Bengaluru: ಪೊಲೀಸ್ ಜೀಪ್ನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆರೋಪಿ
Team Udayavani, Aug 14, 2024, 11:09 AM IST
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಕೋರ್ಟ್ಗೆ ಕರೆ ತಂದಾಗ ಜೀಪ್ನಿಂದ ಜಿಗೆದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ನೆರವು ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುದ್ದುಗೊಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮನೋಜ್ನನ್ನು ಮಂಗಳವಾರ ಮಧ್ಯಾಹ್ನ ಸೆಷನ್ಸ್ ಕೋರ್ಟ್ಗೆ ಕರೆತರಲಾಗಿತ್ತು. ಆದರೆ, ಆರೋಪಿ ಕೋರ್ಟ್ ಆವರಣದಲ್ಲಿ ಜೀಪ್ ನಿಲುತ್ತಿದ್ದಂತೆ ಜಿಗಿದು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಬೆನ್ನಟ್ಟಿದ ಪೊಲೀಸರು, ಸ್ಥಳೀಯರ ನೆರವು ಪಡೆದು ಕೋರ್ಟ್ ಗೇಟ್ ಬಳಿ ಹಿಡಿದದಿದ್ದಾರೆ. ಆರೋಪಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಈತನ ವಿರುದ್ಧ ಹುಳಿಮಾವು ಮತ್ತು ರಾಜಾಜಿನಗರ ಪೊಲೀಸ್ ಠಾಣೆ ಯಲ್ಲೂ ದರೋಡೆ ಪ್ರಕರಣಗಳು ದಾಖಲಾಗಿದ್ದರಿಂದ, ಆ ಠಾಣೆಗಳ ಪೊಲೀಸರು ವಶಕ್ಕೆ ಪಡೆಯಲು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಮಂಗಳವಾರ ಕೋರ್ಟ್ಗೆ ಕರೆತರಲಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಪೊಲೀಸರು ಹಿಡಿದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.