ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ
Team Udayavani, Dec 3, 2021, 11:48 AM IST
ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಖಾಸಗಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಬಗ್ಗೆ ನನಗೆ ನನ್ನದೇ ಆದ ದೂರದೃಷ್ಟಿತ್ವ ಇದೆ.
ಹಲವಾರು ಯೋಜನೆಗಳಿವೆ. ಚುನಾವಣೆಗೆ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಸಮಯ ಬಾಕಿ ಇದ್ದು , 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ತಿಳಿಸಿದರು. ನಾನು ಜನರ ಜತೆ ನಿಕಟ ಸಂಪರ್ಕ ಹೊಂದಿದ್ದೇನೆ. ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೂಮ್ಮೆ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳಾಗಿ ನಾಲ್ಕು ತಿಂಗಳ ತಮ್ಮ ಅನುಭವವನ್ನು ಬಿಚ್ಚಿಟ್ಟ ಮುಖ್ಯಮಂತ್ರಿಗಳು, ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಕುರ್ಚಿ ಹಾಟ್ ಸೀಟ್ ಎಂದೇ ಗುರುತಿಸಲಾಗಿದೆ. ಆದರೆ, ನಾವು ಉತ್ತಮ ಕೆಲಸ ಮಾಡುತ್ತಿದ್ದರೆ, ಕುರ್ಚಿಯ ಬಿಸಿ ತಗ್ಗುತ್ತದೆ.
ಇದನ್ನೂ ಓದಿ:-ಹೊಂಡಗುಂಡಿ ರಸ್ತೆ; ಆ್ಯಂಬುಲೆನ್ಸ್‌ನಲ್ಲಿ ವಿಚಿತ್ರ ಹೆರಿಗೆ !
ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಪರಿಸ್ಥಿತಿಗಳೂ ಒಗ್ಗಿಸುತ್ತವೆ ಎಂದು ತಿಳಿಸಿದರು. ಐದು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿರುವ ನಿಮ್ಮ ಅನುಭವಕ್ಕೂ ಪ್ರಸ್ತುತ ಮುಖ್ಯಮಂತ್ರಿಯಾಗಿರು ವುದಕ್ಕೂ ವ್ಯತ್ಯಾಸವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಎಲ್ಲಾ ಹಿರಿಯ ನಾಯಕರೂ ಜನನಾಯಕರಾಗಿದ್ದವರು, ಪ್ರತಿಯೊಬ್ಬರಿಗೂ ತಮ್ಮದೇ ರೀತಿಯ ವ್ಯಕ್ತಿತ್ವ ಹಾಗೂ ಆಡಳಿತ ಶೈಲಿಯಿತ್ತು.
ಕೆಲವು ಪರಿಸ್ಥಿತಿಗಳನ್ನು ಎದುರಿಸಲು ಇದು ನನಗೆ ಅನುಕೂಲ ವಾಯಿತು. ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಒಬ್ಬ ಅತ್ಯುತ್ತಮ ಜನ ನಾಯಕರು, ಶ್ರಮಜೀವಿ ಹಾಗೂ ಸೂಕ್ಷ್ಮ ಸ್ವಭಾವದವರು. ಅವರಿಂದ ಆಡಳಿತ ಮತ್ತು ರಾಜಕೀಯದ ಕುರಿತು ಸಾಕಷ್ಟು ಕಲಿತಿದ್ದೇನೆ.
ಇವೆಲ್ಲವೂ ಬದಲಾವಣೆಯನ್ನು ಸರಾಗವಾಗಿಸಿವೆ ಎಂದು ಹೇಳಿದರು. ರಾಜ್ಯದಲ್ಲಿ ಡಿಸೆಂಬರ್‌ನಲ್ಲಿ ಕೆಲವು ಸಚಿವರ ಬದಲಾವಣೆ ಮಾಡುವ ಬಗ್ಗೆ ಯಾವ ಆಧಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೋ ಗೊತ್ತಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ದೂರವಾಣಿ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಲ್ಯಾಬ್ ರಿಪೋರ್ಟ್ ಬಂದಿಲ್ಲ
ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಪ್ರಕರಣಗಳ ಸಂಬಂಧ ಇನ್ನೂ ಲ್ಯಾಬ್ ರಿಪೋರ್ಟ್ ಬಂದಿಲ್ಲ. ಈ ಬಗ್ಗೆ ರಾಜ್ಯದ ಆರೋಗ್ಯ ಸಚಿವರ ಜೊತೆಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ವರದಿ ಪಡೆಯಲು ಸೂಚಿಸಿದ್ದೇನೆ. ಶುಕ್ರವಾರ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಈ ರೀತಿಯ ಹೊಸ ತಳಿ ವೈರಸ್ ಬಂದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ತಜ್ಞರೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು.
ಇದುವರೆಗೂ ಪ್ರಾಥಮಿಕ ಮಾಹಿತಿ ಪ್ರಕಾರ ದೊಡ್ಡ ಪ್ರಮಾಣದ ಹಾನಿ ಮಾಡುವ ರೋಗ ಇದಲ್ಲ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ವಿವರವಾದ ಲ್ಯಾಬ್ ರಿಪೋರ್ಟ್ ಬಂದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.