ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಅಗತ್ಯ
Team Udayavani, Jun 6, 2019, 3:04 AM IST
ಬೆಂಗಳೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಸಕ್ರಿಯವಾಗಿರಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಹೇಳಿದರು.
ಬೆಂಗಳೂರು ವಿವಿಯಲ್ಲಿ ಹಮ್ಮಿಕೊಂಡಿದ್ದ ಅಂತರ್ ವಿಭಾಗಗಳ ಕ್ರೀಡಾಕೂಟ-2019ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿವಿಯಲ್ಲಿ ಓದುತ್ತಿದ್ದಾಗ ವಿವಿ ಕ್ರಿಕೆಟ್ ತಂಡದಲ್ಲಿ ಆಡಿದ ನೆನಪುಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ವಿದ್ಯಾರ್ಥಿಗಳಿಗೆ ಪಠ್ಯ ಬೇಕೆಬೇಕು. ಅದರ ಜತಗೆ ಪಠ್ಯೇತರ ಚಟುವಟಿಕೆಯಲ್ಲೂ ಸಕ್ರಿಯವಾಗಿರಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಸದಾ ಕ್ರಿಯಾಶೀಲರಾಗಿ, ಚಟುವಟಿಕೆಯಿಂದ ಇರಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.
ಕುಲಸಚಿವ ಡಾ.ಬಿ.ಕೆ.ರವಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಟಿ. ಲಿಂಗರಾಜು, ಕಾರ್ಯದರ್ಶಿ ಮುನಿವೆಂಕಟಪ್ಪ ಮೊದಲಾದವರು ಇದ್ದರು. ವಿವಿಯ ಚಾಂಪಿಯನ್ ಆಗಿ ಹೊರಹೊಮ್ಮಿದ ಭೌತಶಾಸ್ತ್ರ ವಿಭಾಗಕ್ಕೆ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.