Arrested: ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪಿ ಬಂಧನ

Team Udayavani, Dec 27, 2023, 11:31 AM IST

Arrested: ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಉತ್ತರ ಭಾರತ ಮೂಲದವರನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ “ಪಂಚರ’ನನ್ನು ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರ ನಿವಾಸಿ ಗಣೇಶ್‌ ಅಲಿಯಾಸ್‌ ಗಣಿ ಬಂಧಿತ.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ದಂಪತಿಯನ್ನು ಹಿಂಬಾಲಿಸಿ ಅವರಿಂದ ನಗದು, ಚಿನ್ನಾಭರಣ ಸುಲಿಗೆ ಮಾಡಿದ್ದ. ಅಲ್ಲದೆ, ಈತನ ವಿಚಾರಣೆ ವೇಳೆ 2007ರಲ್ಲಿ ರಾಬರಿ, 2011ರಲ್ಲಿ ಡಕಾಯಿತಿ, ಸುಲಿಗೆ ಸೇರಿ 7 ಪ್ರಕರಣ ಬೆಳಕಿಗೆ ಬಂದಿವೆ. ಹೀಗಾಗಿ ಈತನಿಂದ ಸುಲಿಗೆ ಅಥವಾ ಬೆದರಿಕೆಗೆ ಒಳಗಾದ ವರು ದೂರು ಕೊಡುವಂತೆ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕ್ಯಾಬ್‌ ಚಾಲಕನಾಗಿದ್ದ ಗಣೇಶ್‌, ಉತ್ತರ ಭಾರತ ಮೂಲದವರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಅಂಗಡಿ ಮುಂದೆ ಅಥವಾ ಇತರೆ ಪ್ರದೇಶದಲ್ಲಿ ಸಿಗರೇಟ್‌ ಸೇದುವವರು ಹಾಗೂ ಹುಡುಗ-ಹುಡುಗಿ ಹೋಗುತ್ತಿದ್ದರೆ, ಅವರನ್ನು ಹಿಂಬಾಲಿಸಿಕೊಂಡು ಹೋಗಿ ಪೊಲೀಸ್‌ ಎಂದು ಹೆದರಿಸುತ್ತಿದ್ದ. ಬಳಿಕ ಈಗ ತಾನೇ ಗಾಂಜಾ ಸೇವನೆ ಮಾಡಿರುವುದನ್ನು ನೋಡಿದ್ದೇನೆ. ನಿಮ್ಮ ಮೇಲೆ ಮತ್ತೂಂದು ತಂಡ ನಿಗಾ ವಹಿಸುತ್ತಿದ್ದ. ಡ್ರಗ್ಸ್‌ ಕೇಸ್‌ ದಾಖಲಿಸದೇ ಇರಲು ಹಣ ಕೊಡಬೇಕೆಂದು ಬೆದರಿಸಿ ನಗದು ಮತ್ತು ಚಿನ್ನಾಭರಣ ಸುಲಿಗೆ ಮಾಡುತ್ತಿದ್ದ. ಆ ನಂತರ ಎಟಿಎಂ ಬೂತ್‌ ಬಳಿಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗುತ್ತಿದ್ದ ಎಂದರು.

ಡಿ.17ರ ರಾತ್ರಿ 9.30ರಲ್ಲಿ ಉತ್ತರ ಭಾರತ ಮೂಲದ ದಂಪತಿ, ಸಿಗರೇಟ್‌ ಸೇದಿಕೊಂಡು ಮನೆಗೆ ನಡೆದು ಹೋಗಿದ್ದರು. ಅವರನ್ನು ಹಿಂಬಾಲಿಸಿಕೊಂಡು ಹೋದ ಗಣೇಶ್‌, ಪೊಲೀಸ್‌ ಎಂದು ಬೆದರಿಸಿ ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಬೇಡಿಕೆ ಹಾಕಿದ್ದಾನೆ. ಅದಕ್ಕೆ ಒಪ್ಪದಿದ್ದಾಗ ದಂಪತಿಯನ್ನು ಸರ್ಜಾಪುರ ರಸ್ತೆಗೆ ಕರೆದೊಯ್ದು ಎಟಿಎಂನಲ್ಲಿ ಹಣ ಡ್ರಾ ಮಾಡಿಸಿಕೊಂಡಿದ್ದ. ಬಳಿಕ ದಂಪತಿಯಿಂದ ಚಿನ್ನಾಭರಣ ಕಸಿದುಕೊಂಡು ಮನೆ ಬಳಿ ಬಿಟ್ಟು ಪರಾರಿಯಾಗಿದ್ದ.

ಕೆಲ ದಿನಗಳ ಬಳಿಕ ಟೆಕಿಯೊಬ್ಬರಿಗೆ ಬೆದರಿಸಿ ಎಟಿಎಂ ಮತ್ತು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಹಣ ಸುಲಿಗೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಪಂಚರನಾಗಿದ್ದ ಆರೋಪಿ : ಅಪರಾಧ ಪ್ರಕರಣಗಳು ನಡೆದಾಗ ಸ್ಥಳ ಮಹಜರು ಮತ್ತು ಪಂಚನಾಮೆ ಮಾಡಲು ಪರಿಚಯಸ್ಥರನ್ನು “ಪಂಚರು’ ಪೊಲೀಸರು ಕರೆದೊಯುತ್ತಾರೆ. ಅದೇ ರೀತಿ ಗಣೇಶ್‌ನನ್ನು ಕೆಲ ಪೊಲೀಸರು ಪ್ರಕರಣ ಗಳಲ್ಲಿ ಕರೆದೊಯ್ದು ಸಹಿ ಪಡೆಯುತ್ತಿದ್ದರು. ಹೀಗಾಗಿ ಪ್ರಕರಣಗಳಲ್ಲಿ ಕೋರ್ಟ್‌ ವಿಚಾರಣೆಗೆ ಹಾಜರಾಗುತ್ತೇನೆ ಎಂಬ ಕಾರಣಕ್ಕೆ ಪೊಲೀಸರ ಕಾರ್ಯಾಚರಣೆ ಬಗ್ಗೆ ತಿಳಿದುಕೊಂಡಿದ್ದ. ಅದನ್ನೇ ದುರ್ಬಳಕೆ ಮಾಡಿಕೊಂಡು ಆರೋಪಿ ಬೆದರಿಕೆ ಹಾಕಿ ಸುಲಿಗೆ, ಡಕಾಯಿತಿ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.