ಐಎಂಎ ಗ್ರೂಪ್‌ಗೆ ಕ್ಲೀನ್‌ಚಿಟ್ ನೀಡಿತ್ತು ಸಿಐಡಿ
ಕಾನೂನು ಕ್ರಮ ಜರುಗಿಸುವುದು ಅಸಾಧ್ಯ ಎಂದಿದ್ದ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ
Team Udayavani, Jul 12, 2019, 7:28 AM IST
ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಬೆಳಕಿಗೆ ಬರುವ ಮುನ್ನವೇ ಆ ಸಂಸ್ಥೆ ಪರವಾಗಿ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ವರದಿ ನೀಡಿದ ರೀತಿಯಲ್ಲೇ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಅಧಿಕಾರಿಗಳು ಸಹ ಪ್ರಸಕ್ತ ವರ್ಷದ ಆರಂಭದಲ್ಲೇ ಕಂಪನಿ ಪರವಾಗಿ ತನಿಖಾ ವರದಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.
ಈ ವರದಿಯನ್ನು ಸಿಐಡಿಯ ಅಂದಿನ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ ಆಗಿದ್ದ ಹೇಮಂತ್ ನಿಂಬಾಳ್ಕರ್ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿರುವುದು ಗೊತ್ತಾಗಿದೆ.
2017ರಲ್ಲಿ ಬೆಂಗಳೂರಿನ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್.ಜೋಸ್ನಾ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರ ಬರೆದು, ಐಎಂಎ ಸಮೂಹ ಸಂಸ್ಥೆಯು ನಿಯಮ ಮೀರಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಅಧಿಕಾರಿಗಳು, ದೂರುದಾರರು, ಮನ್ಸೂರ್ ಖಾನ್, ಕಂಪನಿಯ ಲೆಕ್ಕಪರಿಶೋಧಕರು ಸೇರಿದಂತೆ ಹತ್ತಾರು ಮಂದಿಯನ್ನು ವಿಚಾರಣೆ ನಡೆಸಿತ್ತು.
ಹಣಕಾಸು ಸಂಸ್ಥೆಯಲ್ಲ: ಈ ವೇಳೆ ‘ಕಂಪನಿಯು ಹಣಕಾಸು ಸಂಸ್ಥೆಯಾಗಿರುವುದಿಲ್ಲ. ಹಣಕಾಸಿನ ಸಂಸ್ಥೆಯಂದು ಯಾವುದೇ ಹೊಡಿಕೆದಾರರು ಹಣ ಹೂಡಿಕೆ ಮಾಡಿರುವುದಿಲ್ಲ. ಕಂಪನಿಯ ಸಾರ್ವಜನಿಕರನ್ನು ನಂಬಿಸಿ ಬಡ್ಡಿ, ಹೆಚ್ಚು ಲಾಭ ನೀಡುತ್ತೇನೆಂದು ಸಾರ್ವಜನಿಕರಿಂದ ಹಣವನ್ನು ಠೇವಣಿ ರೂಪದಲ್ಲಿ ಸಂಗ್ರಹಿಸಿ ಮೋಸ ಮಾಡಿರುವ ಬಗ್ಗೆ ಯಾವುದೇ ಪೂರಕ ಸಾಕ್ಷ್ಯಗಳು ಇಲ್ಲದ ಕಾರಣ ಮತ್ತು ಸಂಸ್ಥೆ ಹಾಗೂ ಸಹಭಾಗಿತ್ವದ ಸಂಸ್ಥೆಗಳು ವರ್ಷವಾರು ಆದಾಯ ಇಲಾಖೆಗೆ ಸಲ್ಲಿಸಿದ ಅಯವ್ಯಯ ಮಾಹಿತಿ ದಾಖಲೆಗಳು ಹಾಗೂ ಕಂಪನಿಯ ಪಾಲುದಾರ ಹಾಗೂ ಮುಖ್ಯಸ್ಥ ಮನ್ಸೂರ್ ಖಾನ್ ವೈಯಕ್ತಿಕ ಅಯವ್ಯಯವನ್ನು 2011ರಿಂದ 2018ರವರೆಗೆ ಪರಿಶೀಲಿಸಲಾಗಿದೆ. ಅಲ್ಲಿಯೂ ಯಾವುದೇ ನ್ಯೂನತೆಗಳು ವಿಚಾರಣೆ ವೇಳೆ ಕಂಡು ಬಂದಿಲ್ಲ. ಅಲ್ಲದೆ, ವೈಯಕ್ತಿಕವಾಗಿ ಠೇವಣಿ ನೀಡಿ ಮೋಸ ಹೋಗಿರುವುದಾಗಿ ಯಾರು ಹೇಳಿಕೆ ನೀಡಲು ಮುಂದೆ ಬಂದಿಲ್ಲ. ಹೀಗಾಗಿ ಕಂಪನಿಯ ವಿರುದ್ಧ ಯಾವುದೇ ಕಾನೂನು ಕ್ರಮಕೈಗೊಳ್ಳಲು ಸಾಧ್ಯವಿಲ್ಲ’ ಎಂದು ವರದಿ ನೀಡಿದ್ದರು.
ವಿಚಾರಣೆಗೆ ರೋಷನ್ ಬೇಗ್ ಗೈರು:
ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ರೋಷನ್ ಬೇಗ್ ಗುರುವಾರ ವಿಶೇಷ ತನಿಖಾ ದಳದ (ಎಸ್‌ಐಟಿ) ವಿಚಾರಣೆಗೆ ಗೈರಾಗಿದ್ದು, ಮೂರು ವಾರಗಳ ಗಡುವು ನೀಡುವಂತೆ ತನಿಖಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಆದರೆ, ಕಾಲವಕಾಶ ವಿಸ್ತರಿಸಲು ನಿರಾಕರಿಸಿರುವ ಎಸ್‌ಐಟಿ ಅಧಿಕಾರಿಗಳು, ಜು.15ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲೇಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಗೈರಾಗಿರುವುದಕ್ಕೆ ವಿವರಣೆ ನೀಡಿರುವ ಶಾಸಕ ರೋಷನ್ ಬೇಗ್, ತಮಗೆ ಅನಾರೋಗ್ಯ ಸಮಸ್ಯೆ ಇದ್ದು, ಹಜ್ ಯಾತ್ರೆ ಕೈಗೊಂಡಿದ್ದೇನೆ. ಹಾಗೆಯೇ ಕೆಲ ವೈಯಕ್ತಿಕ ಕಾರಣಗಳಿಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಖುದ್ದು ಹಾಜರಾಗಲು ಮೂರು ವಾರಗಳ ಗಡುವು ನೀಡುವಂತೆ ಮನವಿ ಮಾಡಿದ್ದರು. ಆದರೆ, ತನಿಖಾಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಮುಖ್ಯಸ್ಥ, ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಬಿಡುಗಡೆ ಮಾಡಿರುವ ಆಡಿಯೋದಲ್ಲಿ, ‘ಶಾಸಕ ರೋಷನ್ ಬೇಗ್‌ಗೆ 400 ಕೋಟಿ ರೂ. ಕೊಟ್ಟಿದ್ದೇನೆ. ಅವರ ಕಾಟದಿಂದಲೇ ದೇಶ ಬಿಡಬೇಕಾಯಿತು,’ ಎಂದು ಆತ ಹೇಳಿದ್ದ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಜು.9ರಂದು ರೋಷನ್ ಬೇಗ್‌ಗೆ ನೋಟಿಸ್ ನೀಡಿತ್ತು. ಜತೆಗೆ ಜು.11ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಹಣ ಹೂಡಲು ಪ್ರಚೋದನೆ: ಮೌಲ್ವಿ ಬಂಧನ
ಐಎಂಎ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಮೌಲ್ವಿಯೊಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.ಶಿವಾಜಿನಗರದ ಒಪಿಎಚ್ ರಸ್ತೆಯಲ್ಲಿರುವ ಬೇಪಾರಿಯನ್ ಮಸೀದಿಯ ಧರ್ಮಗುರು ಹನೀಫ್ ಅಫ‌್ಸರ್ ಅಜೀಜಿ ಎಂಬವರನ್ನು ಬಂಧಿಸಲಾಗಿದೆ. ಆರೋಪಿ ಧರ್ಮ ಗುರುವಾಗಿದ್ದು, ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ವಂಚಕ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂತೆ ಸಾವಿರಾರು ಮಂದಿಗೆ ಪ್ರಚೋದಿಸಿದ್ದ. ಈ ಆರೋಪದ ಮೇಲೆ ಮೌಲ್ವಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.ಆರೋಪಿಯು ಮೌಲ್ವಿಯಾಗಿದ್ದರಿಂದ ಆತನ ಮಾತು ನಂಬಿದ ಸಾವಿರಾರು ಮಂದಿ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದರು. ಅದಕ್ಕಾಗಿ ಮನ್ಸೂರ್ ಖಾನ್ 2017ರಲ್ಲಿ ಎಚ್ಬಿಆರ್ ಲೇಔಟ್‌ನಲ್ಲಿ ಮೂರು ಕೋಟಿ ರೂ. ಮೌಲ್ಯದ ಮನೆಯೊಂದನ್ನು ಖರೀದಿಸಿ ಉಡುಗೊರೆ ರೂಪದಲ್ಲಿ ಮೌಲ್ವಿಗೆ ಕೊಟ್ಟಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್‌ಐಟಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.