ರಾಜಧಾನಿಯ ತುಂಬ ಆವರಿಸಿದ ನೀರವ

Team Udayavani, Nov 26, 2018, 12:29 PM IST

rajadhaniya.jpg

ಬೆಂಗಳೂರು: ನಗರದ ಅಲ್ಲಲ್ಲಿ ನೀರವ ಮೌನ, ಅಗಲಿದ ನೆಚ್ಚಿನ ನಾಯಕನ ಭಾವಚಿತ್ರದ ಮುಂದೆ ನಿಂತು ಮಿಡಿವ ಹೃದಯಗಳು, ಬೆಳ್ಳಂಬೆಳಗ್ಗೆಯೇ ಪ್ರೀತಿಪಾತ್ರ ನಟನ ಅಂತಿಮ ದರ್ಶನಕ್ಕೆ ಹೊರಟ ಅಭಿಮಾನಿಗಳ ಗುಂಪು, ಬಿಕೋ ಎನ್ನುತ್ತಿದ್ದ ಗಾಂಧಿನಗರ… ಹಿರಿಯ ನಟ ಅಂಬರೀಶ್‌ ಅವರ ಅಗಲಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಕಂಡುಬಂದ ದೃಶ್ಯಗಳಿವು. 

ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಮತ್ತು ಆ ಮೂಲಕ ಜನರನ್ನು ಸೆಳೆದ ರೆಬೆಲ್‌ ಸ್ಟಾರ್‌ ಕಣ್ಮರೆಗೆ ನಗರದ ಪ್ರಮುಖ ಬೀದಿಗಳು ಕಂಬನಿ ಮಿಡಿದವು. ಅಭಿಮಾನಿಗಳ ಬಳಗಗಳು ಅಂಬರೀಶ್‌ ಅವರ ವಿವಿಧ ಭಂಗಿಗಳ ಭಾವಚಿತ್ರಗಳನ್ನು ಹಾಕಿ, ಪುಷ್ಪನಮನ ಸಲ್ಲಿಸಿತು. ಅದರ ಮುಂದೆ ಹಾದುಹೋಗುವವರೆಲ್ಲಾ ಅಗಲಿದ ನಟನಿಗೆ ನಮನ ಸಲ್ಲಿಸುತ್ತಿದ್ದುದು ಸಾಮಾನ್ಯವಾಗಿತ್ತು. ಈ ಮಧ್ಯೆ ವಾರಾಂತ್ಯದ ರಜೆ ಕೂಡ ಇದ್ದುದರಿಂದ ಜನ, ವಾಹನ ಸಂಚಾರ ವಿರಳವಾಗಿತ್ತು. ಇದರಿಂದ ಸಾವಿನ ಸೂತಕದ ಛಾಯೆ ಆವರಿಸಿದಂತಿತ್ತು.

ಅಭಿಮಾನಿಗಳು ಸ್ವತಃ ಬಂಧುವೊಬ್ಬ ತಮ್ಮಿಂದ ದೂರವಾಗಿದ್ದಾನೆ ಎಂಬಂತೆ ಭಾರವಾದ ಮುಖಹೊತ್ತು ಕಂಠೀರವ ಕ್ರೀಡಾಂಗಣದತ್ತ ದೌಡಾಯಿಸುತ್ತಿರುವುದು ಕಂಡುಬಂತು. ನಗರದ ವಿವಿಧ ಭಾಗಗಳಿಂದ ಬೆಳಿಗ್ಗೆಯೇ ಬೈಕ್‌, ಆಟೋಗಳಲ್ಲಿ, ಮಂಡ್ಯ ಸೇರಿದಂತೆ ಮತ್ತಿತರ ಕಡೆಗಳಿಂದ ಬಸ್‌ಗಳಲ್ಲಿ ತಂಡೋಪತಂಡವಾಗಿ ಧಾವಿಸುತ್ತಿದ್ದರು. ಮೆಜೆಸ್ಟಿಕ್‌ನಲ್ಲಂತೂ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿ, ಅಂತಿಮ ದರ್ಶನಕ್ಕೆ ತೆರಳಿದ್ದರು.

ಯಶವಂತಪುರ ಮಾರುಕಟ್ಟೆ ರಸ್ತೆಯಲ್ಲಿ ವೀರಶೈವ ವೇದಿಕೆ ವೈಪಿಆರ್‌ ಟ್ರಸ್ಟ್‌, ಬಿ.ಕೆ. ನಗರದ ಮಹಾತ್ಮ ಗಾಂಧಿ ಯುವಕರ ಸಂಘ, ದಾಸರಹಳ್ಳಿಯ ರಾಕ್‌ಸ್ಟಾರ್‌ ಬಾಯ್ಸ, ಬಾಗಲುಗುಂಟೆ, ಯಶವಂತಪುರ ಮಿನಿ ಬಜಾರ್‌ ಬಳಿ ವಿವಿಧ ಅಭಿಮಾನಿ ಬಳಗಗಳು, ಜೆ.ಪಿ. ಪಾರ್ಕ್‌ ಬಳಿ ಬಿಜೆಪಿ ಕಾರ್ಯಕರ್ತರು, ಮತ್ತಿಕೆರೆ, ಮಲ್ಲೇಶ್ವರದಲ್ಲಿ ಆಟೋ ಚಾಲಕರ ಸಂಘಗಳು, ಹಡ್ಸನ್‌ ವೃತ್ತ, ಮೈಸೂರು ಬ್ಯಾಂಕ್‌ ವೃತ್ತಗಳಲ್ಲಿ ಅಂಬರೀಶ್‌ ಅವರ ಭಾವಚಿತ್ರದ ಫ‌ಲಕ ಹಾಕಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಗಾಂಧಿನಗರದಲ್ಲಂತೂ ಎಂದಿನ ಗೌಜು-ಗದ್ದಲ ಇರಲಿಲ್ಲ. ಜನ ಸಂಚಾರ ವಿರಳವಾಗಿದ್ದು, ಬಿಕೋ ಎನ್ನುತ್ತಿತ್ತು. ಚಿತ್ರಮಂದಿರಗಳು, ನಾಟಕ ಮಂದಿರ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತಿತರ ಕಡೆಗಳಲ್ಲಿ ಮೈಸೂರು ಪೇಟಾಧಾರಿಯಾಗಿ ಸಿಂಹಾಸನದಲ್ಲಿ ವಿರಾಜಮಾನರಾದ ಅಂಬರೀಶ್‌ ಅವರ ಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿಯ ಫೋಟೋಗಳು ಅಲ್ಲಲ್ಲಿ ಕಂಡವು.

* ವಿಜಯ್‌ಕುಮಾರ್‌ ಚಂದರಗಿ

ಟಾಪ್ ನ್ಯೂಸ್

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.