ಬಿಜೆಪಿಗೆ 2 ಬಗೆಯ ಕಾಂಗ್ರೆಸ್‌ ಸವಾಲು


Team Udayavani, Feb 12, 2018, 6:00 AM IST

11BNP-(13).jpg

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಾಂಗ್ರೆಸ್‌ ಎಂಬ ಎರಡು ಕಾಂಗ್ರೆಸ್ಸನ್ನು ಏಕಕಾಲದಲ್ಲಿ ಎದುರಿಸಬೇಕಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಹೇಳಿದ್ದಾರೆ.

ಕಳೆದ ನಾಲ್ಕೂವರೆ ವರ್ಷದಲ್ಲಿ ಎಲ್ಲೆಲ್ಲಿ ಚುನಾವಣೆ ನಡೆದಿತ್ತೋ ಅಲ್ಲೆಲ್ಲಾ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೆದ್ದಿದೆ. ಆದರೆ, ಕರ್ನಾಟಕದಲ್ಲಿ ಪರಿಸ್ಥಿತಿ ಹಾಗಿಲ್ಲ. ಇಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ಸನ್ನು ನಾವು ಎದುರಿಸಬೇಕಿದೆ. ಜತೆಗೆ ಇತ್ತೀಚೆಗೆ ತನ್ನ ಕಾರ್ಯತಂತ್ರ ಬದಲಿಸಿಕೊಳ್ಳುತ್ತಿರುವ ರಾಹುಲ್‌ ಗಾಂಧಿ ಅವರ ಕಾಂಗ್ರೆಸ್‌ ವಿರುದ್ಧವೂ ಹೋರಾಟ ನಡೆಸಬೇಕಿದೆ. ಆದ್ದರಿಂದ ಚುನಾವಣೆಯಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದರು.

ನಗರದ ಆನಂದರಾವ್‌ ವೃತ್ತದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಬಿಜೆಪಿ ಮಾಧ್ಯಮ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಈಗ ಚುನಾವಣಾ ಯುದ್ಧ ಆರಂಭವಾಗಿದ್ದು, ಪಕ್ಷದ ಸೈನಿಕರನ್ನು ಪ್ರಚಾರ ಯುದ್ಧಕ್ಕೆ ಸಜ್ಜುಗೊಳಿಸಬೇಕು. ದಿನದ ಇಪ್ಪತ್ನಾಲ್ಕು ಗಂಟೆ ಎಚ್ಚರವಾಗಿಯೇ ಇರಬೇಕು ಎಂದು ಹೇಳಿದರು.

ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಮಾತನಾಡಿ, ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್‌ ಪಾಲಿಗೆ ಉಳಿದುಕೊಂಡಿರುವುದು ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳು ಮಾತ್ರ. ಕರ್ನಾಟಕವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ತನ್ನೆಲ್ಲಾ ಶಕ್ತಿಯನ್ನು ಬಳಕೆ ಮಾಡುತ್ತದೆ. ಹೀಗಾಗಿ ಕರ್ನಾಟಕ ನಮಗೆ ಸುಲಭದ ತುತ್ತಲ್ಲ. ಆದರೂ ನಾವು ಬಿಡುವುದಿಲ್ಲ. ಭಾರತವನ್ನು ಕಾಂಗ್ರೆಸ್‌ ಮುಕ್ತ ಮಾಡುವುದು ಮತ್ತು ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಂಡಿತ ಎಂದು ಹೇಳಿದರು.

ಪರಂಪರಾಗತವಾಗಿ ಬಂದ ಸಂಪತ್ತಿನ ಅಮಲಿನಲ್ಲಿ ತೇಲುತ್ತಿರುವ ಕಾಂಗ್ರೆಸ್‌ನಲ್ಲಿ ಗಾಂಧಿ ಪರಿವಾರ ಬಿಟ್ಟು ಬೇರೆ ಯಾರೂ ಪಕ್ಷದ ಅಧ್ಯಕ್ಷರಾಗಲು ಸಾಧ್ಯವಿಲ್ಲ. ಆದರೆ, ಬಿಜೆಪಿಯಲ್ಲಿ ಕಠಿಣ ಪರಿಶ್ರಮವಿದ್ದರೆ ಯಾರು ಬೇಕಾದರೂ ಉನ್ನತ ಸ್ಥಾನಕ್ಕೆ ಹೋಗಬಹುದು. ಇದಕ್ಕೆ ಚಹಾ ಮಾರುತ್ತಿದ್ದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದು, ಸಾಧಾರಣ ರೈನನ ಮಗ ರಾಮ್‌ನಾಥ್‌ ಕೋವಿಂದ್‌ ರಾಷ್ಟ್ರಪತಿಯಾಗಿರುವುದು ಉದಾಹರಣೆ. ಇಂತಹ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಬಿಜೆಪಿ ಮಾಧ್ಯಮ ಘಟಕ ಮಾಡಬೇಕು ಎಂದು ಹೇಳಿದರು.

ಒಂದೆಡೆ ಕೇರಳದಲ್ಲಿ ಕೊಲೆ ಪ್ರಕರಣಗಳಲ್ಲಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸುತ್ತಾರೆ. ಇನ್ನೊಂದೆಡೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅವರಿಗೆ ಕೆಪು ಹಾಸಿನ ಸ್ವಾಗತ ಕೋರುತ್ತದೆ. ಬಿಜೆಪಿಯವರು ಎಸ್‌ಡಿಪಿಐ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಹೇಳುತ್ತಾ ಅವರೇ ಬಿಬಿಎಂಪಿಯಲ್ಲಿ ಹೊಂದಾಣಿಕೆ ಮಾಡಿಕೊಂಡು ಎಸ್‌ಡಿಪಿಐ ಸದಸ್ಯನನ್ನು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆ. ಕಾಂಗ್ರೆಸ್‌ನ ಇಂತಹ ದ್ವಂದ್ವಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕೇಂದ್ರ ಸಚಿವ ಅನಂತಕುಮಾರ್‌, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಜೆ.ವಿ.ಎಲ….ನರಸಿಂಹ ರಾವ್‌, ಸಂಬಿತ್‌ ಪಾತ್ರ ಸೇರಿದಂತೆ ರಾಜ್ಯ ವಕ್ತಾರರು, ಮಾಧ್ಯಮ ವಿಭಾಗದ ಪ್ರಮುಖರು ಹಾಜರಿದ್ದರು.

ಮೋದಿ ಎಂದರೆ ವಿಕಾಸ, ರಾಹುಲ್‌ ಎಂದರೆ ವಿನಾಶ, ಸಿದ್ದರಾಮಯ್ಯ ಎಂದರೆ ಸರ್ವನಾಶ
ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಎಂದರೆ ವಿಕಾಸ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಎಂದರೆ ವಿನಾಶ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರೆ ಸರ್ವನಾಶ.

ಇದು ಕೇಂದ್ರ ಸಚಿವ ಅನಂತಕುಮಾರ್‌ ಅವರ ವ್ಯಾಖ್ಯಾನ. ನಗರದ ಆನಂದರಾವ್‌ ವೃತ್ತದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಬಿಜೆಪಿ ಮಾಧ್ಯಮ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಾಲಿನ ವಿನಾಶದ ಸಂಕೇತ ಎಂದು ವ್ಯಂಗ್ಯವಾಡಿದರಲ್ಲದೆ, ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಮೂಲಕ ರಾಹುಲ್‌ ಗಾಂಧಿ ಅವರು ರಾಜ್ಯದಲ್ಲೂ ಕಾಂಗ್ರೆಸ್‌ ವಿನಾಶಕ್ಕೆ ನಾಂದಿ ಹಾಡುತ್ತಿದ್ದಾರೆ ಎಂದರು.

ಸಾಧಾರಣವಾಗಿ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಹಿಂದಿನ ಕೇಂದ್ರ ಸರ್ಕಾರಗಳ ಜತೆ ಹೋಲಿಸುತ್ತಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಹುಲ್‌ ಗಾಂಧಿ ಹಿಂದಿನ ಮನಮೋಹನ್‌ ಸಿಂಗ್‌ ಸರ್ಕಾರಕ್ಕೆ ಹೋಲಿಸದೆ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಜತೆ ಹೋಲಿಸುತ್ತಾರೆ. ಇದು ರಾಹುಲ್‌ ಗಾಂಧಿ ಸ್ಟೈಲ್‌ ಎಂದು ವ್ಯಂಗ್ಯವಾಡಿದರು.

ಥೈಲ್ಯಾಂಡ್‌ನ‌ಲ್ಲಿ ಧ್ಯಾನ ಮಾಡುವವರು: ಕೆಲ ತಿಂಗಳ ಹಿಂದೆ ರಾಹುಲ್‌ ಗಾಂಧಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ವಾಪಸ್‌ ಬಂದ ಮೇಲೆ ಮಾಧ್ಯಮದವರು ಪ್ರಶ್ನಿಸಿದಾಗ ನಾನು ಥೈಲ್ಯಾಂಡ್‌ಗೆ ಧ್ಯಾನ ಮಾಡಲು ಹೋಗಿದ್ದೆ ಎಂದು ಹೇಳಿದ್ದರು. ಧ್ಯಾನ ಮಾಡುವವರು ಯಾರಾದರೂ ಹಿಮಾಲಯಕ್ಕೆ ಹೋಗುತ್ತಾರೆಯೇ ಹೊರತು ಥೈಲ್ಯಾಂಡ್‌ಗೆ ಹೋಗುತ್ತಾರೆಯೇ? ಥೈಲ್ಯಾಂಡ್‌ಗೆ ಹೋಗುವುದು ಬೇರೆ ವಿಚಾರಕ್ಕೆ ಎಂಬುದು ರಾಹುಲ್‌ಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ಇಂದಿರಾಗಾಂಧಿ ಜೈಲಿಗೆ ಹೋಗಿದ್ದನ್ನು ಜನರಿಗೆ ತಿಳಿಸಿ
ಬೆಂಗಳೂರು:
ಮಾತೆತ್ತಿದರೆ ಬಿಜೆಪಿಯವರು ಜೈಲಿಗೆ ಹೋಗಿ ಬಂದವರು ಎನ್ನುವ ಕಾಂಗ್ರೆಸ್‌ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಅರಮನೆಗೆ ಹೋಗಿ ಬಂದಿದ್ದರೇ? ಚುನಾವಣಾ ಅಕ್ರಮ ಎಸಗಿ ಜೈಲಿಗೆ ಹೋಗಿಬಂದ ಏಕೈಕ ಪ್ರಧಾನಿ ಅವರು. 

ಇಂತಹ ವಿಚಾರಗಳನ್ನು ಫೇಸ್‌ಬುಕ್‌, ಟ್ವಿಟರ್‌, ವಾಟ್ಸ್‌ ಆ್ಯಪ್‌ ಮೂಲಕ ಹರಿಬಿಡಬೇಕು. ಎಲ್ಲಾ ಕಡೆ ಈ ಪ್ರಶ್ನೆ ಎತ್ತಬೇಕು… ಇದು ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್‌ ಸಿಂಹ ಮೋರ್ಚಾ ಪದಾಧಿಕಾರಿಗಳು ಮತ್ತು ಕಾಯಕರ್ತರಿಗೆ ಹೇಳಿದ ಕಿವಿಮಾತು.

ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಬಿಜೆಪಿ ಯುವ ಮೋರ್ಚಾದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾಂಗ್ರೆಸ್‌ನ ಟೀಕೆಗಳಿಗೆ ಪ್ರತ್ಯುತ್ತರ ನೀಡುವಂತೆ ಹೇಳಿದರು.
ಸಿದ್ದರಾಮಯ್ಯನಂತಹ ಮನುಷ್ಯನನ್ನು ಬೆಳೆಸಿದ್ದು ನನ್ನ ತಪ್ಪು ಎಂದು ಎಚ್‌.ಡಿ.ದೇವೇಗೌಡರೇ ಒಪ್ಪಿ ಕೊಂಡಿದ್ದಾರೆ.

ಸಿದ್ದರಾಮಯ್ಯ ಜನತಾದಳ ದಲ್ಲಿದ್ದಾಗ ಇಂದಿರಾಗಾಂಧಿ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದರು. ಈಗ ಅದೇ
ಸಿದ್ದರಾಮಯ್ಯ ದೇವೇಗೌಡರನ್ನು ಟೀಕಿಸಿ ಇಂದಿರಾ ಗಾಂಧಿಯನ್ನು ಹೊಗಳುತ್ತಿ ದ್ದಾರೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.