ಬ್ಯಾಂಕ್ಗಳಲ್ಲಿ ತ್ರಿಭಾಷ ಸೂತ್ರ ಪಾಲಿಸಲು ಆಪ್ ಒತ್ತಾಯ
Team Udayavani, Jul 21, 2017, 11:10 AM IST
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಅನ್ಯಭಾಷಿಕ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಕನ್ನಡಿಗರು ತೊಂದರೆ ಅನುಭವಿಸುತ್ತಿದ್ದು, ಶೀಘ್ರವೇ ಬ್ಯಾಂಕ್ ವ್ಯವಹಾರದಲ್ಲಿ ತ್ರಿಭಾಷಾ ನೀತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಮ್ಆದ್ಮಿ ಪಕ್ಷ ಒತ್ತಾಯಿಸಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಹ ಸಂಚಾಲಕ ಮೋಹನ್ ದಾಸರಿ, ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದರಿಂದ ಸ್ಥಳೀಯ ಕನ್ನಡಿಗರು ವ್ಯವಹರಿಸಲು ತೊಂದರೆಯಾಗುತ್ತಿದೆ.
ಕನ್ನಡಿಗ ಉದ್ಯೋಗಿಗಳ ಮೇಲೆ ಮೇಲಧಿಕಾರಿಗಳು ದೌರ್ಜನವೆಸಗುತ್ತಿದ್ದಾರೆ. ಆದ್ದರಿಂದ ಕೂಡಲೇ ತ್ರಿಭಾಷಾ ನೀತಿ ಅನುಸರಿಸಿ ಆಯಾ ರಾಜ್ಯ ಭಾಷೆಯಲ್ಲಿ ಬ್ಯಾಂಕ್ಗಳು ವ್ಯವಹರಿಸುವಂತೆ ಆರ್ಬಿಐ ಮತ್ತು ಸರ್ಕಾರಗಳು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಅನ್ಯಭಾಷಿಕ ಬ್ಯಾಂಕ್ ಉದ್ಯೋಗಿಗಳಿಗೆ ಆಯಾ ಪ್ರಾದೇಶಿಕ ಭಾಷೆ ಕಲಿಸಬೇಕು. ಕನ್ನಡದಲ್ಲಿಯೇ ಚಲನ್ಗಳು, ಚೆಕ್ ಹಾಗೂ ರಸೀದಿಗಳನ್ನು ಮುದ್ರಿಸಬೇಕು. ಎಟಿಎಂಗಳಲ್ಲಿ ಕನ್ನಡ ಬಳಸಬೇಕು. ರಾಜ್ಯದ ಗ್ರಾಮೀಣ ಪ್ರದೇಶಗಳ ಬ್ಯಾಂಕಿಂಗ್ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಾಗಿಡಬೇಕು. ಪತ್ರಿಕಾಗೋಷ್ಠಿಯಲ್ಲಿ ಆಮ್ಆದ್ಮಿ ಪಕ್ಷದ ಮುಖಂಡ ಅರುಣ್ಕುಮಾರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Bengaluru: ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.