High Court: ಅಲೋಕ್ ಕುಮಾರ್ ಮೇಲಿನ ಕೇಸ್ ರದ್ದು
Team Udayavani, Aug 7, 2024, 11:31 AM IST
ಬೆಂಗಳೂರು: ಮಹಿಳಾ ಪೊಲೀಸ್ ಸಿಬ್ಬಂದಿ ಮೂಲಕ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾರಣ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಎಂದು ತರಬೇತಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ವಿಚಾರವಾಗಿ ಮಮತಾ ಸಿಂಗ್ ಎಂಬುವರು ತಮ್ಮ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆಲೋಕ್ ಕುಮಾರ್ ವಿರುದ್ಧ ನಗರದ 39ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ವಜಾಗೊಳಿಸಿ ಆದೇಶಿಸಿತು.
ವಿಚಾರಣೆ ವೇಳೆ ಅಲೋಕ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ವಿಚಾರಣಾ ನ್ಯಾಯಾಲಯವು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದೆ. ದಂಡ ಪ್ರಕ್ರಿಯಾ ಸಂಹಿತೆ- 1973ರ ಕಲಂ 195ರ ಅಡಿ ಇಂತಹ ಕ್ರಮಕ್ಕೆ ಅವಕಾಶವಿಲ್ಲ. ಅಲ್ಲದೇ ದೂರುದಾರೆ ಮಮತಾ ಸಿಂಗ್ ಈಗಾಗಲೇ ತೀರಿಕೊಂಡಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅಲೋಕ್ ಕುಮಾರ್ ವಿರುದ್ಧದ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.
ಪ್ರಕರಣವೇನು?: ನನ್ನ ಮಗಳಿಗೆ ಸಂಬಂಧಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ಮಮತಾ ಸಿಂಗ್ ನೀಡಿದ್ದ ದೂರು ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ದೂರು ಹಿಂಪಡೆಯುವಂತೆ ಸಂಬಂಧಿಕರ ಪರವಾಗಿ ಕ್ರಿಶ್ಚಿಯನ್ ಮಿಷನರಿಯಲ್ಲಿ ಕೆಲಸ ಮಾಡುವ ಸಿಸ್ಟರ್ ಶಾಲಿನಿ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಅಂದಿನ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರಿಗೆ ಮಮತಾ ಸಿಂಗ್ ದೂರು ನೀಡಿದ್ದರು. “ನಾನು ನೀಡಿದ ಈ ದೂರನ್ನು ಅಲೋಕ್ ಕುಮಾರ್ ಗಂಭೀರವಾಗಿ ಪರಿಗಣಿಸಿಲ್ಲ. ದೂರು ದಾಖಲಿಸಲು ಆದೇಶಿಸಿಲ್ಲ. ಬದಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ನನ್ನ ಮೇಲೆ ಹÇÉೆ ನಡೆಸಿದ್ದರು’ ಎಂದು ಆರೋಪಿಸಿ ಮಮತಾ ಸಿಂಗ್ ಖಾಸಗಿ ದೂರು ದಾಖಲಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿಯ ತಾಯಿ ಈ ಮಮತಾ ಸಿಂಗ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.