ಮತ್ತೆ ಮಾತಾಡಿದ ನಗರ ಪೊಲೀಸರ ಬಂದೂಕು


Team Udayavani, Dec 14, 2018, 11:24 AM IST

marhe.jpg

ಬೆಂಗಳೂರು: ಕ್ಯಾಬ್‌ ಚಾಲಕನನ್ನು ದರೋಡೆ ಮಾಡಿ, ಕೊಂದು, ಪಕ್ಕದ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಬೈಯಪ್ಪನಹಳ್ಳಿ ಪೊಲೀಸರು ಗುಂಡೇಟಿನ ರುಚಿ ತೋರಿಸಿ ಬಂಧಿಸಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷ ನಗರ ಪೊಲೀಸರು 29 ಮಂದಿ ಮೇಲೆ ಗುಂಡು ಹಾರಿಸಿದಂತಾಗಿದೆ.

ಹಲಸೂರಿನ ಜೋಗುಪಾಳ್ಯ ನಿವಾಸಿ ಮುರಳಿ ಅಲಿಯಾಸ್‌ ಮುರಳೀಧರನ್‌ (25) ಗುಂಡೇಟು ತಿಂದು ಸೆರೆ ಸಿಕ್ಕ ಆರೋಪಿ. ಈತನ ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾರ್ಯಾಚರಣೆ ವೇಳೆ ಆರೋಪಿಯಿಂದ ಹಲ್ಲೆಗೊಳಗಾದ ಹೆಡ್‌ ಕಾನ್‌ಸ್ಟೆಬಲ್‌ ವಿಜಯ್‌ಕುಮಾರ್‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡಿ.3ರಂದು ಆರೋಪಿ ಮುರಳಿ, ಸಹಚರರಾದ ಪೀಟರ್‌ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಜತೆ ನಾಗವಾರಪಾಳ್ಯದ ಬಳಿ, ಹಾಸನದ ಅರಸೀಕೆರೆ ಮೂಲದ ಕ್ಯಾಬ್‌ ಚಾಲಕ ಮೋಹನ್‌ ಕುಮಾರ್‌ (28)ನನ್ನು ಕೊಲೆಗೈದು, ಮೊಬೈಲ್‌ ಕಸಿದು ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೈಯಪ್ಪನಹಳ್ಳಿ ಪೊಲೀಸರ ವಿಶೇಷ ತಂಡ, ಘಟನಾ ಸ್ಥಳದಲ್ಲಿದ್ದ ಮೋಹನ್‌ ಕುಮಾರ್‌ ಸ್ನೇಹಿತ ಸಂದೀಪ್‌ ನೀಡಿದ ಮಾಹಿತಿ ಆಧರಿಸಿ ಕೆಲ ದಿನಗಳ ಹಿಂದಷ್ಟೇ ಪೀಟರ್‌ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದರು.

ಈ ಆರೋಪಿಗಳು ವಿಚಾರಣೆ ವೇಳೆ ಮುರಳಿ ಬಗ್ಗೆ ಮಾಹಿತಿ ನೀಡಿದ್ದರು. ಅಲ್ಲದೆ, ಹಲಸೂರು, ಕೆ.ಆರ್‌.ಪುರ, ಕೋಲಾರ, ಹೊಸಕೋಟೆ ಕಡೆ ಇರುವ ತನ್ನ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಆತ ವಾಸವಾಗಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು.

ಎಡಗಾಲಿಗೆ ಗುಂಡೇಟು: ಆರೋಪಿಯ ಬೆನ್ನು ಬಿದ್ದ ಇನ್‌ಸ್ಪೆಕ್ಟರ್‌ ಜಿ.ಪಿ.ರಮೇಶ್‌ ನೇತೃತ್ವದ ತಂಡ, ಆರೋಪಿ ಮುರಳಿ ಬುಧವಾರ ತಡರಾತ್ರಿ ನಗರಕ್ಕೆ ಬರುವ ಖಚಿತ ಮಾಹಿತಿ ಸಂಗ್ರಹಿಸಿತ್ತು. ಹೀಗಾಗಿ ಹಳೇ ಬೈಯಪ್ಪನಹಳ್ಳಿ ರೈಲ್ವೆ ಗೇಟ್‌ನಿಂದ ಕತ್ತಾಳಿಪಾಳ್ಯ ಮುಖ್ಯರಸ್ತೆವರೆಗೂ ನಾಕಾಬಂದಿ ಹಾಕಿ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗಿತ್ತು.

ಇದೇ ವೇಳೆ ಗುರುವಾರ ನಸುಕಿನ 3.30ರ ಸುಮಾರಿಗೆ ಕಳವು ಮಾಡಿದ್ದ ದ್ವಿಚಕ್ರವಾಹನವೊಂದರಲ್ಲಿ ಬರುತ್ತಿದ್ದ ಆರೋಪಿ ಮುರಳಿ, ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಮಾರ್ಗಮಧ್ಯೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೂಡಲೇ ಹೆಡ್‌ ಕಾನ್‌ಸ್ಟೆಬಲ್‌ ವಿಜಯ್‌ ಕುಮಾರ್‌ ಆರೋಪಿಯನ್ನು ಹಿಡಿಯಲು ಮುಂದಾಗಿದ್ದಾರೆ.

ಈ ವೇಳೆ ಆರೋಪಿ ತನ್ನ ಬಳಿಯಿದ್ದ ಡ್ರ್ಯಾಗರ್‌ನಿಂದ ವಿಜಯ್‌ಕುಮಾರ್‌ ಕೈಗೆ ಹಲ್ಲೆ ನಡೆಸಿದ್ದಾನೆ. ಆಗ ಇನ್‌ಸ್ಪೆಕ್ಟರ್‌ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೂ ಆರೋಪಿ ಮತ್ತೂಮ್ಮೆ ಹಲ್ಲೆಗೆ ಮುಂದಾದಾಗ, ಆತ್ಮರಕ್ಷಣೆಗಾಗಿ ತಮ್ಮ ಪಿಸ್ತೂಲ್‌ನಿಂದ ಆರೋಪಿಯ ಎಡಗಾಲಿನ ಮಂಡಿಗೆ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಕೃತ್ಯ: ಬಂಧಿತ ಮುರಳಿ ಕಳೆದ 2-3 ವರ್ಷಗಳಿಂದ ಅಪರಾಧ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದು, ತನ್ನದೆ ಆದ ತಂಡ ಕಟ್ಟಿಕೊಂಡು ತಡರಾತ್ರಿ ಒಂಟಿಯಾಗಿ ಓಡಾಡುವ ಸಾರ್ವಜನಿಕರು, ವಾಹನ ಸವಾರರು, ಕ್ಯಾಬ್‌ ಚಾಲಕರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ.

ಒಂದು ವೇಳೆ ವಿರೋಧ ವ್ಯಕ್ತಪಡಿಸಿದರೆ, ನಿರ್ದಾಕ್ಷಿಣ್ಯವಾಗಿ ಹಲ್ಲೆ ಮಾಡುತ್ತಿದ್ದª. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿಯ ವಿರುದ್ಧ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು 30 ದರೋಡೆ ಹಾಗೂ ಇತರೆ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.

ಸಹಚರನ ಮನೆಗೆ ಹೋಗುತ್ತಿದ್ದ: ನಗರದ ಹೊರವಲಯಗಳಲ್ಲಿ ತಲೆಮರೆಸಿಕೊಂಡಿದ್ದ ಮುರಳಿ, ಗುರುವಾರ ನಸುಕಿನ 3.30ರ ಸುಮಾರಿಗೆ ಬೈಯಪ್ಪನಹಳ್ಳಿಯಲ್ಲಿರುವ ತನ್ನ ಸಹಚರ ವಜ್ರೆàಶ್‌ ಮನೆಗೆ ಹೋಗುತ್ತಿದ್ದ. ಈ ಮಾಹಿತಿಯನ್ನು ವಜ್ರೆàಶ್‌ ಮೂಲಕವೇ ಸಂಗ್ರಹಿಸಿದ್ದ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಅಪ್ರಾಪ್ತರ ತಂಡ: ಆರೋಪಿ ಆಗಾಗ ತನ್ನ ತಂಡದ ಸದಸ್ಯರನ್ನು ಬದಲಿಸುತ್ತಿದ್ದು, ಅಪ್ರಾಪ್ತ ಯುವಕರನ್ನೇ ಆಯ್ಕೆ ಮಾಡಿಕೊಂಡು ತಂಡ ಕಟ್ಟಿಕೊಳ್ಳುತ್ತಿದ್ದ. ಬಳಿಕ ಸಾರ್ವಜನಿಕರನ್ನು ದರೋಡೆ ಮಾಡಿ, ಬಂದ ಹಣದಲ್ಲಿ ಆ ಯುವಕರ ಜತೆ ಮೋಜು-ಮಸ್ತಿ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.