ಶಿವಾರಾಧನೆಗೆ ನಗರ ಸಿದ್ಧ


Team Udayavani, Feb 24, 2017, 11:42 AM IST

shivrathri.jpg

ಬೆಂಗಳೂರು: ಉಪವಾಸ-ಜಾಗರಣೆ, ಶಿವಧ್ಯಾನ-ಭಜನೆ ಮೂಲಕ ಶಿವನ ಆರಾಧಿಸುವ ಮಹಾಶಿವರಾತ್ರಿಗೆ ರಾಜಧಾನಿ ಸಜ್ಜಾಗಿದೆ. ಕಾಡುಮಲ್ಲೇಶ್ವರ, ಗವಿ ಗಂಗಾಧರೇಶ್ವರ, ಅಲಸೂರು ಸೋಮೇಶ್ವರ, ಎಚ್‌ಎಎಲ್‌ ರಸ್ತೆಯ ಬೃಹತ್‌ ಶಿವ ಮೂರ್ತಿ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ, ಅಲಂಕಾರ, ಹೋಮ ಆಯೋಜಿಸಲಾಗಿದ್ದು ಆಹೋರಾತ್ರಿ ಜಾಗರಣೆಗಾಗಿ ಹಾಸ್ಯೋತ್ಸವ, ಸಂಗೀತ ಕಾರ್ಯಕ್ರಮ, ಭಜನೆ ಏರ್ಪಡಿಸಲಾಗಿದೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಮಲ್ಲೇಶ್ವರಂ, ಜಯನಗರ, ಗಂಗಾನಗರ, ಕೆ.ಆರ್‌.ಮಾರುಕಟ್ಟೆ, ಸಂಜಯನಗರ ಮುಖ್ಯರಸ್ತೆ, ಚಾಮರಾಜಪೇಟೆ, ಕೆಂಗೇರಿ, ಜೆ.ಪಿ.ನಗರ, ಬನಶಂಕರಿ ಸೇರಿದಂತೆ ವಿವಿಧ ಮಾರುಕಟ್ಟೆಯಲ್ಲಿ ಹಬ್ಬದ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಆಗತ್ಯ ವಸ್ತುಗಳ ಜತೆ ಹೂವು -ಹಣ್ಣು  ಖರೀದಿಯಲ್ಲಿ ಜನ ನಿರತರಾಗಿದ್ದರು. ಶಿವನಿಗೆ ಶ್ರೇಷ್ಠವಾದ ಬಿಲ್ವಪತ್ರೆಗೆ ಹೆಚ್ಚಿನ ಬೇಡಿಕೆಯಿತ್ತು. 

ಭಕ್ತರು ಶುಕ್ರವಾರ ಉಪವಾಸ ವ್ರತ ಆಚರಿಸಿ, ಜಾಗರಣೆ ಮಾಡುವುದರಿಂದ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಅವುಗಳ ಬೆಲೆಯಲ್ಲೂ ತುಸು ಏರಿಕೆ ಕಂಡಿತ್ತು. 
ತೆಂಗಿನ ಬೆಲೆ ಏರಿಕೆ: ಚಿಲ್ಲರೆ ಮಾರುಕಟ್ಟೆಯಲ್ಲಿ ತೆಂಗಿನ ಕಾಯಿ ಬೆಲೆ ಗಗನಕೇರಿದೆ. ಸಣ್ಣ ಗಾತ್ರದ ತೆಂಗಿನ ಕಾಯಿಗೆ 22 ರೂ., ಮಧ್ಯಮ ಗಾತ್ರದ ತೆಂಗಿನ ಕಾಯಿಗೆ ರೂ.25 ಮತ್ತು ದೊಡ್ಡ ಗಾತ್ರದ ತೆಂಗಿನ ಕಾಯಿ 28 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. 

ಹೂವು ದುಬಾರಿ: ಮಾರುಕಟ್ಟೆಯಲ್ಲಿ ಈ ಹಿಂದೆ 300ರಿಂದ 400 ರೂ.ನಂತೆ ಮಾರಾಟವಾಗುತ್ತಿದ್ದ ಕನಕಾಂಬರ ಬೆಲೆ ದಿಢೀರ್‌ ದುಪ್ಪಟ್ಟಾಗಿದ್ದು ಪ್ರತಿ ಕೆಜಿಗೆ 500ರಿಂದ 600 ರೂ.ಗೆ ಏರಿತ್ತು. 300 ರೂ.ಇದ್ದ ಮಲ್ಲಿಗೆ ಮೊಗ್ಗು 400ರಿಂದ 500 ರೂ., 80 ರೂ.ಇದ್ದ ಸುಗಂಧರಾಜ 200 ರೂ.ಗೆ ಹಾಗೂ ಕಾಕಡ ಹೂ ಕೆಜಿಗೆ 350 ರೂ. ದರದಲ್ಲಿ ಮಾರಾಟ ಮಾಡಲಾಗಿದೆ ಎಂದು ಹೂವು ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಿ.ಎಂ.ದಿವಾಕರ್‌ ಮಾಹಿತಿ ನೀಡಿದ್ದಾರೆ. 

ಶಿವದ್ಯಾನಕ್ಕಾಗಿ ಹಲವು ಕಾರ್ಯಕ್ರಮ 
ಬೆಂಗಳೂರು:
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ವಿವಿಧ ಶಿವದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುನಿರೆಡ್ಡಿಲೇಔಟ್‌ನಲ್ಲಿ ಅದ್ವೆ„ತ ಕೇಂದ್ರದ ಉದ್ಘಾಟನೆ, ಅದ್ವೆ„ತ ಜ್ಯೋತಿ ಹಾಗೂ ಪಾದುಕೆ ಮೆರವಣಿಗೆ ನಡೆಯಲಿದೆ. ಗಿರಿನಗರದ ಶ್ರೀ ತಾರೆಮರದ ಶನೈಶ್ಚರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ವಿಜಯನಗರದ ಆರ್ಯವೈಶ್ಯ ಮಂಡಳಿ ಶ್ರೀ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ಶ್ರೀ ಶಕ್ತೀಶ್ವರ ಸ್ವಾಮಿ ದರ್ಶನ ಏರ್ಪಡಿಸಿದೆ. 

ರಾಜಾಜಿನಗರದ ಶ್ರೀಮಂಜುನಾಥೇಶ್ವರ ದೇವಾಲ­ಯದಲ್ಲಿ ವಾರ್ಷಿಕ ಮಹೋತ್ಸವ ನಡೆಯಲಿದ್ದು, ಮೇಯರ್‌ ಜಿ.ಪದ್ಮಾವತಿ ಚಾಲನೆ ನೀಡುವರು. ಸಭಾ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್‌ಕುಮಾರ್‌, ಬಿಬಿಎಂಪಿ ಸದಸ್ಯೆ ಚಂದ್ರಕಲಾ ಗಿರೀಶ್‌, ಮಾಜಿ ಸದಸ್ಯ ರವೀಂದ್ರ ಮತ್ತಿತರು ಪಾಲ್ಗೊಳ್ಳುವರು. ಮಲ್ಲೇಶ್ವರಂನ ಶ್ರೀಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಗುಹಾಂತರ ದ್ವಾದಶ ಜ್ಯೋತಿರ್ಲಿಂಗ ದರ್ಶನ, ಪಂಚಾಮೃತ, ರುದ್ರಾಭಿಷೇಕ ನಡೆಯಲಿದೆ. ಕುಮಾರಸ್ವಾಮಿ ಬಡಾವಣೆಯ ವರಪ್ರದ ಶ್ರೀ ಅಭಯ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್‌ನಿಂದ ಶಿವರಾತ್ರಿ ಪ್ರಯುಕ್ತ ಆಂಜನೇಯಸ್ವಾಮಿಗೆ ಪಂಚಾಮೃತ ಅಭಿಷೇಕ ನಡೆಯಲಿದೆ.  

ಗವೀಪುರದ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಕೇಂದ್ರ ಸಚಿವ ಅನಂತಕುಮಾರ್‌, ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯಾ ಪಾಲ್ಗೊಳ್ಳಲಿದ್ದಾರೆ. ನಗರ್ತರಪೇಟೆಯ ಶ್ರೀನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜಾ ಕೈಂಕರ್ಯಗಳು.  ಶ್ರೀಮದ್‌ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದಲ್ಲಿ ಮಹಾಶಿವರಾತ್ರಿ ಮಹೋತ್ಸವ-2017.ಗದ್ದುಗೆ ಮೇಲಿರುವ ಶಿವಲಿಂಗಕ್ಕೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ಮತ್ತು ಕ್ಷೀರಾಭಿಷೇಕ, ಸ್ಫಟಿಕ ಲಿಂಗ ದರ್ಶನ ನೆರವೇರಲಿದೆ. 

ರಾಜ್ಯಾದ್ಯಂತ ಗಂಗಾ ಜಲ ವಿತರಣೆ
ಬೆಂಗಳೂರು:
ಮಹಾಶಿವರಾತ್ರಿ ಅಂಗವಾಗಿ ಹಿಮಾಲಯದಿಂದ ತರಿಸಲಾದ ಗಂಗಾಜಲವನ್ನು ರಾಜ್ಯದ ಶಿವನ ದೇವಾಲಯಗಳಿಗೆ ತಲುಪಿಸುವ ಕಾರ್ಯಕ್ಕೆ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಗುರುವಾರ ನಗರದಲ್ಲಿ ಚಾಲನೆ ನೀಡಿದರು. ಹಿಮಾಲಯದ ತಪ್ಪಲಿನಿಂದ 27,000 ಲೀಟರ್‌ನಷ್ಟು ಗಂಗಾಜಲ ಹೊತ್ತ ಟ್ಯಾಂಕರ್‌ ಲಾರಿ ಬೆಳಗ್ಗೆ ಗವಿಪುರದ ಧೋಂಡೂಸ ಕಲ್ಯಾಣ ಮಂಟಪ ತಲುಪಿತು.

ಬಳಿಕ ಅಲ್ಲಿ ಟ್ಯಾಂಕರ್‌ನಲ್ಲಿದ್ದ ಗಂಗಾಜಲಕ್ಕೆ ಆನಂದ ಗುರೂಜಿ ಅವರಿಂದ ಪೂಜೆ ಸಲ್ಲಿಸುವ ಮೂಲಕ ಶಿವದೇವಾಲಯಗಳಿಗೆ ರವಾನೆ ಮಾಡಲಾಯಿತು. ಈ ಗಂಗಾಜಲವನ್ನು ಕ್ಯಾನ್‌ಗಳಲ್ಲಿ ತುಂಬಿ 28 ವಾಹನಗಳ ಮೂಲಕ ಮುಜರಾಯಿ ಇಲಾಖೆ ವ್ಯಾಪ್ತಿಯ ಮತ್ತು ಖಾಸಗಿ ಒಡೆತನದ ರಾಜ್ಯ ಮೂಲೆ ಮೂಲೆಯ ಒಟ್ಟು 3700 ಪುನಾರತನ ಶಿವ ದೇವಾಲಯಗಳಿಗೆ ತಲುಪಿಸಲಾಗುವುದು.

ಶಿವರಾತ್ರಿ ದಿನವಾದ ಫೆ.24ರ ಶುಕ್ರವಾರ ಮುಂಜಾನೆ ವೇಳೆಗೆ ಗಂಗಾಜಲದ ಎಲ್ಲಾ ಶಿವ ದೇವಾಲಯಗಳಿಗೆ ತಲುಪಲಿದೆ. ಇದರೊಂದಿಗೆ ಶಿವನಿಗೆ ಗಂಗಾಜಲದ ಅಭಿಷೇಕ ಮತ್ತು ಭಕ್ತರಿಗೆ ಗಂಗಾಜಲದ ತೀರ್ಥಪ್ರಸಾದ ವಿನಿಯೋಗ ನಡೆಯುತ್ತಿದೆ ಎಂದು ಹೇಳಿದರು.  ಗಂಗಾಧರೇಶ್ವರನಿಗೆ ಗಂಗಾಜಲ ಅಭಿಷೇಕ: ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಗುರುವಾರವೇ ಗಂಗಾಜಲದ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಯಿತು.

ಶಿವರಾತ್ರಿಯಂದು ಮಾಂಸ ಮಾರಾಟ ನಿಷೇಧ
ಬೆಂಗಳೂರು:
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಶುಕ್ರವಾರ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಹಾಶಿವರಾತ್ರಿ ಅಂಗವಾಗಿ ಅಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.