ಬಿಜೆಪಿ, ಕಾಂಗ್ರೆಸ್ನಿಂದ ರಾಜ್ಯದ ಲೂಟಿ
Team Udayavani, Mar 8, 2018, 12:12 PM IST
ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜ್ಯದಲ್ಲಿ ಲೂಟಿ ನಡೆಸಿವೆ. ಇದನ್ನು ಸರಿಮಾಡಬೇಕಾದರೆ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿದ್ದ ವಿಕಾಸಪರ್ವ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತ ನೋಡಿದ್ದೀರಿ. ಒಮ್ಮೆ ಜೆಡಿಎಸ್ಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಹತ್ತು ವರ್ಷಗಳಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿವೆ ನಿಮಗೆ ಗೊತ್ತಿದೆ. ಈಗ ಬದಲಾವಣೆ ಸಮಯ ಬಂದಿದ್ದು ನಿಮ್ಮ ತೀರ್ಮಾನ ಸೂಕ್ತವಾಗಿರಬೇಕು ಎಂದರು.
ಇದಕ್ಕೂ ಮುನ್ನ ಯಡಿಯೂರು ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪದ್ಮನಾಭನಗರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಯಾತ್ರೆ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ವಿ.ಕೆ.ಗೋಪಾಲ್ ಪರ ಮತಯಾಚನೆ ಮಾಡಿದರು. ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಮುಖಂಡರಾದ ಪ್ರಸಾದ್ ಬಾಬು, ರಮೇಶ್ಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.