ಬಜೆಟ್‌ಗೆ ಗುರಿ, ಉದ್ದೇಶ ಎರಡೂ ಇಲ್ಲ
Team Udayavani, Feb 2, 2018, 6:00 AM IST
ಬೆಂಗಳೂರು: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್‌ಗೆ ಗುರಿ ಮತ್ತು ಉದ್ದೇಶ ಎರಡೂ ಇಲ್ಲ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಬಜೆಟ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು
ಕೇಂದ್ರ ಸರ್ಕಾರ ಯೋಜನೆಗಳನ್ನು ಘೋಷಿಸಿ ಕಣ್‌ಕಟ್ ಮಾಡಿದೆ. ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದೇವೆ ಎಂದು
ಹೇಳಿದ್ದಾರೆ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವುದಾಗಿ ಪ್ರಣಾಳಿಕೆಯಲ್ಲಿಯೇ ಹೇಳಿದ್ದರು. ಆದರೆ, ಇದುವರೆಗೂ
ಜಾರಿಯಾಗಿಲ್ಲ. ರೈತರ ಉತ್ಪಾದನಾ ವೆಚ್ಚವನ್ನು ಪರಿಗಣಿಸದೇ ಎಂಎಸ್‌ಪಿ ನಿಗದಿ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ನಿರಾಸೆಯಾಗಿದೆ ಎಂದರು.
ಪ್ರಮುಖವಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡುವಂತೆ ಕೇಳಿಕೊಂಡಿದ್ದೆವು. ಅದರೆ ಅವುಗಳನ್ನು ಯಾವುದನ್ನೂ ಪರಿಗಣಿಸಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಪ್ರತಿ ಬಡ ಕುಟುಂಬಕ್ಕೂ 5 ಲಕ್ಷ ಆರೋಗ್ಯ ವಿಮೆ ಮಾಡುವುದಾಗಿ ಹೇಳಿದ್ದಾರೆ. ಆದರೆ, ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಯೋಜನೆಯನ್ನೇ ಅನುಷ್ಠಾನಗೊಳಿಸಿಲ್ಲ. 2022ಕ್ಕೆ ಎಲ್ಲರಿಗೂ ಮನೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಅದಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದಿಟಛಿ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ. ಕೇವಲ ಘೋಷಣೆ ಮಾಡುವುದರಿಂದ ಯೋಜನೆಗಳು ಅನುಷ್ಠಾನ ಆಗುವುದಿಲ್ಲ.
ಅದಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದರು. ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಮಾರುಕಟ್ಟೆ ವ್ಯವಸ್ಥೆ ಯನ್ನು ಆನ್‌ಲೈನ್ ಮಾಡಲು ಮುಂದಾಗಿರುವ ಕ್ರಮವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ, ರಾಜ್ಯ ಸರ್ಕಾರ ಜಾರಿಗೆ ತಂದಿ
ರುವ ಯೋಜನೆಯನ್ನು ಎಲ್ಲ ರಾಜ್ಯಗಳಿಗೂ ಕೇಂದ್ರ ವಿಸ್ತರಣೆ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.
ಪ್ರಧಾನಿ ಮೋದಿ, ಹಣಕಾಸು ಖಾತೆ ಸಚಿವ ಜೇಟ್ಲಿ ಜೋಡಿ ಕರ್ನಾಟಕಕ್ಕೆ ಮತ್ತೂಂದು ಸೊನ್ನೆ ನೀಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಕರ್ನಾಟಕದ ರೈತರ ಸಾಲ ಮನ್ನಾ ಕುರಿತ ಯಾವುದೇ ಘೋಷಣೆ ಬಜೆಟ್‌ನಲ್ಲಿ ಹೊರಡಿಸಿಲ್ಲ. ಕರ್ನಾಟಕದ ಮಟ್ಟಿಗೆ ಇದು ನಿರಾಶಾದಾಯಕ ಬಜೆಟ್.
– ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
ಬಜೆಟ್‌ನಲ್ಲಿ ರೈತರಿಗೆ ಯಾವುದೇ ಕೊಡುಗೆ ನೀಡಿಲ್ಲ. ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭಿಸುವಂತೆ ರಾಜ್ಯ ಸರಕಾರ ನಿಯೋಗ ತೆರಳಿ ಮನವಿ ಮಾಡಿದರೂ ಕೇಂದ್ರ ಅದಕ್ಕೆ ಸ್ಪಂದಿಸಿಲ್ಲ.
– ವಿನಯ್ ಕುಲಕರ್ಣಿ ಸಚಿವ
ಬಜೆಟ್ ದೇಶದ ರೂಪಾಂತರದ ಬಜೆಟ್ ಆಗಿದೆ. ಅದು ಪ್ರತಿಯೊಬ್ಬರ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ. ಸಾಮಾನ್ಯ ವ್ಯಕ್ತಿ, ರೈತರು ಮತ್ತು ರಾಷ್ಟ್ರಕ್ಕಾಗಿ ಇದು ಅತ್ಯುತ್ತಮ ಮತ್ತು ದೇಶದ ಅರ್ಥ ವ್ಯವಸ್ಥೆಗೆ ಸರಿಯಾದ ದಿಕ್ಕು ನೀಡುವ ಬಜೆಟ್.
– ಅನಂತಕುಮಾರ್, ಕೇಂದ್ರ ಸಚಿವ
ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದಿಟಛಿ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.ಆರ್ಥಿಕ ವಾಗಿ ಮಧ್ಯಮ ಮತ್ತು ಕೆಳ ವರ್ಗದವರನ್ನು ಗಮನದಲ್ಲಿಟ್ಟು ಕೊಂಡು ಅವರಿಗೆ ಶಕ್ತಿ ನೀಡುವ ಕೆಲಸವಾಗಿದೆ. ಆರ್ಥಿಕ ಪ್ರಗತಿಗೆ ಒತ್ತು ನೀಡಿರುವ ಕ್ರಮ ಸ್ವಾಗತಾರ್ಹ.
– ಡಿ.ವಿ.ಸದಾನಂದಗೌಡ,ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.