ಕೆರೆಯಂಚಿನ ಬಾಂಗ್ಲಾ ವಲಸಿಗರತೆರವಿಗೆ ಮುಂದಾದ ಬಿಬಿಎಂಪಿ
Team Udayavani, Jun 1, 2017, 12:16 PM IST
ಮಹದೇವಪುರ: ವರ್ತೂರು ಕೆರೆ ತಟದಲ್ಲಿ ಟೆಂಟ್ ಹಾಕಿ ಜೀವನ ನಡೆಸುತ್ತಿರುವ ಬಾಂಗ್ಲಾ ನುಸುಳುಕೋರರನ್ನು ಸ್ಥಳಾಂತರಿಸಲು ಬಿಬಿಎಂಪಿ ಮುಂದಡಿ ಇಟ್ಟಿದೆ. ಕೆರೆಗೆ ತ್ಯಾಜ್ಯ ಸುರಿಯುತ್ತಿರುವ ಆರೋಪಗಳು ಇವರ ಮೇಲಿರುವುದರಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.
ಕೆರೆ ಅಂಚಿನಲ್ಲಿ ವಾಸವಾಗಿರುವ ಬಾಂಗ್ಲಾ ನಸುಳುಕೋರರು ರಸ್ತೆಗಳು, ಖಾಲಿ ಪ್ರದೇಶದಲ್ಲಿನ ಪ್ಲ್ರಾಸ್ಟಿಕ್ ಮತ್ತು ಇನ್ನಿತರೇ ತ್ಯಾಜ್ಯವನ್ನು ಆಯ್ದು ಅವುಗಳನ್ನು ಮಾರುವ ವೃತ್ತಿ ನಡೆಸುತ್ತಿದ್ದಾರೆ. ಮಾರಾಟವಾಗದ ತ್ಯಾಜ್ಯವನ್ನು ವರ್ತೂರು ಕೆರೆಗೆ ಸುರಿಯುತ್ತಿದ್ದಾರೆ ಎಂಬ ದೂರುಗಳು ಇವರ ಮೇಲಿದೆ.
ಹೀಗಿರುವಾಗಲೇ ಮಂಗಳವಾರ ವರ್ತೂರು ಕೆರೆ ಪ್ರದೇಶದ ರಾಜಕಾಲುವೆಯಲ್ಲಿ ಕಸಕ್ಕೆ ಬೆಂಕಿ ಹೊತ್ತಿಕೊಂಡು ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತಿರುವ ಬಿಬಿಎಂಪಿ ಅಧಿಕಾರಿಗಳು, ಮಹದೇವಪುರ ವಲಯ ಜಂಟಿ ಆಯುಕ್ತೆ ವಾಸಂತಿ ಅಮರ್ ನೇತೃತ್ವದಲ್ಲಿ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ.
ಅಧಿಕಾರಿಗಳ ಭೇಟಿ ವೇಳೆ ಶೆಡ್ಗಳಲ್ಲಿ ವಾಸಿಸುತ್ತಿದ್ದವರ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳನ್ನು ಪರಿಶೀಲಿಸಲಾಯಿತು. ಆದರೆ, ಇವರೆಲ್ಲ ಅಕ್ರಮ ವಲಸಿಗರು ಎಂಬುದು ತಿಳಿದುಬಂದಿದೆ. ಮಾನವೀಯತೆ ದೃಷ್ಟಿಯಿಂದ ಎರಡು ದಿನಗಳ ಕಾಲವಕಾಶ ನೀಡಲಾಗಿದ್ದು, ಕೆರೆ ಅಂಚಿನಿಂದ ಬೇರೆಡೆಗೆ ಸ್ಥಳಾಂತರವಾಗುವಂತೆ ಅವರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.