ಚಿನ್ನಾಭರಣ ದೋಚಿದ್ದವನ ಬಂಧನ
Team Udayavani, Oct 20, 2018, 12:37 PM IST
ಬೆಂಗಳೂರು: ದೇಸಿ ತುಪ್ಪ ಹಾಗೂ ಬೆಣ್ಣೆ ತಂದು ಕೊಡುವ ನೆಪದಲ್ಲಿ ಚಿನ್ನದ ವ್ಯಾಪಾರಿ ಮನೆಯಲ್ಲಿ 1 ಕೆ.ಜಿ ಚಿನ್ನದ ಗಟ್ಟಿ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಸಂಜಯ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುರಾದ್ ನಗರದ ಚಾಚಾಜಿ (51) ಬಂಧಿತ ಆರೋಪಿ. ದೂರುದಾರರು ನೀಡಿದ ಮಾಹಿತಿ ಮೇರೆಗೆ ತನಿಖೆ ನಡೆಸಿ, ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇತ್ತೀಚೆಗೆ ಆರೋಪಿ ಚಾಚಾಜಿ ಮತ್ತೆ ನಗರಕ್ಕೆ ಬಂದ ಬಗ್ಗೆ ಮಾಹಿತಿ ಪಡೆದು ಆತನನ್ನು ಬಂಧಿಸಲಾಗಿದೆ.
ಆರೋಪಿಯಿಂದ 45 ಲಕ್ಷ ರೂ. ಮೌಲ್ಯದ 1 ಕೆ.ಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ತಲೆ ಮರೆಸಿಕೊಂಡಿರುವ ಮತ್ತೂಬ್ಬ ಆರೋಪಿ ರಾಮ್‌ಪಾಲ್ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಪರಿಚಯವಿರುವ ಚಿನ್ನದ ವ್ಯಾಪಾರಿಗಳು ಸೇರಿ ಹಲವರಿಗೆ ದೇಸಿ ಬೆಣ್ಣೆ ಹಾಗೂ ತುಪ್ಪ ಮಾರಾಟ ಮಾಡುವುದಾಗಿ ಆರೋಪಿ ತಿಳಿಸಿದ್ದಾನೆ. ಅದೇ ರೀತಿ ಕಳೆದ ಆಗಸ್ಟ್‌ನಲ್ಲಿ ಗೆದ್ದಲಹಳ್ಳಿ ನಿವಾಸಿ ಅನಿಲ್ ಕುಮಾರ್ ಜೈನ್ ಮನೆಗೆ ಹೋದ ಇಬ್ಬರು ಆರೋಪಿಗಳು, ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.