ಬಿಜೆಪಿ ಹೆಸರಲ್ಲಿ ಬಿಬಿಎಂಪಿ ಜಂಟಿ ಆಯುಕ್ತರಿಗೆ ಕೊಲೆ ಬೆದರಿಕೆ ಪತ್ರ
Team Udayavani, Jun 6, 2017, 12:42 PM IST
ಬೆಂಗಳೂರು: ವಸತಿ ಪ್ರದೇಶಗಳಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಪಾಲಿಕೆಯಿಂದ ನೋಟಿಸ್ ಜಾರಿ ಮಾಡುತ್ತಿರುವ ಅಧಿಕಾರಿ ಸರ್ಫರಾಜ್ ಖಾನ್ ಅವರಿಗೆ ಬಿಜೆಪಿ ಹಲಸೂರು ಘಟಕದ ಹೆಸರಿನಲ್ಲಿ ಕೊಲೆ ಬೆದರಿಕೆ ಪತ್ರ ಬಂದಿದೆ.
ಪಾಲಿಕೆಯ ಘನತ್ಯಾಜ್ಯ ಮತ್ತು ಆರೋಗ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರಿಗೆ ಅಂಚೆ ಮೂಲಕ ಪತ್ರವೊಂದು ಬಂದಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ನೋಟಿಸ್ ನೀಡುವುದು ನಿಲ್ಲಿಸದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಜತೆಗೆ ಪಾಕಿಸ್ತಾನಕ್ಕೆ ಕಳುಹಿಸುವುದಾಗಿ ಉಲ್ಲೇಖೀಸಲಾಗಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಈಗಾಗಲೇ 1000ಕ್ಕೂ ಹೆಚ್ಚು ವಸತಿ ಪ್ರದೇಶಗಳಲ್ಲಿನ ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ವಸತಿ ಪ್ರದೇಶದಲ್ಲಿದ್ದು, ಅವುಗಳಿಗೆ ನೋಟಿಸ್ ಜಾರಿಗೊಳಿಸುವ ಜವಾಬ್ದಾರಿಯನ್ನು ಸರ್ಫರಾಜ್ ಖಾನ್ ವಹಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಹಲಸೂರು ಘಟಕದ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸರ್ಫರಾಜ್ ಅವರು, ಅಂಚೆ ಲಕೋಟೆಯ ಮೇಲೆ ಬಿಜೆಪಿ ಹಲಸೂರು ಘಟಕದ ಹೆಸರಿದ್ದರೂ ಇದು ಅವರ ಕೆಲಸವಲ್ಲ. ಸ್ಥಳೀಯರೇ ಈ ಕೆಲಸ ಮಾಡಿರುವ ಸಾಧ್ಯತೆಗಳಿವೆ. ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ. ಬೆದರಿಕೆ ಪತ್ರದ ಕುರಿತು ಮೇಲಾಧಿಕಾರಿಗಳು ಹಾಗೂ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.