ನೋಟು ವಿನಿಮಯಕ್ಕೆ ಯತ್ನಿಸುತ್ತಿದ್ದ ಮಹಿಳೆ ಬಂಧನ


Team Udayavani, Apr 5, 2017, 12:01 PM IST

note-exchange-arrest.jpg

ಬೆಂಗಳೂರು: ಅನಿವಾಸಿ ಭಾರತೀಯರ ಸೋಗಿನಲ್ಲಿ ಹಳೇ ನೋಟುಗಳ ಬದಲಾವಣೆಗೆ ಯತ್ನಿಸಿದ ಮಹಿಳೆಯೊಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರ ಜತೆಗಿದ್ದ ಮತ್ತೂಬ್ಬ ಮಹಿಳೆ ಪರಾರಿಯಾಗಿದ್ದಾರೆ.

ವೈಯಾಲಿಕಾವಲ್‌ ನಿವಾಸಿ ಕೃಷ್ಣಕುಮಾರಿ (61) ಬಂಧಿತ ಮಹಿಳೆ. ಆಕೆಯಿಂದ 26,54,500 ಹಳೇ ನೋಟುಗಳು (ಅಪಮೌಲ್ಯಗೊಂಡ ಹಳೇ 500 ಮುಖ ಬೆಲೆಯ 14,77,500 ಮತ್ತು ಸಾವಿರ ಮುಖ ಬೆಲೆಯ 11,77,00 ನೋಟುಗಳು) ಪತ್ತೆಯಾಗಿವೆ.

ಮಾ.30ರಂದು ಗಿರಿನಗರದ ವಿವೇಕಾನಂದ ಪಾರ್ಕ್‌ ಬಳಿ ಹಳೇ ನೋಟುಗಳ ಬದಲಾವಣೆಗೆ ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಕೃಷ್ಣಕುಮಾರಿ ಅವರನ್ನು ಬಂಧಿಸಿದ್ದಾರೆ. ಇದೇ ವೇಳೆ ಮತ್ತೂಬ್ಬ ಮಹಿಳೆ ಚಂದ್ರಮ್ಮ ದ್ವಿಚಕ್ರವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ ಸೂದ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೃಷ್ಣಕುಮಾರಿ ಕೆಲ ವರ್ಷಗಳಿಂದ ಗಿರಿನಗರ ವ್ಯಾಪ್ತಿಯಲ್ಲಿ ಕೃಷ್ಣಕುಮಾರಿ ಟೂರ್ಸ್‌ ಆ್ಯಂಡ್‌ ಟ್ರಾವೆಲ್ಸ್‌ ಏಜೆನ್ಸಿ ನಡೆಸುತ್ತಿದ್ದು, ಪ್ರವಾಸಿ ತಾಣಗಳಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಮಾ.30ರಂದು ಗಿರಿನಗರದಲ್ಲಿರುವ ವಿವೇಕಾನಂದ ಪಾರ್ಕ್‌ ಬಳಿ ಐನೂರು ಮತ್ತು ಸಾವಿರ ಮುಖ ಬೆಲೆಯ 26,54,500 ಲಕ್ಷ ಹಣದ ಸಮೇತ ಬಂದು, ತನ್ನ ಸ್ನೇಹಿತೆ ಚಂದ್ರಮ್ಮನಿಗೆ ಬರಲು ಸೂಚಿಸಿದ್ದರು. ಅದರಂತೆ ಸ್ಥಳಕ್ಕೆ ಬಂದ ಚಂದ್ರಮ್ಮ ಪರಿಚಿತ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಹಣದ ವಿಚಾರ ಚರ್ಚಿಸಿದ್ದರು.

“ಹಣದ ಸಮೇತ ಸ್ಥಳಕ್ಕೆ ಬಂದಿದ್ದು, ಕೂಡಲೇ ನೋಟುಗಳ ಬದಲಾವಣೆಗೆ ಎನ್‌ಆರ್‌ಐ ಒಬ್ಬರನ್ನು ಕರೆತನ್ನಿ,” ಎಂದು ವ್ಯಕ್ತಿಗೆ ದೂರವಾಣಿ ಮೂಲಕ ಮನವಿ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಗಿರಿನಗರ ಠಾಣೆ ಇನ್‌ಸ್ಪೆಕ್ಟರ್‌ ಕೋಟ್ರೇಶಿ ಅವರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಇನ್‌ಸ್ಪೆಕ್ಟರ್‌ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೃಷ್ಣಕುಮಾರಿ ಅವರನ್ನು ಬಂಧಿಸಿದ್ದಾರೆ.

ಈ ವೇಳೆ ಚಂದ್ರಮ್ಮ ಪರಾರಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೃಷ್ಣಕುಮಾರಿ ಸದ್ಯ ಜಾಮೀನು ಪಡೆದು ಬಿಡುಗಡೆಯಾಗಿದ್ದು, ವಿಚಾರಣೆಗೆ ಹಾಜರಾಗುಧಿವಂತೆ ಸೂಚಿಸಲಾಗಿದೆ. ಹಾಗೆಯೇ ಚಂದ್ರಮ್ಮನ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎನ್‌ಆರ್‌ಐಗಳ ಪರಿಚಯ ಹೊಂದಿದ್ದ ಮಹಿಳೆ
ಕೃಷ್ಣಕುಮಾರಿಗೆ ಟ್ರಾವೆಲ್ಸ್‌ ಏಜೆನ್ಸಿ, ಪ್ಯಾಕೇಜ್‌ ಟ್ರಿಪ್‌ಗ್ಳನ್ನು ಆಯೋಜಿಸುವ ವೃತ್ತಿಯಲ್ಲಿ ತೊಡಗಿರುವುದರಿಂದ ಕೆಲ ಅನಿವಾಸಿ ಭಾರತೀಯರ ಪರಿಚಯವಿತ್ತು.  ಹೀಗಾಗಿ, ಕಮಿಷನ್‌ ಆಧಾರದ ಮೇಲೆ ಹಳೇ ನೋಟುಗಳ ಬದಲಾವಣೆ ಮಾಡಿಕೊಡುವುದಾಗಿ ಹೇಳಿ ಹತ್ತಾರು ಮಂದಿಯಿಂದ ಲಕ್ಷಾಂತರ ರುಪಾಯಿ ಹಣ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.