ನಗರದಲ್ಲಿ 28ರಿಂದ ರಾಷ್ಟ್ರೀಯ ಸಿರಿಧಾನ್ಯ ಮೇಳ
Team Udayavani, Apr 25, 2017, 12:16 PM IST
ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡುವ ನಿಟ್ಟಿನಲ್ಲಿ ಏಪ್ರಿಲ್ 28 ರಿಂದ 30 ವರೆಗೆ ಮೂರು ದಿನ ರಾಷ್ಟ್ರೀಯ ವಾಣಿಜ್ಯ ಮೇಳ ಏರ್ಪಡಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೆಗೌಡ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಸಾವಯವ ಮತ್ತು ಸಿರಿಧಾನ್ಯಗಳಿಗೆ ಹೆಚ್ಚಿನ ಮಾರುಕಟ್ಟೆ ಒದಗಿಸಿ ಕೊಡುವುದು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಹಿನಿಯಲ್ಲಿ ಈ ಮೇಳ ಏರ್ಪಡಿಸಲಾಗಿದೆ ಎಂದರು.
ರಾಷ್ಟ್ರೀಯ ಮೇಳದಲ್ಲಿ ಸುಮಾರು 231 ಮಳಿಗೆಗಳನ್ನು ತೆರೆಯಲಾಗುವುದು. ಬಿಗ್ ಬಾಸ್ಕೆಟ್, ಬ್ರಿಟಾನಿಯಾ, ಎಂಟಿಆರ್, ಫುಡ್ ಬಜಾರ್, ರಿಲಾಯನ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಮೇಳದಲ್ಲಿ ಪಾಲ್ಗೊಳ್ಳುವುದರಿಂದ ರೈತರು ನೇರವಾಗಿ ಕಂಪನಿಗಳ ಜೊತೆಗೆ ಮಾತುಕತೆ ನಡೆಸಿ, ವ್ಯವಹಾರ ಮಾಡಬಹುದು. ಇದರಿಂದ ಮಧ್ಯವರ್ತಿಗಳ ಹಾವಳಿ ತಡೆಗಟ್ಟಬಹುದು ಮತ್ತು ರೈತರಿಗೂ ಹೆಚ್ಚಿನ ಲಾಭವಾಗಲಿದೆ. ಗ್ರಾಹಕರಿಗೂ ಕಡಿಮೆ ಬೆಲೆಗೆ ಉತ್ಪನ್ನಗಳು ದೊರೆಯಲಿವೆ ಎಂದು ಹೇಳಿದರು.
ಸಾವಯವ ಉತ್ಪನ್ನ ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ 1.82 ಲಕ್ಷ ಟನ್ ಸಾವಯವ ಉತ್ಪನ್ನ ಉತ್ಪಾದನೆ ಮಾಡಲಾಗಿದ್ದು, 4500 ಕೋಟಿ ರೂಪಾಯಿ ವ್ಯವಹಾರ ನಡೆಸಲಾಗಿದೆ ಎಂದರು.
ಸಾವಯವ ರೈತರ ಫೆಡರೇಷನ್: ರಾಜ್ಯದಲ್ಲಿ ಸಾವಯವ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಪ್ರತಿ ಹೋಬಳಿಯ ಒಂದು ಹಳ್ಳಿಯಲ್ಲಿನ 100 ಎಕರೆ ಪ್ರದೇಶದಲ್ಲಿ ಆಯ್ದ ಎನ್ಜಿಒಗಳು ಕೃಷಿಯಲ್ಲಿ ತೊಡಗಬೇಕು. ಪ್ರಸ್ತುತ ಈ ಯೋಜನೆಯಲ್ಲಿ 566 ಹೋಬಳಿಗಳಲ್ಲಿ 63,677 ಹೆಕ್ಟೇರ್ ಪ್ರದೇಶದಲ್ಲಿ 53,829 ರೈತರು ಸಾವಯವ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ.
ಕೃಷಿ ಇಲಾಖೆ ಮೂಲಕ ಸಾವಯವ ಬೆಳೆ ಬೆಳೆಯುವ ರೈತರ ಫೆಡರೇಶನ್ ಸ್ಥಾಪಿಸಲಾಗಿದ್ದು, ಈ ಮೂಲಕ ರೈತರ ಆದಾಯ ಸಂಬಂಧಿ ಸಮಸ್ಯೆಗಳು ಮತ್ತು ಸಾವಯವ ಉತ್ಪನ್ನ ಬೆಳೆಯಲು ಬೇಕಾಗುವ ಬೇಡಿಕೆಗಳನ್ನು ಪರಿಹರಿಸಲಾಗುತ್ತದೆ. ರಾಜ್ಯದಲ್ಲಿ 14 ಫೆಡರೇಶನ್ ರಚಿಸಲಾಗಿದೆ ಎಂದು ಹೇಳಿದರು. ಯುವ ಸಮುದಾಯಕ್ಕೆ ಸಾವಯವ ಮತ್ತು ಸಿರಿ ಧಾನ್ಯಗಳ ಮಹತ್ವ ತಿಳಿಸಲು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಿರಿಧಾನ್ಯಗಳ ಫಿಜ್ಜಾ ಬರ್ಗರ್
ಸಿರಿ ಧಾನ್ಯಗಳಿಂದ ರೊಟ್ಟಿ, ಮುದ್ದೆ, ಪಾಯಸ, ಪೊಂಗಲ್, ಬಾತ್ ಅಷ್ಟೇ ಅಲ್ಲದೇ ಫಿಜ್ಜಾ ಬರ್ಗರ್ ಸೇರಿದಂತೆ ನಗರ ವಾಸಿಗಳು ಹೆಚ್ಚು ಇಷ್ಟ ಪಡುವ ಆಹಾರ ಪದಾರ್ಥಗಳನ್ನು ಸಿದ್ದಪಡಿಸಬಹುದು. ರಾಷ್ಟ್ರೀಯ ಮೇಳದಲ್ಲಿ ಸಿರಿ ಧಾನ್ಯಗಳಿಂದ ಸಿದ್ಧವಾದ 150 ಕ್ಕೂ ಹೆಚ್ಚು ಬಗೆಯ ಆಹಾರ ಪದಾರ್ಥಗಳ ಮೆನು ಕಾರ್ಡ್ ಕೂಡ ಸಿದ್ದ ಪಡಿಸಿ ಮಾರಾಟ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮಿಲ್ಲೆಟ್ ಮಗ, ಮಿಲ್ಲೆಟ್ ಮಗಳು
ಸಿರಿ ಧಾನ್ಯ ಉತ್ಪನ್ನಗಳನ್ನು ಮಕ್ಕಳ ಮೂಲಕ ಹೆಚ್ಚು ಪ್ರಚಾರ ಮಾಡುವ ಆಲೋಚನೆ ಹೊಂದಿರುವ ಕೃಷಿ ಇಲಾಖೆ, ಈ ಕಾರ್ಯಕ್ರಮದ ಪ್ರಚಾರಕ್ಕೆ ಬ್ಯಾನರ್ಗಳನ್ನು ಸಿದ್ದಪಡಿಸಿದ್ದು, ಅವುಗಳಿಗೆ ಇಂಗ್ಲಿಷ್ನಲ್ಲಿ ಮಿಲ್ಲೆಟ್ ಮಗ, ಮಿಲ್ಲೆಟ್ ಮಗಳು ಎಂದು ಹೆಸರಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.