ಲಿಂಗಾಯತ ಧರ್ಮದ ಬಗ್ಗೆ ಬಿಜೆಪಿಗೇಕೆ ಭಯ
Team Udayavani, Sep 15, 2017, 11:48 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಬೇಡಿಕೆಯ ಬಗ್ಗೆ ಬಿಜೆಪಿಯವರಿಗೆ ಏಕೆ ಭಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕ್ರೈಸ್ತ ಧರ್ಮಗುರು ಬರ್ನಾಡ್ ಮೋರಾಸ್ ಅವರ ನಿವಾಸಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ವಿವಾದ ಹುಟ್ಟಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ಮಾಡಬೇಕೆಂದು ಮೂರು ಮನವಿಗಳು ಬಂದಿವೆ. ಎಲ್ಲರೂ ಒಟ್ಟಾಗಿ ಬನ್ನಿ ಎಂದು ಹೇಳೀದ್ದೇನೆ. ಇದರಲ್ಲಿ ನನ್ನ ಪಾತ್ರ ಏನಿದೆ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ, ಶೋಭಾ ಕರಂದ್ಲಾಜೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಡಿನೊಟಿಫಿಕೇಶನ್ ಮಾಡಿಲ್ಲ: ಇದೇ ವೇಳೆ ಡಾ. ಶಿವರಾಮ್ ಕಾರಂತ ಬಡಾವಣೆಯಲ್ಲಿ 1300 ಎಕರೆ ಡಿ ನೊಟಿಫಿಕೇಶ್ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ಈ ಸರ್ಕಾರ ಯಾವುದೇ ಡಿ ನೊಟಿಫಿಕೇಶನ್ ಮಾಡಿಲ್ಲ. ಬುಧವಾರ ಹೈಕೋರ್ಟ್ನಲ್ಲಿ ಏನಾಗಿದೆ ಎಂದು ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.