ವಿಧಾನಪರಿಷತ್ 11 ಸ್ಥಾನಗಳಿಗೆ ಅವಿರೋಧ ಆಯ್ಕೆ
Team Udayavani, Jun 5, 2018, 6:15 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಐವರು, ಕಾಂಗ್ರೆಸ್ನ ನಾಲ್ವರು ಮತ್ತು ಜೆಡಿಎಸ್ನ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ರಘುನಾಥ್ ರಾವ್ ಮಲ್ಕಾಪುರೆ, ಡಾ.ತೇಜಸ್ವಿನಿ ಗೌಡ, ಎನ್.ರವಿಕುಮಾರ್, ಕೆ.ಪಿ.ನಂಜುಂಡಿ ಹಾಗೂ ಎಸ್.ರುದ್ರೇಶ್ ಗೌಡ, ಕಾಂಗ್ರೆಸ್ನಿಂದ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದ ರಾಜು, ದಕ್ಷಿಣ ಹರೀಶ್ ಕುಮಾರ್ ಹಾಗೂ ಅರವಿಂದಕುಮಾರ್ ಅರಳಿ, ಜೆಡಿಎಸ್ನಿಂದ ಬಿ.ಎ.ಫಾರೂಕ್ ಮತ್ತು ಧರ್ಮೇಗೌಡ ಆಯ್ಕೆಯಾಗಿದ್ದಾರೆ
ಎಂದು ಚುನಾವಣಾಧಿಕಾರಿ, ವಿಧಾನಸಭೆ ಜಂಟಿ ಕಾರ್ಯದರ್ಶಿ ಎಂ.ಎಸ್.ಕುಮಾರಸ್ವಾಮಿ ಘೋಷಿಸಿದರು.ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಿಗದಿಯಂತೆ ಜೂ. 11ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಮೂರು ಪಕ್ಷಗಳಿಂದ 11 ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಸೋಮವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದ್ದು, ಯಾರೂ ನಾಮಪತ್ರ ಹಿಂತೆಗೆದುಕೊಳ್ಳದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.