ಉತ್ತರದಲ್ಲಿ ಬಿಜೆಪಿ ಟಿಕೆಟ್‌ಗೆ ಸ್ಪರ್ಧೆ
Team Udayavani, Feb 4, 2019, 6:37 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ ಲೋಕಸಭಾ ಕ್ಷೇತ್ರಗಳ ಆಕಾಂಕ್ಷಿಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತು ಆರಂಭಿಸಿದ್ದಾರೆ. ಮಲ್ಲೇಶ್ವರದ ಹೋಟೆಲ್‌ನಲ್ಲಿ ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ ನಡೆಯಿತು.
ಈ ವೇಳೆ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿ ಸದಸ್ಯ ಡಾ.ಎಚ್.ಎನ್.ಚಂದ್ರಶೇಖರ್ ತಾವು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
ಈ ನಡುವೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಜೆಡಿಎಸ್ ಕಾರ್ಯಕರ್ತರ ಒತ್ತಡ ಮುಂದುವರಿದಿದೆ. ಒಂದೊಮ್ಮೆ ಡಿ.ವಿ.ಸದಾನಂದ ಗೌಡರು ಕ್ಷೇತ್ರ ಬದಲಾವಣೆ ಮಾಡಿದರೆ, ತಮಗೆ ಅವಕಾಶ ನೀಡಲಿ ಎಂಬ ಕಾರಣಕ್ಕೆ ಕೆಲವರು ಬಹಿರಂಗವಾಗಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎನ್ನಲಾಗಿದೆ.
ಮಾಜಿ ಶಾಸಕ ನಂದೀಶ್ ರೆಡ್ಡಿ ಕೂಡ ಉತ್ತರ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಂದೀಶ್ ರೆಡ್ಡಿ ಬೆಂಬಲಿಗರು ಕ್ಷೇತ್ರದ ಕೆಲವೆಡೆ “ಉರಿ’ ಚಿತ್ರದ ಟಿಕೆಟ್‌ಗಳನ್ನು ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರು ಕೇಂದ್ರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾ ಸಿದ್ಧತಾ ಸಭೆಯನ್ನು ಬಿಜೆಪಿ ಇತ್ತೀಚೆಗಷ್ಟೆ ನಡೆಸಿತ್ತು. ಈ ಎರಡೂ ಕ್ಷೇತ್ರದ ಸಭೆಯಲ್ಲೂ ಅನೇಕರ ಹೆಸರು ಕೇಳಿ ಬಂದಿತ್ತು.
ಬಿಜೆಪಿ ಸಿದ್ಧತಾ ಸಭೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣ ಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ, ಮಾಜಿ ಶಾಸಕ ಮುನಿರಾಜು, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ, ಮಾಜಿ ಉಪಮೇಯರ್ ಎಸ್.ಹರೀಶ್ ಇತರರು ಪಾಲ್ಗೊಂಡಿದ್ದರು.
ಸಭೆ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆ ನಡೆದಿದೆ. ಈಗಾಗಲೇ ಒಂದು ಹಂತದ ಚುನಾವಣಾ ತಯಾರಿ ಡಿಸೆಂಬರ್‌ನಲ್ಲೇ ನಡೆದಿತ್ತು. ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನವನ್ನು ಮಾಡಿದ್ದೇವೆ. ಬಿಜೆಪಿ ಕೇಂದ್ರ ಕಾರ್ಯಾಲಯದಿಂದ ಬಂದಿರುವ ಸೂಚನೆಗಳ ಅನುಷ್ಠಾನಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಚುನಾವಣೆ ಸಂಬಂಧ ಕ್ಷೇತ್ರದಲ್ಲಿ ಜವಾಬ್ದಾರಿ ಹಂಚಿಕೆ, ವಿಧಾನಸಭಾ ಕ್ಷೇತ್ರ, ಜಿಲ್ಲೆ, ತಾಲೂಕು, ಹೋಬಳಿ ಮತ್ತು ಬೂತ್ ಮಟ್ಟದ ಸಂಘಟನೆಗೆ ಒತ್ತು ನೀಡುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಪ್ರತಿ ಮತಗಟ್ಟೆಯನ್ನು ಸದೃಢ ಮತಗಟ್ಟೆಯನ್ನಾಗಿ ಮಾಡಲಿದ್ದೇವೆ.
ವಿವಿಧ ಸಂಘಟನೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲರನ್ನೂ ಭೇಟಿ ಮಾಡಿ ಕೇಂದ್ರದ ಎನ್‌ಡಿಎ ಸರ್ಕಾರದ ಸಾಧನೆಯನ್ನು ತಿಳಿಸಲಿದ್ದೇವೆ. ಫೆಬ್ರವರಿ ಅಂತ್ಯದಲ್ಲಿ ಬೂತ್ ಸಶಕ್ತಿಕರಣ ಸಭೆ ನಡೆಸಲಿದ್ದೇವೆ. ಅಷ್ಟರೊಳಗೆ ವಿಧಾನಸಭಾ ಕ್ಷೇತ್ರ, ವಾರ್ಡ್ ಹಾಗೂ ಜಿಲ್ಲಾ ಮಟ್ಟದ ಸಭೆ ನಡೆಸಲಿದ್ದೇವೆ. ಒಟ್ಟಾರೆಯಾಗಿ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡಲು ಆರಂಭಿಸಿದ್ದೇವೆ ಎಂದು ವಿವರಿಸಿದರು.
ನಾನೂ ಟಿಕೆಟ್ ಆಕಾಂಕ್ಷಿ – ಚಂದ್ರಶೇಖರ್: ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿ ಸದಸ್ಯ ಎಚ್.ಎನ್.ಚಂದ್ರಶೇಖರ್, ನಾನೂ ಸಹ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ. ಡಿ.ವಿ.ಸದಾನಂದಗೌಡರು ಹಾಲಿ ಸಂಸದರು ಹಾಗೂ ಕೇಂದ್ರ ಸಚಿವರಾಗಿದ್ದಾರೆ.
ಕಳೆದ ಬಾರಿ ಇದೇ ಕ್ಷೇತ್ರದಿಂದ ನನಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೆ. ಈ ಬಾರಿಯೂ ಟಿಕೆಟ್ ನೀಡುವಂತೆ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಸೇರಿದಂತೆ ಎಲ್ಲ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ ಎಂದು ಹೇಳಿದರು. ನಾನು ಬೆಂಗಳೂರು ಉತ್ತರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.
ಸ್ಥಳೀಯ ವಿದ್ಯಾಮಾನ ಹಾಗೂ ರಾಷ್ಟ್ರ ರಾಜಕಾರಣವನ್ನು ಗಮನದಲ್ಲಿ ಇಟ್ಟುಕೊಂಡು ಈ ಬಾರಿ ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನಿಸಲಿದ್ದಾರೆ. ನಾನು ಟಿಕೆಟ್ ಆಕಾಂಕ್ಷಿ ಎಂಬುದು ಸದಾನಂದಗೌಡ ಅವರಿಗೂ ಗೊತ್ತು. ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಿದ್ಧತಾ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.