ನಟಿ ಲೀಲಾವತಿ ತೋಟಕ್ಕೆ ಬೆಂಕಿ: ತೆಂಗು, ಅಡಕೆ ನಾಶ
Team Udayavani, Feb 14, 2017, 12:23 PM IST
ನೆಲಮಂಗಲ: ತಾಲೂಕಿನ ಮೈಲನಹಳ್ಳಿಯಲ್ಲಿ ಹಿರಿಯ ನಟಿ ಲೀಲಾವತಿ ಅವರ ತೋಟಕ್ಕೆ ಸೋಮವಾರ ಮಧ್ಯಾಹ್ನ ಬೆಂಕಿ ಬಿದ್ದು ತೆಂಗು, ಅಡಕೆ, ಸಪೋಟ ಮತ್ತಿತರ ಮರಗಳು ನಾಶವಾಗಿವೆ. ವಿಷಯ ತಿಳಿದು ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತೋಟದಲ್ಲಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದರು. ಅಷ್ಟರಲ್ಲಾಗಲೇ ತೋಟದಲ್ಲಿ ಸೊಂಪಾಗಿ ಬೆಳೆದಿದ್ದ ಫಸಲಭರಿತ ತೆಂಗು, ಅಡಕೆ, ಸಪೋಟ ಮರಗಳು ಹಾಗೂ ವಿದೇಶಿ ಗಿಡಗಳು ಬೆಂಕಿಗಾಹುತಿಯಾಗಿದ್ದವು.
ಸೋಮವಾರ ಬೆಳಗ್ಗೆ ಲೀಲಾವತಿ ಹಾಗೂ ಅವರ ಪುತ್ರ ವಿನೋದ್ ರಾಜ್ ಭೂ ವಿಚಾರವಾಗಿ ಬೆಂಗಳೂರಿಗೆ ತೆರಳಿದ್ದರು. ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ತೋಟಕ್ಕೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ತೋಟಕ್ಕೆ ಧಾವಿಸಿದ ಅವರು, ಗಿಡ ಮರಗಳು ಸುಟ್ಟು ಹೋಗಿರುವುದನ್ನು ಕಂಡು ಕಣ್ಣೀರಿಟ್ಟರು. ಈ ವೇಳೆ ಮಾತನಾಡಿದ ಲೀಲಾವತಿ, ತೋಟದಲ್ಲಿ ಗಿಡಗಳನ್ನು ನಮ್ಮ ಮಕ್ಕಳಂತೆ ಸಾಕಿದ್ದೆವು.
ಕೆಲ ಕಿಡಿಗೇಡಿಗಳು ತಮ್ಮ ತೋಟಕ್ಕೆ ಬೆಂಕಿ ಹಚ್ಚಿ ತಮಗೆ ಕಣ್ಣೀರಿಡುವಂತೆ ಮಾಡುತ್ತಿದ್ದಾರೆ. ನೆಲಮಂಗಲದ ರೈತರ ಪರವಾಗಿ ತಾವು ಸಾಕಷ್ಟು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಅದರೆ, ತಮ್ಮ ಹೋರಾಟಕ್ಕೆ ಈ ರೀತಿಯಾಗಿ ಪ್ರತಿಫಲ ದೊರೆಯುತ್ತಿದೆ ಎಂದು ಕಣ್ಣೀರು ಹಾಕಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.