ಬಿಜೆಪಿಗೆ ಹೊಸಬರ ಸೇರ್ಪಡೆಯಿಂದ ಬೆಂಕಿಗೆ ತುಪ್ಪ


Team Udayavani, Mar 5, 2017, 3:45 AM IST

BJP_symbol.jpg

ಬೆಂಗಳೂರು: ಜಿಲ್ಲಾ ಪದಾಧಿಕಾರಿಗಳ ಬದಲಾವಣೆ ಕುರಿತು ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಅಸಮಾಧಾನದ ಬೆಂಕಿಗೆ ಇದೀಗ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ವಿಚಾರ ತುಪ್ಪ ಸುರಿಯುತ್ತಿದ್ದು, ಪಕ್ಷದ ಹಿರಿಯ ನಾಯಕರ ಬಗ್ಗೆ ಮೂಲ ಬಿಜೆಪಿಗರಲ್ಲಿ ತೀವ್ರ ಬೇಸರ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಅನ್ಯ ಪಕ್ಷಗಳಿಂದ ಬಿಜೆಪಿಗೆ ಸೇರುತ್ತಿರುವವರಿಗೆ ಕೆಂಪು ಹಾಸಿನ ಸ್ವಾಗತ ನೀಡುತ್ತಿರುವ ಬಗ್ಗೆ ಮೂಲ ಬಿಜೆಪಿಗರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸ್ಥಳೀಯ ಮುಖಂಡರನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗುತ್ತಿದ್ದು, ಇದು ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕಾರಣಗಳಿಂದಾಗಿ ಮಾರ್ಚ್‌ ತಿಂಗಳನ್ನು ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯ ಮಾಸವಾಗಿ ಆಚರಿಸಲು ಮುಂದಾಗಿದ್ದ ಬಿಜೆಪಿಯ ತೀರ್ಮಾನಕ್ಕೂ ಹಿನ್ನಡೆ ಉಂಟುಮಾಡಿದೆ. ಫೆ. 18 ಅಥವಾ ಮಾರ್ಚ್‌ ಒಂದರಂದು ಸಭೆ ಸೇರಿ ಈ ಕುರಿತು ನಿರ್ಧಾರ ಕೈಗೊಳ್ಳಬೇಕಿತ್ತಾದರೂ ಅತೃಪ್ತಗೊಂಡಿರುವವರು ಸಹಕರಿಸದ ಕಾರಣ ಸಭೆ ನಡೆದಿಲ್ಲ ಮತ್ತು ಹೋರಾಟದ ರೂಪುರೇಷೆಗಳೂ ತೀರ್ಮಾನವಾಗಿಲ್ಲ.

ಈಮಧ್ಯೆ, ಅಸಮಾಧಾನಕ್ಕೆ ಕಾರಣವಾಗಿರುವ ಕೆಲವು ಜಿಲ್ಲೆಗಳ ಅಧ್ಯಕ್ಷರನ್ನು ಬದಲಾವಣೆ ಮಾಡುವ ಕುರಿತು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಈಗಾಗಲೇ ಸಮ್ಮತಿಸಿ ಅದಕ್ಕಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ನೇತೃತ್ವದ ಸಮಿತಿ ರಚಿಸಿದ್ದಾರೆ. ಫೆ. 10ರೊಳಗೆ ಈ ಸಮಿತಿ ಪದಾಧಿಕಾರಿಗಳ ಬದಲಾವಣೆ ಕುರಿತು ತೀರ್ಮಾನ ಕೈಗೊಳ್ಳಬೇಕಾಗಿತ್ತಾದರೂ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ.

ಅಸಮಾಧಾನ ಬಗೆಹರಿಯುವ ಬದಲು ಹೆಚ್ಚಿತು
ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದ ಕೆಲವು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರ ನೇಮಕವನ್ನು ಶೀಘ್ರ ಪರಿಷ್ಕರಣೆ ಮಾಡುವಂತೆ ಅಮಿತ್‌ ಶಾ ಸೂಚಿಸಿ, ಅದಕ್ಕಾಗಿ ಮುರಳೀಧರರಾವ್‌ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಫೆ. 10 ಆದರೂ ಸಮಿತಿ ಯಾವುದೇ ಸಭೆ ನಡೆಸದ ಕಾರಣ ಮತ್ತು ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಯಾಗದ ಕಾರಣ ಮತ್ತೆ ಅಸಮಾಧಾನ ಕಾಣಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆಗೆ ಆಗಮಿಸಿದ್ದ ಮುರಳೀಧರರಾವ್‌ ಅವರು ಆ ಜವಾಬ್ದಾರಿ ನನಗೆ ಬಿಡಿ, ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ, ಅದಾಗಿ 15 ದಿನ ಕಳೆದರೂ ಪದಾಧಿಕಾರಿಗಳ ಪಟ್ಟ ಪರಿಷ್ಕರಣೆಯಾಗುವ ಲಕ್ಷಣ ಕಾಣಿಸುತ್ತಿಲ್ಲ.

ಹೀಗಾಗಿ ಅಸಮಾಧಾನಗೊಂಡಿದ್ದ ಕೆಲವು ಮುಖಂಡರು ಯಡಿಯೂರಪ್ಪ ಬಣ ಮಾತ್ರವಲ್ಲದೆ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ವಿರುದ್ಧವೂ ತಿರುಗಿ ಬೀಳಲು ಮುಂದಾಗಿದ್ದರು. ಪದಾಧಿಕಾರಿಗಳ ಪಟ್ಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸ್ಥಾಪಿಸಿದ್ದಲ್ಲದೆ ನಂತರದಲ್ಲಿ ಪ್ರತಿ ಸಂದರ್ಭದಲ್ಲೂ ತಮ್ಮೊಂದಿಗೆ ಇದ್ದ ಈಶ್ವರಪ್ಪ ಅವರು ದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿಯಾದ ಬಳಿಕ ಪದಾಧಿಕಾರಿಗಳ ಬದಲಾವಣೆ ಕುರಿತಂತೆ ಮೌನಕ್ಕೆ ಶರಣಾಗಿದ್ದು ಇದಕ್ಕೆ ಕಾರಣವಾಗಿತ್ತು.

ಈ ಮಾಹಿತಿ ತಿಳಿಯುತ್ತಿದ್ದಂತೆ ಈಶ್ವರಪ್ಪ ಅವರು ಮತ್ತೆ ಅತೃಪ್ತರೊಂದಿಗೆ ಚರ್ಚಿಸಿ ನಿಮ್ಮೊಂದಿಗೆ ನಾನಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ. ಆ ಕಾರಣಕ್ಕಾಗಿಯೇ ಶನಿವಾರ ಬ್ರಿಗೇಡ್‌ ಸಭೆ ಕರೆದು ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಅಸಮಾಧಾನ ಶಮನಗೊಳ್ಳದಿದ್ದಲ್ಲಿ ಬ್ರಿಗೇಡ್‌ ಮತ್ತೆ ತನ್ನ ಚಟುವಟಿಕೆ ಚುರುಕುಗೊಳಿಸಬೇಕಾಗುತ್ತದೆ ಎಂಬ ಸಂದೇಶ ರವಾನಿಸಿದ್ದಾರೆ.

ಈ ಮಧ್ಯೆ ಅನ್ಯ ಪಕ್ಷಗಳಿಂದ ಕೆಲವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು, ಇನ್ನೂ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಾಯಕರು ಪ್ರಯತ್ನಿಸುತ್ತಿರು ಬಗ್ಗೆಯೂ ಅಪಸ್ವರ ಕೇಳಿಬಂದಿದೆ. ಕುಮಟಾ ಮಾಜಿ ಶಾಸಕ ದಿನಕರಶೆಟ್ಟಿ ಮತ್ತು ಯಲ್ಲಾಪುರದ ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಹೆಗ್ಡೆ ಬಿಜೆಪಿ ಸೇರಿದ್ದು ಹೊರತುಪಡಿಸಿ ಇತರರ ಸೇರ್ಪಡೆ ಬಗ್ಗೆ ಅಸಮಾಧಾನ ಕೇಳಿಬಂದಿದೆ.ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ ಬಿಜೆಪಿ ಸೇರುವುದಕ್ಕೆ ಬೆಂಬಲ ಇದೆಯಾದರೂ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ. ಅವರಿಗೆ ಬೈಂದೂರು ಕ್ಷೇತ್ರದಿಂದ ವಿಧಾನಸಭೆಟಿಕೆಟ್‌ ನೀಡುವ ಬಗ್ಗೆ ಮಾತುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ಅದೇ ರೀತಿ ಹನೂರು ಕ್ಷೇತ್ರದಿಂದ ಪರಿಮಳಾ ನಾಗಪ್ಪ ಅವರು ಬಿಜೆಪಿಗೆ ಸೇರುತ್ತಿರುವ ಬಗ್ಗೆ ಬಿಜೆಪಿಯ ವಿ.ಸೋಮಣ್ಣ ತಮ್ಮ ಆಪ್ತರಲ್ಲಿ ಅಸಮಾಧಾನ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.