![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 8, 2021, 8:09 PM IST
ನವದೆಹಲಿ: ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ ಲಿಂಗಾಯತ ಸಮುದಾಯದವರು ಭಾರತೀಯ ಜನತಾ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿದ್ದಾರೆ. ಆದರೆ ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್ಸಿ, ಎಸ್ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲಬೇಕು. ಈ ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು ಅವರು ಹೇಳಿದರು.
ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು.
ನನ್ನ ನೇತೃತ್ವದಲ್ಲಿ ಚುನಾವಣೆ :
2023 ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವಲ್ಲಿ ನಡೆಯಲಿದೆ. ಎಷ್ಟು ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಸಿಕ್ಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡುವುದರ ಜೊತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.