ಜನಾರ್ದನ ರೆಡ್ಡಿ ಸೇರಿ 10 ಮಂದಿ ವಿರುದ್ಧ ಚಾರ್ಜ್‌ಶೀಟ್‌


Team Udayavani, Feb 20, 2019, 6:28 AM IST

reddy-seri.jpg

ಬೆಂಗಳೂರು: ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣ ತನಿಖೆ ಪೂರ್ಣಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸೇರಿ ಹತ್ತು ಮಂದಿ ವಿರುದ್ಧ ಒಂದನೇ ಸಿಸಿಎಚ್‌ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ಸುಮಾರು 4,800 ಪುಟಗಳ 12 ಸಂಪುಟಗಳನ್ನೊಳಗೊಂಡ ದೋಷಾರೋಪಟ್ಟಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಪ್ರಕರಣದ ಇತರೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎಂದು ಉಲ್ಲೇಖೀಸಿರುವ ಸಿಸಿಬಿ ಪೊಲೀಸರು, ಜನಾರ್ದನರೆಡ್ಡಿ ಸೇರಿ ಐವರು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದ್ದು, ಈ ಸಂಬಂಧ ಸರ್ಕಾರ ಕೂಡ ಅಧಿಕೃತವಾಗಿ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಆ್ಯಂಬಿಡೆಂಟ್‌ ಮಾರ್ಕೆಟಿಂಗ್‌ ಪ್ರೈವೇಟ್‌ ಲಿಮಿಟೆಡ್‌, ಸೈಯದ್‌ ಫ‌ರೀದ್‌ ಅಹಮದ್‌, ಸೈಯದ್‌ ಆಫಾಕ್‌ ಅಹಮದ್‌, ಇರ್ಫಾನ್‌ ಮಿರ್ಜಾ, ವಿಜಯ್‌ ಟಾಟಾ, ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ, ಮೆಹಫ‌ೂಜ್‌ ಅಲಿಖಾನ್‌, ಬಳ್ಳಾರಿ ರಮೇಶ್‌, ಇನಾಯತ್‌ ಉಲ್ಲಾ ವಹಾಬ್‌ ಮತ್ತು ಅಶ್ರಫ್ ಅಲಿ ವಿರುದ್ಧ ಸಾûಾÂಧಾರಗಳನ್ನು ಸಂಗ್ರಹಿಸಿ ದೋಷಾರೋಪಟ್ಟಿ ಸಲ್ಲಿಸಲಾಗಿದೆ.

60 ಕೋಟಿ ಆಸ್ತಿ ಮುಟ್ಟುಗೋಲಿಗೆ ಮನವಿ: ಮಾಜಿ ಸಚಿವ ಜನಾರ್ದನರೆಡ್ಡಿ ಅವರಿಗೆ ಸೇರಿದ ಐದು ಕೋಟಿ ರೂ. ಮೌಲ್ಯದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಪಾರಿಜಾತ ಅಪಾರ್ಟ್‌ಮೆಂಟ್‌ ಹಾಗೂ ಆ್ಯಂಬಿಡೆಂಟ್‌ ಮಾರ್ಕೆಂಟಿಂಗ್‌ ಪ್ರೈವೇಟ್‌ ಲಿಮಿಟೆಡ್‌ನ‌ ನಿರ್ದೇಶಕರಾದ ಸೈಯದ್‌ ಫ‌ರೀದ್‌ ಅಹಮದ್‌, ಸೈಯದ್‌ ಆಫಾಕ್‌ ಅಹಮದ್‌ಗೆ ಸೇರಿದ ಸಾರಾಯಿಪಾಳ್ಯದ ಮೂರು ನಿವೇಶನಗಳು,

ಅಂಬೇಡ್ಕರ್‌ ಕಾಲೇಜ್‌ ಲೇಔಟ್‌ನಲ್ಲಿರುವ ಒಂದು ಫ್ಲ್ಯಾಟ್‌ ಹಾಗೂ ಕಲಾಸಿಪಾಳ್ಯದಲ್ಲಿರುವ ರಿಲಿಜೆಯಂಟ್‌ ಅಪಾರ್ಟ್‌ಮೆಂಟ್‌ನಲ್ಲಿರುವ ಆರು ಫ್ಲ್ಯಾಟ್‌ಗಳು, ಜಿಗಣಿಯಲ್ಲಿ ನಿರ್ಮಿಸಲಾಗುತ್ತಿರುವ ಕೆಬಿಎಚ್‌ಸಿ ಎಕೊಟಿಕಾದಲ್ಲಿ 14 ಫ್ಲ್ಯಾಟ್‌ಗಳು, ಆನೇಕಲ್‌ಬಳಿ ಸೊಣ್ಣನಾಯಕನಹಳ್ಳಿಯ 17 ಗುಂಟೆ ಜಮೀನು, ವಿಜಯ್‌ ಟಾಟಾ ನಿರ್ಮಿಸುತ್ತಿರುವ ಆನೇಕಲ್‌ನ ದಿ ಗ್ರೀನ್ಸ್‌ ಪ್ರಾಜೆಕ್ಟ್‌ನಲ್ಲಿ 11 ಫ್ಲ್ಯಾಟ್‌ಗಳು, ದೇವನಹಳ್ಳಿಯ ಸ್ಕೈ ವ್ಯೂ ಪ್ರಾಜೆಕ್ಟ್‌ನ 71 ಫ್ಲ್ಯಾಟ್‌ಗಳು ಒಟ್ಟು 54 ಕೋಟಿ ರೂ. ಮೌಲ್ಯದ ಆಸ್ತಿಯಾಗಿದೆ.

ಅಶ್ರಫ್ಅಲಿಗೆ ಸೇರಿದ ಒಂದು ಕೋಟಿ ರೂ. ಮೌಲ್ಯದ ಬಾಗಲೂರು ಗ್ರಾಮದ ಎರಡು ಎಕರೆ ಜಮೀನು, ಚಿಕ್ಕRತಾತಮಂಗಲದಲ್ಲಿರುವ ಒಂದು ಸೈಟ್‌ ಸೇರಿ ಒಟ್ಟು 60 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ಕೆಪಿಐಡಿ ಕಾಯ್ದೆ ಅನ್ವಯ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಕ್ಷಮ ಪ್ರಾಧಿಕಾರದ ಬೆಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಆಯುಕ್ತ ನಾಗರಾಜು ಅವರಿಗೆ ವರದಿ ಸಲ್ಲಿಸಲಾಗಿತ್ತು.

ಈ ಸಂಬಂಧ ಸರ್ಕಾರ ಕೂಡ ಮುಟ್ಟುಗೋಲು ಹಾಕಿಕೊಳ್ಳಲು ಜ.31ರಂದೆ ಸೂಚಿಸಿತ್ತು ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ. ಅಷ್ಟೇ ಅಲ್ಲದೆ, ಆ್ಯಂಬಿಡೆಂಟ್‌ ಸಂಸ್ಥೆಯ ಸದಸ್ಯರು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸಂಬಂಧಪಟ್ಟ ಒಟ್ಟು 37 ಬ್ಯಾಂಕ್‌ ಖಾತೆಗಳನ್ನು ಜಪ್ತಿ ಮಾಡಿದ್ದು, 3.45 ಕೋಟಿ ರೂ. ಹಣವನ್ನು ಡಿ.ಡಿ. ರೂಪದಲ್ಲಿ ನ್ಯಾಯಾಲಯದ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಿಸಿಬಿ ತಿಳಿಸಿದೆ.

120 ಕೋಟಿ ರೂ. ಹೂಡಿಕೆ: ಪ್ರಕರಣದ ಇದುವರೆಗಿನ ತನಿಖೆಯಲ್ಲಿ ವಂಚನೆ ಕಂಪನಿಯಲ್ಲಿ 10,564 ಮಂದಿ ಸುಮಾರು 120 ಕೋಟಿ ರೂ. ಹೂಡಿಕೆ ಮಾಡಿರುವುದು ಕಂಡು ಬಂದಿದೆ. ಈ ಮಧ್ಯೆ ಸಿಸಿಬಿ ಕೇಂದ್ರ ಕಚೇರಿಯಲ್ಲಿ 4,800 ಮಂದಿ ಹೂಡಿಕೆದಾರರು ತಮ್ಮ ಹೆಸರನ್ನು ನೊಂದಾಯಿಸಿದೆ. 82.10 ಕೋಟಿ ರೂ. ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದು, ಇದುವರೆಗೂ ಸಂಸ್ಥೆ ವಾಪಸ್‌ ನೀಡಿಲ್ಲ.

ಮತ್ತಷ್ಟು ಆಸ್ತಿ ಮುಟ್ಟುಗೋಲು ಸಾಧ್ಯತೆ: ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ಮತ್ತು ಅವರ ಸಂಬಂಧಿಕರ ಹಾಗೂ ಆರೋಪಿತರು ಹೂಡಿಕೆ ಮಾಡಿರುವ ಆಸ್ತಿಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ. ಜತೆಗೆ ವಂಚನೆಗೊಳಗಾಗಿರುವ ಹೂಡಿಕೆದಾರರ ಹೆಸರು ನೊಂದಣಿ ಕಾರ್ಯ ಮುಂದುವರಿದೆ ಎಂದು ಸಿಸಿಬಿ ಮೂಲಗಳು ತಿಳಿಸಿದೆ.

ನಿರೀಕ್ಷಣಾ ಜಾಮೀನು: ಪ್ರಕರಣದಲ್ಲಿ ಆರೋಪಿಗಳಾದ ಇರ್ಫಾನ್‌ ಮಿರ್ಜಾ, ಗಾಲಿ ಜನಾರ್ದನರೆಡ್ಡಿ, ಮೆಹಫ‌ೂಜ್‌ ಅಲಿಖಾನ್‌, ಬಳ್ಳಾರಿ ರಮೇಶ್‌, ಇನಾಯತ್‌ ಉಲ್ಲಾ ವಹಾಬ್‌ ಮತ್ತು ಅಶ್ರಫ್ ಅಲಿಯನ್ನು ಪ್ರಕರಣದಲ್ಲಿ ಬಂಧಿಸಿದ್ದು, ಆರೋಪಿಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿತ್ತು. ಸದ್ಯ ಈ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಸೈಯದ್‌ ಫ‌ರೀದ್‌ ಅಹಮದ್‌ ಹಾಗೂ ಸೈಯದ್‌ ಆಫಾಕ್‌ ಅಹಮದ್‌ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುವ ಮೊದಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಪ್ರಕರಣದ ಹಿನ್ನೆಲೆ: ದೇವರಜೀವನಹಳ್ಳಿಯಲ್ಲಿ 2016ರಲ್ಲಿ ಆ್ಯಂಬಿಡೆಂಟ್‌ ಕಂಪನಿ ಆರಂಭವಾಗಿದ್ದು, ಕಂಪನಿ ನಿರ್ದೇಶಕರಾದ ಸೈಯದ್‌ ಫ‌ರೀದ್‌ ಅಹಮದ್‌, ಸೈಯದ್‌ ಅಫಾಕ್‌ ಅಹಮದ್‌ ಮತ್ತು ಇರ್ಫಾನ್‌ ಮಿರ್ಜಾ ಅಧಿಕ ಬಡ್ಡಿ ದರದ ಆಮಿಷವೊಡ್ಡಿ ಸಾವಿರಾರು ಜನರಿಗೆ ನೂರಾರು ಕೋಟಿ ವಂಚನೆ ಮಾಡಿದ್ದರು. ಈ ಸಂಬಂಧ ಡಿ.ಜೆ.ಹಳ್ಳಿ ಸೇರಿ ಇತರ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿತ್ತು.

ಅಲ್ಲದೆ, ಆ್ಯಂಬಿಡೆಂಟ್‌ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ತನಿಖೆಯಲ್ಲಿ ನೆರವು ನೀಡುವುದಾಗಿ ನಂಬಿಸಿ ಆ್ಯಂಬಿಡೆಂಟ್‌ ಕಂಪನಿ ಮಾಲೀಕ ಫ‌ರೀದ್‌ನಿಂದ ಜನಾರ್ದನ ರೆಡ್ಡಿ ಕೋಟ್ಯಂತರ ರೂ. ಪಡೆದಿದ್ದರು ಎಂದು ಹೇಳಲಾಗಿತ್ತು. ಈ ಮಧ್ಯೆ ಕೆಲ ಹೂಡಿಕೆದಾರರು ನಗರ ಪೊಲೀಸ್‌ ಆಯುಕ್ತರನ್ನು ಭೇಟಿಯಾಗಿ ವಂಚನೆ ಕಂಪನಿಯಿಂದ ಹಣ ಕೊಡಿಸುವಂತೆ ಮನವಿ ಮಾಡಿದ್ದು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.