ಅಭಿವ್ಯಕ್ತಿಗೆ ಧಕ್ಕೆ ತರುವ ಸಂಘಟನೆಗಳ ನಿಷೇಧ ಅಗತ್ಯ
Team Udayavani, Apr 3, 2019, 3:00 AM IST
ಬೆಂಗಳೂರು: ವಿಚಾರವಾದಿಗಳ ಹತ್ಯೆಗೈದ ಹಾಗೂ ಬುದ್ಧಿ ಜೀವಿಗಳು, ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಧರ್ಮದ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಾಹಿತಿ ಡಾ.ಕೆ.ಷರೀಫಾ ತಿಳಿಸಿದರು.
ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಸೌಹಾರ್ದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಚುನಾವಣೆ- ಮಹಿಳಾ ಬೇಡಿಕೆಗಳ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಮಾನವ ಹಕ್ಕುಗಳ ದಮನವಾಗುತ್ತಿದೆ. ಕೋಮುವಾದ ಹಾಗೂ ಕೋಮುವಾದದ ಗಲಭೆಗಳನ್ನು ತಡೆಗಟ್ಟುವಂತಹ ಬಲಿಷ್ಠ ಕಾನೂನುಗಳನ್ನು ಮುಂದಿನ ಲೋಕಸಭೆಗೆ ಆಯ್ಕೆಯಾಗುವ ಆಡಳಿತ ಪಕ್ಷ ಜಾರಿಗೊಳಿಸಬೇಕು ಎಂದು ಹೇಳಿದರು.
ಕೋಮು ಗಲಭೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾಯ್ದೆ ಜಾರಿಗೊಳಿಸಿ, ಅದರಲ್ಲಿನ ಸಂತ್ರಸ್ತರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಅತ್ಯಂತ ಶೀಘ್ರವಾಗಿ ಪರಿಹಾರ ದೊರೆಯುವಂತೆ ಮಾಡಬೇಕು.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಮತ್ತಷ್ಟು ಬಲಪಡಿಸಬೇಕು. ಬಾವಿ, ದೇವಸ್ಥಾನ, ಚಹಾ ಅಂಗಡಿ ಮೊದಲಾದ ಸಾರ್ವಜನಿಕ ಸ್ಥಳಗಳನ್ನು ಬಳಸಲು ತಡೆಯೊಡ್ಡುವುದು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹೇರುವುದನ್ನು ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ತರಬೇಕು ಎಂದರು.
ಪತ್ರಕರ್ತೆ ಆರ್.ಪೂರ್ಣಿಮಾ ಮಾತನಾಡಿ, 1993ರಲ್ಲಿ ಬಲವಂತರಾಯ್ ಮೆಹ್ತಾ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಲು ಮುಂದಾಗಿದ್ದರು. ಬಳಿಕ 1996ರಲ್ಲಿ ಎಚ್.ಡಿ.ದೇವೇಗೌಡ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಬಗ್ಗೆ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದರು.
ಆದರೆ ಈ ಮಸೂದೆ ಇದುವರೆಗೂ ಕಾಯ್ದೆಯಾಗಿ ಅನುಷ್ಠಾನಗೊಳ್ಳದಿರುವುದು ವಿಪರ್ಯಾಸ ಎಂದು ಹೇಳಿದರು. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಆದ್ಯತೆ ಮೇಲೆ ಜಾರಿಗೊಳಿಸಬೇಕು.
ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇರಬಹುದಾದ ಅಸಾಂವಿಧಾನಿಕ ಅಡೆತಡೆಗಳನ್ನು ತೆಗೆದು ಹಾಕಿ ಶೇ.50 ಮೀಸಲಾತಿ ಅನುಸಾರ ಮಹಿಳೆಯರು ಚುನಾವಣೆ ಎದುರಿಸಲು ಎಲ್ಲ ಅನುಕೂಲಗಳನ್ನು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪತ್ರಕರ್ತೆ ಡಾ.ವಿಜಯಾ, ಗಾರ್ಮೆಂಟ್ಸ್ ಲೇಬರ್ಸ್ ಯೂನಿಯನ್‌ನ ವಿ.ಪಿ.ರುಕ್ಮಿಣಿ, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ಲಕ್ಷ್ಮೀ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.