ಬಜೆಟ್‌ ಬಳಿಕ ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ: ಸಚಿವ ಆಂಜನೇಯ


Team Udayavani, Mar 5, 2017, 11:45 AM IST

anjaneyalu.jpg

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ, ರಾಜ್ಯ ಬಜೆಟ್‌ ಅಧಿವೇಶನದ ಬಳಿಕ ಸಮೀಕ್ಷಾ ವರದಿ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಗೃಹಕಚೇರಿ “ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಬಜೆಟ್‌ ಪೂರ್ವಭಾವಿ ಸಭೆ ಬಳಿಕ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕೈಬಿಡುವ ಪ್ರಶ್ನೆಯೇ ಇಲ್ಲ. ಸಭೆಯಲ್ಲೂ ದಲಿತ ಮುಖಂಡರು ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಬಜೆಟ್‌ ಬಳಿಕ ಸಮೀಕ್ಷಾ ವರದಿ ಬಗ್ಗೆ ಗಮನ ಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಬಡ್ತಿ ಮೀಸಲಾತಿ ರದ್ದುಪಡಿಸಿಪಡಿಸಿರುವ ಸುಪ್ರೀಂಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು. ಈವರೆಗೆ ಜಿಲ್ಲಾಧಿಕಾರಿಯಾಗಿದ್ದವರು ಮತ್ತೆ ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡಲು ಸಾಧ್ಯವೇ? ಸುಪ್ರೀಂ ಆದೇಶವನ್ನು ಮೇಲ್ಮನವಿ ಮೂಲಕ ಪ್ರಶ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ ಮತ್ತು ತರಬೇತಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಘೋಷಿಸಬೇಕು. ಹಾಗೆಯೇ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು.

ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಆಂಜನೇಯ ಹೇಳಿದರು.

ಟಾಪ್ ನ್ಯೂಸ್

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

7

Bengaluru: ಬಸ್‌ ಕಂಡಕ್ಟರ್‌, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

5

Itanagar: ಚೀನ ಜತೆ ದೀರ್ಘ‌ ಕಾಲ ಶಾಂತಿ ಸ್ಥಾಪನೆಗೆ ಪ್ರಯತ್ನ; ರಕ್ಷಣ ಸಚಿವ ರಾಜನಾಥ್‌ಸಿಂಗ್‌

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.