ಬಿಜೆಪಿಯದು ಕೀಳು ಮಟ್ಟದ ರಾಜಕಾರಣ
Team Udayavani, Feb 10, 2018, 6:35 AM IST
ಬೆಂಗಳೂರು: ತಮ್ಮ ವಿರೋಧಿಗಳನ್ನು ಮಟ್ಟಹಾಕಲು ಆದಾಯ ತೆರಿಗೆ ಇಲಾಖೆಯಂತಹ ಸರ್ಕಾರಿ ಯಂತ್ರಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ.
ಇಷ್ಟು ಕೀಳುಮಟ್ಟದ ರಾಜಕಾರಣವನ್ನು ಹಿಂದೆ ಯಾರೂ ಮಾಡಿರಲಿಲ್ಲ. ಅಮಿತ್ ಶಾ ಅವರ ಹೇಡಿತನ ಇಲ್ಲಿ ಪ್ರದರ್ಶನವಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ “ನನ್ನ ಕರ್ನಾಟಕ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾಜಿ ಪ್ರಧಾನಿ ವಾಜಪೇಯಿ ಕಾಲದಲ್ಲೂ ಈ ಮಟ್ಟದ ದ್ವೇಷ ರಾಜಕಾರಣ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗ ನಡೆದಿರಲಿಲ್ಲ ಎಂದು ವಾಗ್ಧಾಳಿ ನಡೆಸಿದರು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸ್ಲಂನಲ್ಲಿ ವಾಸ್ತವ್ಯ ಮಾಡಲು ಯಡಿಯೂರಪ್ಪ ಮುಂದಾಗಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ನಾನೇ ಮಾಡಿಕೊಡುತ್ತೇನೆ ಎಂದು ಟೀಕಿಸಿದರು.
ಬಿಎಸ್‌ವೈ ಕಿಡಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಐಟಿ, ಇಡಿ ದಾಳಿಗಳ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆಯನ್ನು ಕಟುವಾಗಿ ಖಂಡಿಸುತ್ತೇನೆ. ಇಂತಹ ಹೇಳಿಕೆಗಳ ಮೂಲಕ ಸಾರ್ವಜನಿಕ ಜೀವನದಲ್ಲಿ ತಾವು ಅಯೋಗ್ಯ ಎಂಬುದನ್ನು ಅವರೇ ಸಾಬೀತುಪಡಿಸಿದ್ದಾರೆ. ಇಂತಹ ಮೂರ್ಖ ಮುಖಂಡರನ್ನು ರಾಜ್ಯ ಹಿಂದೆಂದೂ ಕಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.