈ ಹಿನ್ನೆಯಲ್ಲಿ ತನ್ನ ಅಧೀನದ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಪರೀಕ್ಷಾಂಗ ವಿಭಾಗದಿಂದ ಸೂಚನೆ ನೀಡಲಾಗಿದೆ. ಪ್ರತಿ ದಿನ 500ರಿಂದ 600 ದೂರುಗಳನ್ನು ವಿಲೇವಾರಿ ಮಾಡಲಾಗುತ್ತಿದೆಯಾದರೂ, ಅಷ್ಟೇ ಪ್ರಮಾಣದಲ್ಲಿ ಹೊಸ ದೂರು ದಾಖಲಾಗುತ್ತಿದೆ. ಹೀಗಾಗಿ  ಎಲ್ಲಾ ದೂರುಗಳನ್ನು ವಿದ್ಯಾರ್ಥಿಗಳ, ಪ್ರಾಧ್ಯಾಪಕರ ಸಮ್ಮುಖದಲ್ಲೇ ಬಗೆಹರಿಸಲು ಪರೀಕ್ಷಾ ಅದಾಲತ್‌ ನಡೆಸಲಾಗುತ್ತದೆ.

ಪರೀಕ್ಷಾ ಫ‌ಲಿತಾಂತ ವಿಳಂಬ ಹಾಗೂ ಅಂಕಪಟ್ಟಿ ಗೊಂದಲದ ಬಗ್ಗೆ ವಿಶ್ವವಿದ್ಯಾಲದ ಗಮನಕ್ಕೆ ತಂದಿದ್ದೇವೆ. ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಫ‌ಲಿತಾಂಶ ನೀಡುವ ಉದ್ದೇಶದಿಂದ ಎಂಜಿನಿಯರಿಂಗ್‌ ಕೋರ್ಸ್‌ನ ಎಲ್ಲ ವಿಭಾಗದ ಡೀನ್‌ಗಳೊಂದಿಗೂ ಮಾತುಕತೆ ನಡೆಸಲಾಗಿದೆ.
-ಡಾ. ಕೆ.ಆರ್‌.ವೇಣುಗೋಪಾಲ್‌, ಯುವಿಸಿಇ ಪ್ರಾಂಶುಪಾಲ್‌

ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತಿದ್ದೇವೆ. ಅಂಕಪಟ್ಟಿಗೆ ಸಂಬಂಧಿಸಿದಂತೆ ಬಂದಿರುವ ದೂರುಗಳನ್ನು ಸ್ಥಳದಲ್ಲೇ ಸರಿಪಡಿಸಿ, ಹೊಸ ಅಂಕಪಟ್ಟಿ ವಿತರಿಸುತ್ತಿದ್ದೇವೆ. ಎಂಜಿನಿಯರಿಂಗ್‌ ಫ‌ಲಿತಾಂಶ ನೀಡುತ್ತಿದ್ದೇವೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಫ‌ಲಿತಾಂಶ ವಿಳಂಬವಾಗುತ್ತಿದೆ.
-ಡಾ.ಸಿ.ಶಿವರಾಜ್‌, ಬೆಂವಿವಿ ಕುಲಪತಿ (ಪರೀಕ್ಷೆ)

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.