ಗಾಂಜಾ ಎಣ್ಣೆ ಮಾರುತ್ತಿದ್ದ ಕೇರಳಿಗರ ಬಂಧನ


Team Udayavani, Jul 31, 2017, 11:53 AM IST

ganja-arrest.jpg

ಬೆಂಗಳೂರು: ನಿಷೇಧಿತ ಮಾದಕ ದ್ರವ್ಯ ಗಾಂಜಾ ಎಣ್ಣೆ (ಹಾಶೀಶ್‌ ಆಯಿಲ್‌) ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣೂರಿನ ಅಲಕೋಡಿಯ ನಿವಾಸಿ ಜಾನ್ಸನ್‌(31), ಇಡುಕ್ಕಿ ಜಿಲ್ಲೆಯ ಪೊನ್ನಾತ್ತಾಡಿಯ ಬಿಜು ಅಬ್ರಹಾಂ ಬಂಧಿತರು.

ಇವರಿಂದ 6.ಕೆ.ಜಿಯ 561 ಗ್ರಾಂ ತೂಕದ ಗಾಂಜಾ ಎಣ್ಣೆ ವಶಕ್ಕೆ ಪಡೆಯಲಾಗಿದೆ. ಕೇರಳದ ಮಲೆನಾಡು ಪ್ರದೇಶಗಳಲ್ಲಿ ರಬ್ಬರ್‌ ಫಾರಂಗಳಲ್ಲಿ ರಬ್ಬರ್‌ ಮರಗಳಿಂದ ಹಾಲನ್ನು ಟ್ಯಾಪಿಂಗ್‌ ಮಾಡಿ ರಬ್ಬರ್‌ ಉತ್ಪತ್ತಿ ಮಾಡುವ ಕೆಲಸ ಮಾಡುತ್ತಿದ್ದ ಆರೋಪಿಗಳು, ಆಗಾಗ್ಗೆ ನಗರಕ್ಕೆ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು.

ಕೆಲ ದಿನಗಳ ಹಿಂದೆ ತಾವರೆಕೆರೆ ಬಸ್‌ ನಿಲ್ದಾಣದ ಆಲದ ಮರದ ಕಟ್ಟೆಯ ಬಳಿ ಗಾಂಜಾ ಎಣ್ಣೆ ಮಾರಾಟ ಮಾಡಲು ಹೊಂಚು ಹಾಕಿ ಕುಳಿತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸುದ್ದಗುಂಟೆ ಪಾಳ್ಯ ಠಾಣೆ ಇನ್‌ಸ್ಪೆಕ್ಟರ್‌ ಗಿರೀಶ್‌ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಬೋರಲಿಂಗಯ್ಯ ತಿಳಿಸಿದ್ದಾರೆ.

ಏನಿದು ಆಶಿಷ್‌ ಆಯಿಲ್‌?
ಹಸಿ ಗಾಂಜಾ ಸೊಪ್ಪನ್ನು ಆಲ್ಕೋಹಾಲ್‌ನೊಂದಿಗೆ ಬೆರೆಸಿ ಅರೆದು ದ್ರವರೂಪಕ್ಕೆ ಪರಿವರ್ತಿಸಲಾಗುತ್ತದೆ. ಆಲ್ಕೋಹಾಲ್‌ ಅಂಶವು ಗಾಂಜಾ ದ್ರವದೊಂದಿಗೆ ಕರಗಿದ ನಂತರ ದ್ರವವನ್ನು ಕಾಯಿಸಿ ಕುದಿಸಿ ನೀರಿನ ಅಂಶ ಆವಿಯಾದ ನಂತರ ಎಣ್ಣೆ ರೂಪದ ಅಂಟು ದ್ರವ ಉತ್ಪತ್ತಿಯಾಗುತ್ತದೆ. ಇದನ್ನು ಫಿಲ್ಟರ್‌ ಮಾಡಿ ದ್ರವ ರೂಪದ ಶುದ್ಧ ಹಶೀಶ್‌ ಆಯಿಲ್‌ ತಯಾರಿಸಲಾಗುತ್ತಿದೆ. ಇದನ್ನು ಗಾಂಜಾ ಸೊಪ್ಪಿನಿಂದ ಬೇರ್ಪಡಿಸಿ ಎಣ್ಣೆ ಉತ್ಪತ್ತಿ ಮಾಡಲಾಗುತ್ತದೆ.

ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿ ಇದನ್ನು ಉತ್ಪತ್ತಿ ಮಾಡಲಾಗುತ್ತದೆ.1 ಕೆ.ಜಿ. ಎಣ್ಣೆ ಉತ್ಪತ್ತಿ ಮಾಡಲು ಸುಮಾರು 6 ಕೆ.ಜಿ.ಗಾಂಜಾ ಸೊಪ್ಪಿನ ಅಗತ್ಯವಿರುತ್ತದೆ. ಇದನ್ನು ಸಿಗರೇಟ್‌ಗೆ ಹಚ್ಚಿಕೊಂಡು ಸೇದುವುದರಿಂದ ಹೆಚ್ಚಿನ ಮತ್ತು ಬರುತ್ತದೆ. ಕಾಲೇಜು ವಿದ್ಯಾರ್ಥಿಗಳು-ಯುವ ಸಮುದಾಯದಿಂದ ಈ ಎಣ್ಣೆಗೆ ಬಾರಿ ಬೇಡಿಕೆ ಇದೆ.

ಕೇರಳದಲ್ಲಿ ಅಕ್ರಮವಾಗಿ ಅತಿ ಹೆಚ್ಚಾಗಿ ಮಾರಾಟ ಮಾಡಲಾಗುತ್ತದೆ. ಇದನ್ನೇ ಲಾಭವಾಗಿ ಮಾಡಿಕೊಂಡ ಆರೋಪಿಗಳು ಈ ದಂಧೆಯಲ್ಲಿ ತೊಡಗಿಸಿಕೊಂಡಿರುವ ವಿಚಾರಣೆಯಲ್ಲಿ ಕಂಡು ಬಂದಿದೆ. ನಗರದ ವಿವಿಧೆಡೆ ಆರೋಪಿಗಳು ಗಾಂಜಾ ಎಣ್ಣೆ ಮಾರಾಟ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.