ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ಹೊಂದಿಸೋದೇ ಸವಾಲು
Team Udayavani, Nov 12, 2017, 1:20 PM IST
ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂಗ್ಲಿಷ್, ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನ
ವಿಷಯದ ಶಿಕ್ಷಕರನ್ನು ಹೊಂದಿಸುವುದೇ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೊಡ್ಡ ಸವಾಲಾಗಿದೆ.
ಸುಮಾರು 10,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದಾದ ನಂತರವೂ ಸುಮಾರು
55,000 ಶಿಕ್ಷಕರನ್ನು ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಸ ಬೇಕಾದ ಅನಿವಾರ್ಯತೆ ಇದೆ. ಕಿರಿಯ ಪ್ರಾಥಮಿಕ ಶಾಲೆ (1ರಿಂದ5ನೇ ತರಗತಿ)ಯಲ್ಲಿ ಸಮಾಜ ವಿಜ್ಞಾನ ವಿಷಯಾಧಾರಿತವಾಗಿ ಬೋಧನೆ ಮಾಡಬಲ್ಲ ಸಾಮರ್ಥ್ಯ ಹೊಂದಿರುವ 1.50 ಲಕ್ಷ ಶಿಕ್ಷಕರು ಇದ್ದಾರೆ. ಹಿರಿಯ ಪ್ರಾಥಮಿಕ ಶಾಲೆ (6ರಿಂದ 8ನೇ ತರಗತಿ)ಯಲ್ಲಿ ವಿಷಯಾಧಾರಿತವಾಗಿ ಬೋಧನೆ ಮಾಡುವ ಶಿಕ್ಷಕರ ಕೊರತೆ ಇದೆ.
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಜತೆಗೆ ಮೂರ್‍ನಾಲ್ಕು ವರ್ಷಗಳಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಸಂಖ್ಯೆಯೂ ಅಧಿಕವಾಗಿದೆ. ವಿಜ್ಞಾನ, ಗಣಿತ ಹಾಗೂ ಇಂಗ್ಲಿಷ್ ಶಿಕ್ಷಕರು ನಿವೃತ್ತಿಯಾದ ನಂತರ ಆ ಹುದ್ದೆಗಳು ಖಾಲಿಯಾಗಲಿವೆ. ಅದೇ ವಿಷಯದ ಬೋಧಕರನ್ನು ನೇಮಿಸಿಕೊಳ್ಳುವ ಅಗತ್ಯವಿದೆ.
2016-17ರ ಡೈಸ್ ವರದಿಯ ಪ್ರಕಾರ ರಾಜ್ಯದಲ್ಲಿ 21,441 ಕಿರಿಯ ಪ್ರಾಥಮಿಕ ಹಾಗೂ 22,454 ಹಿರಿಯ ಪ್ರಾಥಮಿಕ ಶಾಲೆಗಳಿವೆ. ಹಿರಿಯ ಪ್ರಾಥಮಿಕ ಶಾಲೆಗೆ 48,998 ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 42,117 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ಪ್ರಾಥಮಿಕ ಶಾಲೆಗೆ 1,45,720 ಹುದ್ದೆಗಳು ಮಂಜೂರಾಗಿದ್ದು, 1,24,019 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.
68 ಸಾವಿರ ಅರ್ಜಿ: ಇಂಗ್ಲಿಷ್ ವಿಷಯಕ್ಕೆ 4,531, ಸಮಾಜ ವಿಜ್ಞಾನಕ್ಕೆ 1,236 ಹಾಗೂ ಗಣಿತ ಮತ್ತು ವಿಜ್ಞಾನಕ್ಕೆ 4,233 ಪದವೀಧರ ಶಿಕ್ಷಕರು ಸೇರಿದಂತೆ 10,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾವಾರು
ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 10 ಸಾವಿರ ಹುದ್ದೆಗಳಿಗೆ 68,828
ಅರ್ಜಿಗಳು ಬಂದಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುವುದರಿಂದ ಆಯಾ ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಅನುಗುಣವಾಗಿ ಒಬ್ಬನೇ ಅಭ್ಯರ್ಥಿ ಎರಡು ಅಥವಾ ಮೂರು ವಿಷಯಕ್ಕೂ ಅರ್ಜಿ ಸಲ್ಲಿಸಿರುವ ಸಾಧ್ಯತೆ ಇದೆ.
ಅರ್ಜಿ ಸಲ್ಲಿಸಲು ಆಗುತ್ತಿಲ್ಲ: ಪದವಿಯಲ್ಲಿ ಇಂಗ್ಲಿಷ್ ಐಚ್ಛಿಕ ವಿಷಯವಾಗಿ ತೆಗೆದುಕೊಂಡು, ಬಿ.ಇಡಿ ಪೂರೈಸಿದ
ಅಭ್ಯರ್ಥಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಹಾಗೆಯೇ ಶಿಕ್ಷಕರ ಅರ್ಹತಾ
ಪರೀಕ್ಷೆಯಲ್ಲಿ ಶೇ.50ರಷ್ಟಕ್ಕಿಂತ ಕಡಿಮೆ ಅಂಕ ಪಡೆದು ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು
ಸಾಧ್ಯವಾಗುತ್ತಿಲ್ಲ. ಅಲ್ಲದೇ, ಕೆಲವೊಂದು ವಿಷಯಕ್ಕೆ ಶಿಕ್ಷಕರ ನೇಮಕಾತಿಯನ್ನೇ ಮಾಡಿಕೊಂಡಿಲ್ಲ ಎಂದು ಶಿಕ್ಷಕ ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಆರೋಪಿಸಿದ್ದಾರೆ.
ಪರೀಕ್ಷೆಗೆ ಸಿದ್ಧತೆ
10 ಸಾವಿರ ಶಿಕ್ಷಕರ ನೇಮಕಕ್ಕೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನ.11ರಿಂದ ಡಿ.10ರ ತನಕ ನಾಲ್ಕು ಹಂತಗಳಲ್ಲಿ
ನಡೆಯಲಿದೆ. ಜಿಲ್ಲಾ ಕೇಂದ್ರ, ಪರೀಕ್ಷೆ ಭದ್ರತಾ ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ಆನ್‌ಲೈನ್ ಮೂಲಕ ಒದಗಿಸುವುದು ಸೇರಿದಂತೆ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪರೀಕ್ಷೆಯನ್ನು ಗೊಂದಲವಿಲ್ಲದೆ ನಡೆಸುವ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೇಂದ್ರೀಕೃತ ದಾಖಲಾತಿ ಘಟಕಗಳ ಅಧಿಕಾರಿಗಳು ಸೇರಿಕೊಂಡು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪತ್ರದ ಮೂಲಕ ಮಾತುಕತೆ ನಡೆಸುತ್ತಿದ್ದಾರೆ.
ಎಲ್ಲಾ ವಿಷಯಗಳ ಶಿಕ್ಷಕರನ್ನು ಒಮ್ಮೆಗೇ ನೇಮಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ನೀಡಿರುವ ಸೂಚನೆಯಂತೆ ಈ ವರ್ಷ ವಿಜ್ಞಾನ, ಗಣಿತ,ಇಂಗ್ಲಿಷ್ ಹಾಗೂ ಸಮಾಜ ವಿಜ್ಞಾನ ಶಿಕ್ಷಕರ ನೇಮಕಾತಿ ನಡೆಯುತ್ತಿದೆ. ಹಿರಿಯ ಪ್ರಾಥಮಿಕ ಶಾಲೆಗೆ ಇನ್ನೂ 55 ಸಾವಿರ ಶಿಕ್ಷಕರನ್ನು ಹೊಂದಿಸಬೇಕಾದ ಅನಿವಾರ್ಯತೆ ಇದೆ.
– ಕೆ.ರತ್ನಯ್ಯ, ಉಪ ನಿರ್ದೇಶಕ, ಕೇಂದ್ರೀಕೃತ
ದಾಖಲಾತಿ ಘಟಕ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.