ಬ್ಯಾನರ್ ತೆರವು ಬಹುತೇಕ ಪೂರ್ಣ
Team Udayavani, Mar 29, 2018, 2:34 PM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯ ನಂತರ ನಗರದಲ್ಲಿ ಆರಂಭವಾದ ಜಾಹೀರಾತು ತೆರವು ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು, ಪಾಲಿಕೆಯ ಸಿಬ್ಬಂದಿ ನಗರದ ನೂರಾರು ಕಡೆಗಳಲ್ಲಿನ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಚುನಾವಣೆ ಆಯೋಗದ ನಿರ್ದೇಶನದಂತೆ ರಾಜಕೀಯ ಪಕ್ಷಗಳು, ಸರ್ಕಾರದ ಕಾರ್ಯಕ್ರಮಗಳ ಜಾಹೀರಾತುಗಳು, ರಾಜಕೀಯ ಮುಖಂಡರ ಭಾವಚಿತ್ರವಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಜಾಹೀರಾತು ಫಲಕಗಳನ್ನು ತೆರವುಗೊಳಿಸುತ್ತಿದ್ದು, ಹಲವಾರು ಕಡೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಸಾವಿರಾರು ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನದಿಂದಲೇ ಆರಂಭವಾಗಿರುವ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆಗೆ 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಯಾಗಿದ್ದು ಮರಗಳು, ಟೆಲಿಫೋನ್ ಹಾಗೂ ವಿದ್ಯುತ್ ಕಂಬಗಳಿಗೆ ಅಳವಡಿಸಿರುವ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಿ ಟ್ರ್ಯಾಕ್ಟರ್‌ಗಳ ಮೂಲಕ ಪಾಲಿಕೆಯಿಂದ ಗುರುತಿಸಲಾಗಿರುವ ಖಾಲಿ ಜಾಗಗಳಲ್ಲಿ ವಿಲೇವಾರಿ ಮಾಡಲಾಗಿದೆ.
ಕಾರ್ಯಾಚರಣೆಗಾಗಿ ಪಾಲಿಕೆಯಿಂದ ಪ್ರತಿಯೊಂದು ವಲಯದಲ್ಲಿಯೂ ಪ್ರತ್ಯೇಕ ತಂಡ ರಚಿಸಲಾಗಿದ್ದು, ಬುಧವಾರ ರಾತ್ರಿಯೊಳಗೆ ನಗರದಲ್ಲಿನ ಎಲ್ಲ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸುವಂತೆ ಹಾಗೂ ಆ ಕುರಿತ ಸಮಗ್ರ ವರದಿ ನೀಡುವಂತೆ ಆಯುಕ್ತರು ಪಾಲಿಕೆಯ ಎಲ್ಲ ವಲಯಗಳ ಜಂಟಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬಸ್ ತಂಗುದಾಣ: ಪಾಲಿಕೆಯ ಸಿಬ್ಬಂದಿ ನಗರದಲ್ಲಿನ 2 ಸಾವಿರಕ್ಕೂ ಹೆಚ್ಚು ಬಸ್ ತಂಗುದಾಣಗಳು ಹಾಗೂ ವಿವಿಧ ವಾರ್ಡ್‌ಗಳಲ್ಲಿ ಶಾಸಕರು, ಸಂಸದರು ಅನುದಾನದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಅಳವಡಿಸಲಾಗಿದ್ದ ಜಾಹೀರಾತುಗಳನ್ನು ತೆರವುಗೊಳಿಸಲಾಗಿದೆ.
ಸಾರಿಗೆ ಸಂಸ್ಥೆಗೆ ಸೂಚನೆ: ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಳವಡಿಸಲಾಗಿರುವ ಸರ್ಕಾರದ ಕಾರ್ಯಕ್ರಮಗಳು ಹಾಗೂ ರಾಜಕೀಯ ಮುಖಂಡ ಭಾವಚಿತ್ರವಿರುವ ಜಾಹೀರಾತುಗಳನ್ನು ಬುಧವಾರ ರಾತ್ರಿಯೊಳಗೆ ತೆರವುಗೊಳಿಸುವಂತೆ ಚುನಾವಣಾ ಆಯೋಗ ಹಾಗೂ ಆಯುಕ್ತರು ಎರಡೂ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದೆ.
ಮಂಗಳವಾರ ಮಧ್ಯಾಹ್ನದಿಂದ ನಡೆಯುತ್ತಿರುವ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆ ಬುಧವಾರ ಸಂಜೆ ವೇಳೆಗೆ ಶೇ.85ರಷ್ಟು ಮುಗಿದಿದ್ದು, ಬೃಹತ್ ಜಾಹೀರಾತು ಫಲಕಗಳಲ್ಲಿನ ಜಾಹೀರಾತುಗಳನ್ನು ಜೆಸಿಬಿ ಬಳಸಿ ಬುಧವಾರ ರಾತ್ರಿಯೊಳಗೆ ತೆರವುಗೊಳಿಸಲಾಗಿದೆ. ಜತೆಗೆ ಬಸ್‌ಗಳಲ್ಲಿನ ಜಾಹೀರಾತುಗಳನ್ನು ಕೂಡಲೇ ತೆರವು ಮಾಡುವಂತೆ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಗೆ ಸೂಚಿಸಲಾಗಿದೆ.
-ಎನ್.ಮಂಜುನಾಥ ಪ್ರಸಾದ್, ನಗರ ಜಿಲ್ಲಾ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.