ರಾಜ್ಯ ಸರ್ಕಾರದ ವಿರುದ್ಧ ಇಂದು ಆರೋಪಪಟ್ಟಿ
Team Udayavani, May 11, 2017, 10:40 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಆರೋಪಪಟ್ಟಿ ಬಿಡುಗಡೆ ಮಾಡಲಾಗುವುದು ಎಂಬು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 11ರ ಗುರುವಾರ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಆರೋಪಪಟ್ಟಿಯ ಕೈಪಿಡಿ ಬಿಡುಗಡೆ ಮಾಡಲಾಗುವುದು. ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಪಕ್ಷದವರು ಪರಸ್ಪರ ಕಿತ್ತಾಡುತ್ತಾ ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ. ತೀವ್ರ ಬರಗಾಲ ಇದ್ದರೂ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಆರೋಪಪಟ್ಟಿಯಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಅವರು, ರಾಜ್ಯ ಬಿಜೆಪಿಯಲ್ಲಿ ಗೊಂದಲವಿದೆ ಎಂದು ಹೇಳಿಕೊಂಡು ಕಾಂಗ್ರೆಸ್‌ನವರು ಇಲ್ಲದ ಗೊಂದಲ ಸೃಷ್ಟಿ ಮಾಡಲು ಪ್ರಯತ್ನಿಸಿದರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಎಲ್ಲರೂ ಒಂದಾಗಿದ್ದೇವೆ. ಆದರೆ, ಕಾಂಗ್ರೆಸ್‌ನಲ್ಲೇ ಸಾಕಷ್ಟು ಗೊಂದಲಗಳಿದ್ದು, ಪಕ್ಷದ ಮುಖಂಡರು ವೀಕ್ಷಕರ ಎದುರೇ ಹೊಡೆದಾಡಿಕೊಳ್ಳುವ ಹಂತ ತಲುಪಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಕಿತ್ತಾಟ ಆರಂಭವಾಗಿದೆ. ಇದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಪಡೆಯುವ ನಮ್ಮ ಗುರಿಗೆ ನೆರವಾಗಲಿದೆ ಎಂದರು.
ತುಮಕೂರಿನಿಂದ ಜಿಲ್ಲಾ ಪ್ರವಾಸ ಆರಂಭ:
ಇದಕ್ಕೂ ಮುನ್ನ ಪಾವಗಡದ ಹಲವು ಜೆಡಿಎಸ್ ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡು ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮೇ 18ರಿಂದ ಒಂದೂಕಾಲು ತಿಂಗಳು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವ ಬಗ್ಗೆ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಹೇಳಿದ್ದೆ. ಅದರಂತೆ ಅಂದು ಬೆಳಗ್ಗೆ 9 ಗಂಟೆಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ತೆರಳಿ ಸಿದ್ಧಗಂಗಾ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಅಲ್ಲಿಂದಲೇ ಪ್ರವಾಸ ಆರಂಭಿಸುವುದಾಗಿ ಹೇಳಿದರು.
ತಮ್ಮ ಜಿಲ್ಲಾ ಪ್ರವಾಸದ ವೇಳೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಜನರು ಹೆಚ್ಚಾಗಿರುವ ಮೊಹಲ್ಲಾಗಳಿಗೆ ಭೇಟಿ ನೀಡಲಾಗುವುದು. ಆ ಜಿಲ್ಲೆಯ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರೊಂದಿಗೆ ಕುಳಿತು ಸಂಘಟನೆ ಬಲಪಡಿಸುವ ಬಗ್ಗೆ ಚರ್ಚಿಸಲಾಗುವುದು. ಸಂಜೆ ಆ ಜಿಲ್ಲೆಯ ಯಾವುದಾದರೂ ಒಂದು ತಾಲೂಕಿನಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗುವುದು ಎಂದು ಹೇಳಿದರು.
ಎಸ್‌ಸಿ, ಎಸ್ಟಿ, ಓಬಿಸಿ ಮೇಲೆ ಕಣ್ಣು:
ದೇಶದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಇದಕ್ಕೆ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 325 ಸೀಟು ಗೆದ್ದಿರುವುದೇ ಸಾಕ್ಷಿ. ಅದರಲ್ಲೂ 75 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದ ಜನ ನಮ್ಮ ಪರವಾಗಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಈ ಸಮುದಾಯವನ್ನು ಒಲಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸಲಿದ್ದು, ನನ್ನ ಜಿಲ್ಲಾ ಪ್ರವಾಸದ ವೇಳೆ ಈ ಸಮುದಾಯದ ಮುಖಂಡರು, ಕಾರ್ಯಕರ್ತರನ್ನು ಒಟ್ಟು ಸೇರಿಸಬೇಕು. ಸಾರ್ವಜನಿಕ ಸಭೆಗಳಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಜನರನ್ನು ಮರುಳು ಮಾಡಿ ಚುನಾವಣೆ ಗೆಲ್ಲಲು ಕಾಂಗ್ರೆಸ್ ಎಲ್ಲಾ ವಾಮ ಮಾರ್ಗಗಳನ್ನು ಅನುಸರಿಸಲು ಸಿದ್ಧವಾಗಿದೆ. ಜೆಡಿಎಸ್‌ನಲ್ಲಿ ಏನಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದ್ದು, ಆ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಹೋರಾಟ ಏನೇ ಇದ್ದರೂ ಅದು ಕಾಂಗ್ರೆಸ್ ವಿರುದ್ಧ. ಆದ್ದರಿಂದ ಎಚ್ಚರಿಕೆಯಿಂದ ರಾಜಕಾರಣ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ಇನ್ನು 8-9 ತಿಂಗಳಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಚುನಾವಣಾ ಕಣಕ್ಕೆ ಧುಮುಕಬೇಕಿದ್ದು, ಅದಕ್ಕೆ ಸಿದ್ಧವಿರುವಂತೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.