ಕೇಬಲ್ ವಿಜಿ ಕೊಲೆ ಪ್ರಕರಣ ಕಾರ್ಪೊರೇಟರ್ ಪುತ್ರ ಬಂಧನ
Team Udayavani, Dec 19, 2018, 12:25 PM IST
ಬೆಂಗಳೂರು: ಇತ್ತೀಚೆಗೆ ಹತ್ಯೆಯಾದ ರೌಡಿಶೀಟರ್ ವಿಜಯ್ ಕುಮಾರ್ ಅಲಿಯಾಸ್ ಕೇಬಲ್ ವಿಜಿ ಕೊಲೆ ಪ್ರಕರಣ ಸಂಬಂಧ ಹೊಂಬೇಗೌಡನಗರದ ಬಿಬಿಎಂಪಿ ಕಾರ್ಪೋರೇಟರ್ ಡಿ.ಚಂದ್ರಪ್ಪ ಪುತ್ರ ಸೂರಜ್ ಸೇರಿದಂತೆ 13 ಮಂದಿಯನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ನಡೆಸಿದ ಆಡುಗೋಡಿ ಪೊಲೀಸರು ಈ ಹಿಂದೆ ಕೆಲ ಆರೋಪಿಗಳನ್ನು ಬಂಧಿಸಿದ್ದರು. ಇವರ ವಿಚಾರಣೆ ಸಂದರ್ಭದಲ್ಲಿ ಕಾರ್ಪೊರೇಟರ್ ಪುತ್ರ ಸೂರಜ್ ಪಾತ್ರದ ಬಗ್ಗೆ ಬಾಯಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂರಜ್ ಹಣಕಾಸು ವ್ಯವಹಾರ ನಡೆಸುತ್ತಿದ್ದು, ವಾಹನ ಡಿಕ್ಕಿಯಾದ ವಿಚಾರ ಮತ್ತು ಹಣಕಾಸು ವ್ಯವಹಾರವೊಂದರಲ್ಲಿ ಸೂರಜ್ ಮತ್ತು ವಿಜಿ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಆಕ್ರೋಶಗೊಂಡ ಸೂರಜ್ ವಿಜಿ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ರಿಯಲ್ ಎಸ್ಟೇಟ್,ಕೇಬಲ್ ವ್ಯವಹಾರ ನಡೆಸುತ್ತಿದ್ದ ವಿಜಿ, ಈ ಹಿಂದೆ ಕೆಲವರಿಗೆ ಕಿರುಕುಳ ನೀಡಿದ್ದ.
ಅಲ್ಲದೆ, ಡೇರಿ ಮಹೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ವಿಜಿಗೆ ಹಲವು ಮಂದಿ ವೈರಿಗಳಿದ್ದರು. ಇವರನ್ನೇ ಅಸ್ತ್ರಗಳನ್ನಾಗಿ ಮಾಡಿಕೊಂಡು ಸೂರಜ್, ವಿಜಿ ವಿರೋಧಿಗಳನ್ನು ಒಟ್ಟುಗೂಡಿಸಿದ್ದ. ಅವರಿಗೆ ಹಣಕಾಸು, ವಾಹನದ ನೆರವು ನೀಡಿ ಕೊಲೆ ಮಾಡಲು ಸಹಕಾರ ನೀಡಿದ್ದ ಎಂದು ಆಡುಗೋಡಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.