ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ದೇವೇಗೌಡರಿಗೆ ಮುಖ್ಯಮಂತ್ರಿ ಮನವಿ
Team Udayavani, Mar 5, 2018, 6:15 AM IST
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆಗೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮನವಿ ಮಾಡಿದ್ದಾರೆ.
ಮಾರ್ಚ್ 8ರಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಅಂದಿನ ಸಭೆಯಲ್ಲಿ ಭಾಗವಹಿಸುವಂತೆ ಪತ್ರ ಬರೆದಿದ್ದಾರೆ. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಫೆ.16ರಂದು ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ಮುಖಂಡರು, ಕಾವೇರಿ ಜಲಾನಯನ ಪ್ರದೇಶದ ಶಾಸಕರು ಹಾಗೂ ಸಂಸದರ ಸಭೆಯನ್ನು ಮಾರ್ಚ್ 8ರಂದು ಸಂಜೆ 4 ಗಂಟೆಗೆ ಕರೆಯಲಾಗಿದೆ. ತಾವು ದಯವಿಟ್ಟು ಮೇಲಿನ ಸಭೆಯಲ್ಲಿ ಭಾಗವಹಿಸಬೇಕೆಂದು ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಹಿಂದೆಯೂ ಕಾವೇರಿ ವಿಚಾರದಲ್ಲಿ ಸಮಸ್ಯೆ ಉಂಟಾದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ದೇವೇಗೌಡರನ್ನು ಭೇಟಿಯಾಗಿ ಸಲಹೆ ಪಡೆದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಗೂ ಆಹ್ವಾನ ನೀಡಿದ್ದರು. ದೇವೇಗೌಡರು ಸಭೆಯಲ್ಲಿ ಭಾಗವಹಿಸಿ ಕೆಲವೊಂದು ಸೂಚನೆ ನೀಡಿದ್ದರು. ನಂತರ ಕಾವೇರಿ ವಿಚಾರದಲ್ಲೇ ರಾಜ್ಯಕ್ಕೆ ಅನ್ಯಾಯವಾಗುವ ಆತಂಕ ಎದುರಾದಾಗ ದೇವೇಗೌಡರು ವಿಧಾನಸೌಧ-ವಿಕಾಸಸೌಧ ನಡುವಿನ ಗಾಂಧಿಪ್ರತಿಮೆ ಬಳಿ ಉಪವಾಸ ಸಹ ಕುಳಿತಿದ್ದರು. ಇತ್ತೀಚೆಗೆ ಸುಪ್ರೀಂಕೊರ್ಟ್ ತೀರ್ಪು ಬಂದ ನಂತರ ರಾಜ್ಯ ಸರ್ಕಾರ ಮೌನವಾಗಿರುವುದರ ಬಗ್ಗೆ ಗೌಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಬಂದಿರುವ ತೀರ್ಪಿಗೆ ಸಂತೃಪ್ತರಾದರೆ ಮುಂದೆ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.