ಅತ್ಯಾಚಾರ ಸಂತ್ರಸ್ತೆಗೆ ಬಾಳು ಕೊಟ್ಟ ಯುವಕನ ಖುಲಾಸೆ
ಸಂತ್ರಸ್ತೆಯು 2020ರ ಅಕ್ಟೋಬರ್ ನಲ್ಲಿ ಆರೋಪಿಯನ್ನು ಮದುವೆಯಾಗಿದ್ದಾರೆ.
Team Udayavani, Aug 25, 2022, 1:15 PM IST
ಬೆಂಗಳೂರು: ಅಪ್ತಾಪೆ¤ಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಬಳಿಕ ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಆಕೆಯನ್ನೇ ಮದುವೆಯಾದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪ ಸಂಬಂಧ ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ 23 ವರ್ಷದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
17 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಅರ್ಜಿದಾರ ಆರೋಪಿ ಮೇಲಿದೆ. ಆದರೆ, ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಸಂತ್ರಸ್ತೆಗೆ 18 ವರ್ಷ ತುಂಬಿದ ಮೇಲೆ ಆಕೆ ಆರೋಪಿಯನ್ನು ಸ್ವಇಚ್ಛೆ ಮೇರೆಗೆ ಮದುವೆಯಾಗಿದ್ದಾರೆ. ಮದುವೆ ನಂತರ ಒಂದು ವರ್ಷದ ಬಳಿಕ ದಂಪತಿಗೆ ಮಗು ಜನಿಸಿದೆ.
ಸದ್ಯ ಆಕೆ ಅರ್ಜಿದಾರನೊಂದಿಗೆ ವಾಸವಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪಿ ವಿರುದ್ಧದ ಪ್ರಕರಣ ಮುಂದುವರಿಯವುದು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರನ ವಿರುದ್ಧದ ಅಧೀನ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.
ಆರೋಪಿ ಹಾಗೂ ತಾನು ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳಸಿರುವುದಾಗಿ ಸಂತ್ರಸ್ತೆಯೇ 2019ರ ಅಕ್ಟೋಬರ್‌ನಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದಾರೆ. 2020ರ ಮಾರ್ಚ್ ನಲ್ಲಿ ಸಂತ್ರಸ್ತೆಗೆ 18 ವರ್ಷದ ತುಂಬಿದೆ. 2020ರ ಜೂನ್ ನಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಸಂತ್ರಸ್ತೆ, ತಾನು ಹಾಗೂ ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದೇವು. ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳೆಸಿದೆವು ಎಂದು ಹೇಳಿಕೆ ನೀಡಿದ್ದರು. ಅದನ್ನು ಆಧರಿಸಿಯೇ ವಿಚಾರಣಾ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿತ್ತು ಎಂದು ಆದೇಶದಲ್ಲಿ ತಿಳಿಸಿದೆ.
ಅಲ್ಲದೇ, ಸಂತ್ರಸ್ತೆಯು 2020ರ ಅಕ್ಟೋಬರ್ ನಲ್ಲಿ ಆರೋಪಿಯನ್ನು ಮದುವೆಯಾಗಿದ್ದಾರೆ. ಅದೇ ದಿನ ಅವರ ಮದುವೆ ನೋಂದಣಿಯಾಗಿದೆ. 2021ರ ಡಿಸೆಂಬರ್‌ನಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಾಗಾಗಿ, ಅರ್ಜಿದಾರನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸಿವುದು ಅರ್ಥಹೀನ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರನ ವಿರುದ್ಧದ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಆದೇಶಿಸಿದೆ.
ಸಂತ್ರಸ್ತೆಯ ತಂದೆ ತನ್ನ 17 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿ 2019ರ ಮಾರ್ಚ್ ನಲ್ಲಿ ಬನ್ನೇರುಘಟ್ಟ ಠಾಣಾ ಪೋಲೀಸರಿಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು, ಅರ್ಜಿದಾರನ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2022ರ ಜುಲೈನಲ್ಲಿ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.