![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Nov 11, 2024, 10:54 AM IST
ಬೆಂಗಳೂರು: ಯಶವಂತಪುರ ಮೇಲು ಸೇತುವೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಪಲ್ಟಿ ಹೊಡೆದಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಯಶವಂತಪುರ ಮೇಲು ಸೇತುವೆಯಲ್ಲಿ ಘಟನೆ ನಡೆದಿದೆ. ಕಾರಿನ ಚಾಲಕ ಅರ್ಜುನ್ ಸೇರಿ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಂಕ್ ಉದ್ಯೋಗಿಗಳಾದ ಅರ್ಜುನ್ ಹಾಗೂ ಮೂವರು ಸ್ನೇಹಿತರು ಕ್ರೇಟಾ ಕಾರಿನಲ್ಲಿ ಮುಂಜಾನೆ 3ರ ಸುಮಾರಿಗೆ ಆರ್.ಟಿ.ನಗರದಿಂದ ನಂದಿನಿ ಲೇಔಟ್ ಕಡೆಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಯಶವಂತಪುರ ಮೇಲು ಸೇತುವೆಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಪಲ್ಟಿಯಾಗಿದೆ. ಅಷ್ಟರಲ್ಲಿ ಇತರೆ ವಾಹನ ಸವಾರರು ಕೂಡಲೇ ನೆರವಿಗೆ ಧಾವಿಸಿ, ಕಾರಿನೊಳಗೆ ಸಿಲುಕಿದ್ದ ಚಾಲಕ ಅರ್ಜುನ್ ಸೇರಿ ನಾಲ್ವರನ್ನು ಹೊರಗೆ ಎಳೆದುಕೊಂಡು ಕೂಡಲೇ ಆಸ್ಪತ್ರೆಗೆ ಸಾಗಿಸಿ¨ªಾರೆ.
ಅಪಘಾತಕ್ಕೆ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಕಾರು ಚಾಲಕ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆ ಸಂಬಂಧ ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.