ಬಿಜೆಪಿ ಹೊಸ ರಾಜ್ಯ ಅಧ್ಯಕ್ಷರ ನೇಮಕ ಸದ್ಯಕ್ಕಿಲ್ಲ
Team Udayavani, May 25, 2018, 7:00 AM IST
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದ ಜತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಲೋಕಸಭೆ ಚುನಾವಣೆವರೆಗೂ ಮುಂದುವರಿಸಲು ಕೇಂದ್ರದ ನಾಯಕರು ಚಿಂತಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ 104 ಸ್ಥಾನ ಪಡೆದರೂ ಸರ್ಕಾರ ರಚನೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಯಿತು ಎಂಬ “ಅಸOಉ’ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಬಳಸಲು ಮುಂದಾಗಿರುವ ಬಿಜೆಪಿ, ಲೋಕಸಭೆ ಚುನಾವಣೆವರೆಗೂ ಯಡಿಯೂರಪ್ಪ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿದರೆ ಪಕ್ಷಕ್ಕೆ ಲಾಭವಾಗಬಹುದು ಎಂಬ ಚಿಂತನೆಯಲ್ಲಿದೆ.
ಬಿಎಸ್‌ವೈ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧರಿದ್ದಾರೆ. ಆದರೆ, ಪ್ರತಿಪಕ್ಷ ನಾಯಕರಾಗಿ ರಾಜ್ಯ ಪ್ರವಾಸ ಮಾಡುವ ವೇಳೆ ಪಕ್ಷದ ಸಂಘಟನೆಗೂ ಸಹಕಾರಿಯಾಗಲಿದೆ. ಹೀಗಾಗಿ,ಹೊಸ ರಾಜ್ಯಾಧ್ಯಕ್ಷರ ನೇಮಕ ಬೇಡ ಎಂಬುದು ಕೇಂದ್ರ ನಾಯಕರ ಅಭಿಪ್ರಾಯ ಎನ್ನಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ, ನಳಿನ್‌ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಸಿ.ಟಿ.ರವಿ ಹೆಸರು ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.