ತಡರಾತ್ರಿ ಮಳೆಗೆ ತತ್ತರಿಸಿದ ನಗರ


Team Udayavani, Sep 25, 2018, 12:04 PM IST

tadaratri.jpg

ರಾಜಧಾನಿಯ ಪಶ್ಚಿಮ ಹಾಗೂ ದಕ್ಷಿಣ ಭಾಗದ ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ಆರಮಭವಾಗಿ, ಸೋಮವಾರ ಮುಂಜಾನೆವರೆಗೂ ಸುರಿದ ಮಳೆ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಧಾರಾ ಕಾರ ಮಳೆ ಪರಿಣಾಮ ಈ ಭಾಗದ ಹಲವು ಕೆರೆಗಳು ತುಂಬಿ ಕೋಡಿ ಹರಿದಿದ್ದು, ಸಾಕಷ್ಟು ಬಡಾವಣೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿತ್ತು. ಜತೆಗೆ ರಸ್ತೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಬೆಳಗ್ಗೆಯೇ ವಾಹನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಬೆಂಗಳೂರು: ಶಾಲೆ, ಕಾಲೇಜು, ಕಚೇರಿಗೆ ಹೋಗುವ ಬದಲಿಗೆ ಮನೆಗೆ ನುಗ್ಗಿದ್ದ ನೀರು ಹೊರ ಹಾಕುತ್ತಿದ್ದ ಕುಟುಂಬ ಸದಸ್ಯರು, ಅಡಿಗಟ್ಟಲೇ ನೀರು ನಿಂತು ಜಲಾವೃತವಾದ ಬಡಾವಣೆಗಳು. ದಿನವಿಡೀ ಉಕ್ಕಿ ಹರಿದ ಮ್ಯಾನ್‌ಹೋಲ್‌ಗ‌ಳು. ಕೆಸರು ಗದ್ದೆಯಂತಾದ ರಸ್ತೆಗಳು. ಕೆರೆಗಳಂತಾದ ಸುರಂಗ ಮಾರ್ಗಗಳು…

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ಕಂಡುಬಂದ ದೃಶ್ಯಗಳಿವು. ಭಾನುವಾರ ತಡರಾತ್ರಿಯಿಂದ ಬೆಳಗ್ಗೆವರೆಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಹಲವು ಕೆರೆಗಳು ಕೋಡಿ ಒಡೆದು ಬಡಾವಣೆಗಳತ್ತ ನೀರು ನುಗ್ಗಿದರೆ, ರಾಜಕಾಲುವೆಗಳು ಉಕ್ಕಿ ಹರಿದ ಪರಿಣಾಮ ಹಲವು ಬಡಾವಣೆಗಳು ಜಲಾವೃತವಾದವು.

ಮನೆಗಳು, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಯಿತು. ಮಳೆಗೆ ವಿವಿಧೆಡೆ ಹತ್ತಾರು ಮರಗಳು ಧರೆಗುರುಳಿದರೆ, ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಜನ ಪರದಾಡುವಂತಾಯಿತು.

ನಗರದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಗಾಳಿ ಸಹಿತ ಭಾರಿ ಮಳೆ ಸುರಿದ ಪರಿಣಾಮ ಅಂಜನಾಪುರ, ಗೊಟ್ಟಿಗೆರೆ, ಉತ್ತರಹಳ್ಳಿ, ಹುಳಿಮಾವು, ಕಾಳೇನ ಅಗ್ರಹಾರ, ಎಂಎಲ್‌ಎ ಬಡಾವಣೆ, ಜೆ.ಪಿ.ನಗರ, ಎಚ್‌ಎಸ್‌ಆರ್‌ ಬಡಾವಣೆ, ಕೋರಮಂಗಲ, ಸಿಲ್ಕ್ ಬೋರ್ಡ್‌ ಜಂಕ್ಷನ್‌, ಕೋಡಿ ಚಿಕ್ಕನಹಳ್ಳಿ, ಬಿಳೇಕಹಳ್ಳಿ ಸೇರಿದಂತೆ ಪ್ರಮುಖ ಬಡಾವಣೆಗಳ ಹಲವು ಭಾಗಗಳು ಬಹುತೇಕ ಜಲಾವೃತಗೊಂಡಿದ್ದವು. ಜತೆಗೆ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸಿದರು.

ಮತ್ತೆ ಕೋಡಿಚಿಕ್ಕನಹಳ್ಳಿ ಜಲಾವೃತ: 2016ರಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ್ದ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿಯಲ್ಲಿ ಮಳೆ ಮತ್ತೆ ಅವಾಂತರಗಳನ್ನು ಸೃಷ್ಟಿಸಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಕೋಡಿಚಿಕ್ಕನಹಳ್ಳಿಯ ಅನೇಕ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿತ್ತು. ಆಹಾರ ಪದಾರ್ಥ ಸೇರಿದಂತೆ ಗೃಹ ಬಳಕೆ ವಸ್ತುಗಳೆಲ್ಲಾ ನೀರಿನಲ್ಲಿ ಮುಳುಗಿ ನಷ್ಟ ಅನುಭವಿಸುವಂತಾಗಿತ್ತು.

ಬಿಡಿಎ ಬಡಾವಣೆಗೆ ನುಗ್ಗಿದ ನೀರು: ಹುಳಿಮಾವು ಕೆರೆ ಬಳಿಯ ರಾಜಕಾಲುವೆಯಲ್ಲಿ ಮಳೆ ನೀರಿನ ಹರಿವು ಹೆಚ್ಚಾಗಿ ಉಕ್ಕಿದ್ದರಿಂದ ಸಮೀಪದ ಬಿಡಿಎ ಬಡಾವಣೆಗಳ ರಸ್ತೆಗಳು ಜಲಾವೃತವಾಗಿದ್ದವು. ಧಾರಾಕಾರ ಮಳೆಗೆ ಬೆದರಿದ ನಿವಾಸಿಗಳು ನೆಲಮಹಡಿಯಲ್ಲಿದ್ದ ಅಮೂಲ್ಯ ವಸ್ತುಗಳನ್ನು ಮೊದಲ ಮಹಡಿ, ತಾರಸಿಗೆ ಸಾಗಿಸಿ ಸಂರಕ್ಷಿಸಿಟ್ಟುಕೊಳ್ಳುತ್ತಿದ್ದ ದೃಶ್ಯ ಕಂಡುಬಂತು. ಮಳೆ ತಗ್ಗಿದ ಬಳಿಕ ನೆಲಮಹಡಿಗೆ ತೆರಳಿ ಮನೆಗಳಿಗೆ ನುಗ್ಗಿದ್ದ ನೀರು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಮೋಟಾರು ಸದ್ದು: ಕೋಡಿ ಚಿಕ್ಕನಹಳ್ಳಿ, ಹುಳಿಮಾವು ಬಿಡಿಎ ಬಡಾವಣೆ, ಕಾಳೇನ ಅಗ್ರಹಾರ, ಎಚ್‌ಎಸ್‌ಆರ್‌ ಬಡಾವಣೆ, ಎಂಎಲ್‌ಎ ಬಡಾವಣೆ ಸೇರಿ ಹಲವು ಬಡಾವಣೆಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ಸೋಮವಾರ ಬೆಳಗ್ಗೆ ಜನರೇಟರ್‌ಗಳ ಸದ್ದು ಜೋರಾಗಿ ಕೇಳಿ ಬರುತ್ತಿತ್ತು. ಮನೆ ಒಳ, ಹೊರ ಆವರಣ, ನೀರಿನ ಸಂಪ್‌, ಪಾರ್ಕಿಂಗ್‌ ಸ್ಥಳಕ್ಕೆ ಮಳೆನೀರು, ಒಳಚರಂಡಿ ನೀರು ನುಗ್ಗಿದ್ದರಿಂದ ನಿವಾಸಿಗಳು ಮೋಟಾರು ಬಳಸಿ ನೀರು ಹೊರ ಹಾಕಿ ಸ್ವತ್ಛಗೊಳಿಸುವಂತಾಗಿತ್ತು. 

ತಳಮಹಡಿ ಜಲಾವೃತ: ಭಾನುವಾರ ರಾತ್ರಿಯಿಡೀ ಸುರಿದ ಮಳೆಗೆ ಹಲವು ಬಡಾವಣೆಗಳಲ್ಲಿನ ಅಪಾರ್ಟ್‌ಮೆಂಟ್‌ಗಳ ತಳಮಹಡಿಯಲ್ಲಿ (ಪಾರ್ಕಿಂಗ್‌ ತಾಣ) ಅಡಿಗಟ್ಟಲೇ ನೀರು ನಿಂತಿತ್ತು. ಕೋಡಿಚಿಕ್ಕನಹಳ್ಳಿಯ ಶಿವಗಿರಿ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ನಲ್ಲಿ ಮಳೆನೀರು ಹೋಗಲು ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆಯಾಗಿದ್ದ ಕಾರು, ಬೈಕ್‌ಗಳು ನೀರಿನಲ್ಲಿ ಮುಳುಗಿದ್ದವು.

ಜೆ.ಪಿ.ನಗರದ ಸೌಪರ್ಣಿಕ, ವೇಗಾಸಿಟಿ, 8ನೇ ಘಟ್ಟದ ರಸ್ತೆಯ ಆರ್‌ಜೆಆರ್‌ ಹಾಗೂ ಕೊತ್ತನೂರಿನ ಲೇಕ್‌ ವ್ಯೂ ಬಡಾವಣೆ, ಬನ್ನೇರುಘಟ್ಟ ಮುಖ್ಯರಸ್ತೆಯ ದಾರಾನಿ ಕಂಫ‌ರ್ಟ್ಸ್ ಸೇರಿದಂತೆ ದಕ್ಷಿಣ ಹಾಗೂ ಪಶ್ಚಿಮ ವಲಯದ ಸಾಕಷ್ಟು ಬಡಾವಣೆಗಳ ಅಪಾರ್ಟ್‌ಮೆಂಟ್‌ಗಳ ತಳಮಹಡಿಗಳಲ್ಲಿ ನೀರು ನಿಂತಿದ್ದರಿಂದ ನಿವಾಸಿಗಳು ವಾಹನಗಳನ್ನು ಹೊರತೆಗೆಯಲಾಗದೆ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

ಧರೆಗುರುಳಿದ 60 ವರ್ಷದ ಮರ: ಅಗ್ರಹಾರ ದಾಸರಹಳ್ಳಿಯಲ್ಲಿ ಸುಮಾರು 60 ವರ್ಷದ ಅರಳಿ ಮರವೊಂದು ಭಾನುವಾರ ರಾತ್ರಿ ಧರೆಗುರುಳಿದೆ. ಜಯನಗರ ನಾಲ್ಕನೇ ಮುಖ್ಯರಸ್ತೆ, ಕೊಡವ ಸಮಾಜ ಸುಬ್ಬಯ್ಯ ಬ್ಲಾಕ್‌, ಜ್ಞಾನ ಜ್ಯೋತಿ ನಗರ, ನಾಗರಬಾವಿ ವೃತ್ತ ಹಾಗೂ ವಸಂತನಗರದಲ್ಲಿ ಮರಗಳು ಉರುಳಿ ಬಿದ್ದವು. ಮಳೆಯ ನಡುವೆಯೇ ಮರಗಳನ್ನು ಶೀಘ್ರ ತೆರವುಗೊಳಿಸಲಾಗದ ಹಿನ್ನೆಲೆಯಲ್ಲಿ ಸೋಮವಾರ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಮಣ್ಣು ಕುಸಿತ: ನಾಗವಾರ ಹೊರ ವರ್ತುಲ ರಸ್ತೆಯ ವಿದ್ಯಾಗಿರಿ ಬಡಾವಣೆಯಲ್ಲಿ ಮಳೆಯಿಂದಾಗಿ ಮಣ್ಣು ಕುಸಿತ ಉಂಟಾಗಿದ್ದರಿಂದ ಕೆಲವೆಡೆ ಗೋಡೆಗಳು ಕುಸಿದಿವೆ. ಇದರಿಂದಾಗಿ ಸಮೀಪದ ಜನವಸತಿ ಪ್ರದೇಶಗಳಲ್ಲಿ ಆತಂಕ ಎದುರಾಗಿದೆ. ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಜಕಾಲುವೆ ಒತ್ತುವರಿ ಅವಾಂತರ: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಕೋಡಿಚಿಕ್ಕನಹಳ್ಳಿಯಲ್ಲಿ ಈ ವರ್ಷವೂ ಮನೆಗಳಿಗೆ ನೀರು ನುಗ್ಗಿ, ಜನ ಪರದಾಡುವಂತಾಗಿದೆ. 2016ರಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇದೇ ಭಾಗದಿಂದ ಆರಂಭಿಸಿದರೂ, ಪೂರ್ಣಗೊಳಿಸದ ಪರಿಣಾಮ ರಾಜಕಾಲುವೆ ನೀರು ಬಡಾವಣೆಗಳಿಗೆ ನುಗ್ಗಿ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ.

ಪಾಲಿಕೆ ಹಿಂದೆ, ಅಗ್ನಿಶಾಮಕ ಮುಂದು: ಮಳೆಯಿಂದ ಬಹುಳಷ್ಟು ಬಡಾವಣೆಗಳು ಜಲಾವೃತಗೊಂಡು ಜನರು ತೊಂದರೆ ಅನುಭವಿಸುತ್ತಿರುವ ಬಗ್ಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಾಯಕ್ಕೆ ಧಾವಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಇನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೋಡಿಚಿಕ್ಕನಹಳ್ಳಿಯ ಬಡಾವಣೆಗಳಲ್ಲಿ ಸೋಮವಾರ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿದ್ದು, ಮಳೆನೀರನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಕಂಡುಬಂತು.

ಕೋಡಿ ಬಿದ್ದ ಅಂಜನಾಪುರ ಕೆರೆ: ಭಾರಿ ಮಳೆಯಿಂದಾಗಿ ಅಂಜನಾಪುರ ಕೆರೆ ತುಂಬಿ ಕೋಡಿ ಹರಿದಿದೆ. ಕೆರೆಯಲ್ಲಿ ಕಳೆದ ಕೆಲವು ತಿಂಗಳಿಂದ ಹೂಳೆತ್ತುವ ಕಾಮಗಾರಿ ನಡೆಸುತ್ತಿದ್ದರಿಂದ ಕೆರೆ ಬಹುತೇಕ ಖಾಲಿಯಾಗಿತ್ತು. ಆದರೆ, ಭಾನುವಾರ ಇಡೀರಾತ್ರಿ ಸುರಿದ ಮಳೆಗೆ ಅಂಜನಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದು ಹೊರಕ್ಕೆ ಹರಿಯಿತು. ಅಂಜನಾಪುರ ವಾರ್ಡ್‌ನಲ್ಲಿ 206 ಮಿ.ಮೀ. ಮಳೆಯಾಗಿದ್ದು, ಬ್ಯಾಂಕ್‌ ಕಾಲೋನಿ, ಹರಿನಗರ ಹಾಗೂ ರಾಯಲ್‌ ಉದ್ಯಾನ ಸುತ್ತಮುತ್ತಲಿರುವ ಮನೆಗಳಿಗೆ ನೀರು ನುಗ್ಗಿದ್ದ ಬಗ್ಗೆ ವರದಿಯಾಗಿದೆ.

ದೇವಾಲಯಕ್ಕೆ ನುಗ್ಗಿದ ಮಳೆನೀರು: ಕಳೆದ ಬಾರಿ ಹೊಸಕೆರೆಹಳ್ಳಿಯ ದತ್ತಾತ್ರೇಯ ದೇವಸ್ಥಾನ ಬಳಿಯ ರಾಜಕಾಲುವೆ ಹಳೆಯ ತಡೆಗೋಡೆ ಕುಸಿದಿದ್ದರಿಂದ ದೇವಾಲಯಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ ತಡೆಗೋಡೆಯನ್ನು ಎತ್ತರಿಸಿತ್ತು.

ಆದರೂ ಭಾನುವಾರ ಕಾಲುವೆಯಲ್ಲಿ ಮಳೆ ನೀರು, ಕೊಳಚೆ ನೀರು ಪ್ರವಾಹೋಪಾದಿಯಲ್ಲಿ ಹರಿದಿದ್ದರಿಂದ ದತ್ತ ಪೀಠದಲ್ಲಿ ವೇದಾಭ್ಯಾಸ ಮಾಡುತ್ತಿರುವ ಸುಮಾರು 20 ಮಕ್ಕಳಿಗೆ ರಾತ್ರಿಯಿಡೀ ನಿದ್ದೆಯಿಲ್ಲದಂತಾಗಿತ್ತು. ಘಟನೆಯ ಕುರಿತು ಮಾಹಿತಿ ನೀಡಿದರೂ ಪಾಲಿಕೆಯ ಅಧಿಕಾರಿಗಳು ಸ್ಪಂದಿಸಿದ ಹಿನ್ನೆಲೆಯಲ್ಲಿ ಬೆಳಗ್ಗೆ ಮಕ್ಕಳೇ ದೇವಾಲಯದ ಆವರಣದಲ್ಲಿದ್ದ ನೀರನ್ನು ಹೊರಕ್ಕೆ ಹಾಕಿ ಸ್ವತ್ಛಗೊಳಿಸಿದರು.

ಎರಡು ವರ್ಷಗಳಿಂದ ಸಾಮಾನ್ಯ ಮಳೆಗೂ ಬಡಾವಣೆಗಳಿಗೆ ನೀರು ನುಗ್ಗುತ್ತಿದೆ. ಈ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಭಯದಲ್ಲಿ ಜೀವನ ನಡೆಸುವ ಪರಿಸ್ಥಿತಿಯಿದೆ.
-ರಮೇಶ್‌, ಕೋಡಿಚಿಕ್ಕನಹಳ್ಳಿ 

ಭಾನುವಾರ ತಡರಾತ್ರಿ ಭಾರಿ ಮಳೆ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನೀರು ಪಾಲಾಗಿವೆ. ಘಟನೆಯ ಕುರಿತು ಅಧಿಕಾರಿಗಳಿಗೆ ತಿಳಿಸಿದರೂ ನೆರವಿಗೆ ಧಾವಿಸಿಲ್ಲ. 
-ನಾಗರಾಜ್‌, ಕೆಂಗೇರಿ

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.