ಬಿ-ಪ್ಯಾಕ್‌ ಸಲಹೆ ವರ್ಷದಲ್ಲಿ ಕಾರ್ಯರೂಪ

Team Udayavani, Jun 17, 2018, 11:26 AM IST

b-pac.jpg

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಪ್ಲಾಸ್ಟಿಕ್‌ ಮುಕ್ತ ಹಾಗೂ ಪೋಸ್ಟರ್‌, ಫ್ಲೆಕ್ಸ್ ರಹಿತ ನಗರ ಮಾಡುವುದು ಹಾಗೂ ಕಸ ವಿಲೇವಾರಿಗೆ ಆಧುನಿಕ ತಂತ್ರಜ್ಞಾನ ಬಳಸುವ ಸಂಬಂಧ ಬಿ-ಪ್ಯಾಕ್‌ ನೀಡಿರುವ ಸಲಹೆಗಳನ್ನು ಒಂದು ವರ್ಷದಲ್ಲಿ ಕಾರ್ಯರೂಪಕ್ಕೆ ತರುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ನಗರದ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿರುವ ಬಿ-ಪ್ಯಾಕ್‌ ಸಂಸ್ಥೆ ಕಚೇರಿಗೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿಗಳು, ಈಗಾಗಲೇ ಚಾಲ್ತಿಯಲ್ಲಿರುವ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು, ತೀವ್ರ ಸಂಚಾರ ದಟ್ಟಣೆ ಕಾರಿಡಾರ್‌, ವೈಟ್‌ಟಾಪಿಂಗ್‌, ಕಸ ವಿಲೇವಾರಿ ಮತ್ತು ಮೆಟ್ರೋ ಯೋಜನೆ ಕುರಿತು ಬಿ-ಪ್ಯಾಕ್‌ ತಂಡದೊಂದಿಗೆ ಚರ್ಚಿಸಿದರು.

ಹಾಗೇ ಚರ್ಚೆ ವೇಳೆ ತಂಡ ನೀಡಿರುವ ಸಲಹೆ, ಅಭಿಪ್ರಾಯಗಳನ್ನು ಗಮನದಲ್ಲಿರಿಸಿಕೊಂಡು, ಶೀಘ್ರವೇ ಕಾರ್ಯರೂಪಕ್ಕೆ ತರುವುದಾಗಿ ಸಿಎಂ ತಿಳಿಸಿದರು. ಘನತ್ಯಾಜ್ಯ ನಿರ್ವಹಣೆ, ಕೊಳಚೆ ನೀರು ಸಂಸ್ಕರಣಾ ಘಟಕ ಮತ್ತು ಕೆರೆಗಳ ಪುನಶ್ಚೇತನಕ್ಕೆ ಈ ಹಿಂದಿನ ಸರ್ಕಾರ ಆರಂಭಿಸಿದ್ದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಸಮ್ಮಿಶ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ಬಿ-ಪ್ಯಾಕ್‌ ಸದಸ್ಯರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಜತೆ ಈ ಬಗ್ಗೆ ಚರ್ಚಿಸಲಾಗುವುದು. ನಗರಾಭಿವೃದ್ಧಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಭೆ ಕರೆದು, ಅಗತ್ಯವಿರುವ ಎಲ್ಲ ಕಾರ್ಯಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.

ಸಿಎಂ ಭೇಟಿ ವೇಳೆ ಬಿ-ಪ್ಯಾಕ್‌ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಷಾ, ಉಪಾಧ್ಯಕ್ಷರಾದ ಮೋಹನ್‌ದಾಸ್‌ ಪೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವತಿ ಅಶೋಕ್‌, ಪದಾಧಿಕಾರಿಗಳಾದ ಆರ್‌.ಕೆ.ಮಿಶ್ರಾ, ಆನಂದ ಗುಂಡೂರಾವ್‌ ಭಾಗವಹಿಸಿದ್ದರು. ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್‌ ಇದ್ದರು.

ಟಾಪ್ ನ್ಯೂಸ್

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.